Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು : ಚಾಂಪಿಯನ್ಸ್ ಟ್ರೋಫಿ ಮುಡಿಗೇರಿಸಿಕೊಂಡ ಭಾರತ

---Advertisement---

 

ಸುದ್ದಿಒನ್

ಚಾಂಪಿಯನ್ಸ್ ಟ್ರೋಫಿ ಫೈನಲ್​​ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಭಾರತ ರೋಚಕ ಜಯ ಸಾಧಿಸುವ ಮೂಲಕ ಮೂರನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಇಂದು ದುಬೈನಲ್ಲಿ ನಡೆದ ಫೈನಲ್​​ನಲ್ಲಿ ಟೀಮ್ ಇಂಡಿಯಾ 4 ವಿಕೆಟ್​​ಗಳಿಂದ ಭರ್ಜರಿ ಗೆಲುವು ಸಾಧಿಸಿ ಹೊಸ ಇತಿಹಾಸ ಸೃಷ್ಟಿಸಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ 3 ಟ್ರೋಫಿ ಗೆದ್ದ (2002, 2013, 2025) ಏಕೈಕ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.

ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ನೀಡಿದ್ದ 252 ರನ್​​ಗಗಳ ಗುರಿಯನ್ನ ಬೆನ್ನಟ್ಟಿದ ಟೀಮ್ ಇಂಡಿಯಾ 49 ಓವರ್​​ಗಳಲ್ಲಿ 6 ವಿಕೆಟ್ ಕಳೆದುಕೊಂಡು ಗುರಿ ತಲುಪಿ 12 ವರ್ಷಗಳ ಬಳಿಕ (2013ರ ನಂತರ) ಮತ್ತೆ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಂಡಿದೆ. ರೋಹಿತ್ ಶರ್ಮಾ 76 ರನ್ ಗಳಿಸುವ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.  ಶ್ರೇಯಸ್ ಅಯ್ಯರ್ 48 ರನ್​​ಗಳಿಸಿ ಗೆಲುವಿನ ರೂವಾರಿಗಳಾದರು.

ಅಕ್ಷರ್ ಪಟೇಲ್ 29 ರನ್ ಗಳಿಸಿ ಔಟಾದರೆ, ಶ್ರೇಯಸ್ ಅಯ್ಯರ್ 48 ರನ್ ಗಳಿಸಿ ಔಟಾದರು. ಸ್ಯಾಂಟ್ನರ್ ಇಬ್ಬರನ್ನೂ ಔಟ್ ಮಾಡಿದರು. ನಾಯಕ ರೋಹಿತ್ ಶರ್ಮಾ 76 ರನ್ ಮತ್ತು ಶುಭಮನ್ ಗಿಲ್ 31 ರನ್ ಗಳಿಸಿದರು. ಇವರಿಬ್ಬರ ನಡುವೆ 105 ರನ್‌ಗಳ ಜೊತೆಯಾಟ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿತು. ವಿರಾಟ್ ಕೊಹ್ಲಿ ಕೇವಲ ಒಂದು ರನ್ ಗಳಿಸಲು ಮಾತ್ರ ಸಾಧ್ಯವಾಯಿತು. ನ್ಯೂಜಿಲೆಂಡ್ ಪರ ಮಿಚೆಲ್ ಸ್ಯಾಂಟ್ನರ್ 2 ವಿಕೆಟ್ ಪಡೆದರು. ರಾಚಿನ್ ರವೀಂದ್ರ ಮತ್ತು ಮೈಕೆಲ್ ಬ್ರೇಸ್‌ವೆಲ್ ತಲಾ ಒಂದು ವಿಕೆಟ್ ಪಡೆದರು.

ಕಳೆದ 9 ತಿಂಗಳಲ್ಲಿ ನಾಯಕನಾಗಿ ರೋಹಿತ್ ಶರ್ಮಾ ಗೆದ್ದ ಎರಡನೇ ಐಸಿಸಿ ಪ್ರಶಸ್ತಿ ಇದು. ಜೂನ್ 29 ರಂದು ನಡೆದ ಟಿ20 ವಿಶ್ವಕಪ್ ಅನ್ನು ಅವರು ಗೆದ್ದಿದ್ದರು. 25 ವರ್ಷಗಳ ಹಿಂದೆ ಇದೇ ಟೂರ್ನಿಯ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಅನುಭವಿಸಿದ ಸೋಲಿಗೆ ಟೀಮ್ ಇಂಡಿಯಾ ಇಂದು ಸೇಡು ತೀರಿಸಿಕೊಂಡಿತು. ಇದರೊಂದಿಗೆ, ಭಾರತವು ಈ ಟ್ರೋಫಿಯಲ್ಲಿ ಗರಿಷ್ಠ ಸಂಖ್ಯೆಯ (ಮೂರು ಬಾರಿ) ಗೆಲುವುಗಳ ದಾಖಲೆಯನ್ನು ಸೃಷ್ಟಿಸಿತು.

 

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...