Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭಾರತ ಜನಗಣತಿ-2027 : ಏಪ್ರಿಲ್ 15 ರವರೆಗೆ ಆನ್‍ಲೈನ್ ಮೂಲಕ ಸ್ವಯಂ ಗಣತಿಗೆ ಅವಕಾಶ

---Advertisement---

ಚಿತ್ರದುರ್ಗ. ಏ.9: ಭಾರತ ಜನಗಣತಿ ನಿರ್ದೇಶನಾಲಯದ ಸೂಚನೆಯಂತೆ ಭಾರತದ ಜನಗಣತಿ-2027ರ ಕಾರ್ಯಕ್ಕೆ ಸಂಬಂಧಿಸಿದಂತೆ ‘ಸ್ವಯಂ ಗಣತಿ’ ಪ್ರಕ್ರಿಯೆ ಆರಂಭವಾಗಿದ್ದು, ಸಾರ್ವಜನಿಕರು ಆನ್‍ಲೈನ್ ಮೂಲಕ ಮಾಹಿತಿ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

2026ರ ಏಪ್ರಿಲ್ 01 ರಿಂದ ಸ್ವಯಂ ಗಣತಿ ಕಾರ್ಯ ಪ್ರಾರಂಭವಾಗಿದ್ದು, ಏಪ್ರಿಲ್ 15 ರವರೆಗೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದ್ದು, ಸ್ವಯಂ ಪ್ರೇರಿತರಾಗಿ ಇಲಾಖೆಯ ಅಧಿಕೃತ ಜಾಲತಾಣ  www.se.census.gov.in  ಗೆ ಭೇಟಿ ನೀಡಿ ಕೈಗೊಳ್ಳಬಹುದಾಗಿದೆ.

 

ಸ್ವಯಂ ಗಣತಿ ಸಾರ್ವಜನಿಕರಿಗೆ ಸುರಕ್ಷಿತ ಆನ್‍ಲೈನ್ ಪೋರ್ಟಲ್ ಮೂಲಕ ತಮ್ಮದೇ ಆದ ಮಾಹಿತಿಯನ್ನು ಭರ್ತಿ ಮಾಡಲು ಮತ್ತು ಸಲ್ಲಿಸಲು ಅನುಮತಿ ಮಾಡಿಕೊಡುತ್ತದೆ. ಈ ಪ್ರಕ್ರಿಯೆ ಮೂಲಕ ಸಿಗುವ ‘ರೆಫರೆನ್ಸ್ ಐಡಿ’ (Reference ID)  ಅನ್ನು ನಾಗರಿಕರು ಕಡ್ಡಾಯವಾಗಿ ಸಂರಕ್ಷಿಸಿಟ್ಟುಕೊಳ್ಳಬೇಕು. 2026ರ ಏಪ್ರಿಲ್ 16 ರಿಂದ ಮೇ 15 ರವರೆಗೆ ನಿಗಧಿಪಡಿಸಲಾದ ಕ್ಷೇತ್ರ ಮಾಹಿತಿಗಳ ಸಂಗ್ರಹಣೆಯ ಸಮಯದಲ್ಲಿ ಮೌಲ್ಯೀಕರಣಕ್ಕಾಗಿ ಗಣತಿದಾರರು ನಿಮ್ಮ ಕುಟುಂಬಕ್ಕೆ ಭೇಟಿ ನೀಡಿದಾಗ ರೆಫರೆನ್ಸ್ ಐಡಿ ನೀಡಿ ಜನಗಣತಿ ಕಾರ್ಯದಲ್ಲಿ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮನವಿ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now