Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ನಾಳೆ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ : ಪ್ರಮುಖರು ಭಾಗಿ

Facebook
Twitter
Telegram
WhatsApp

 

ಚಿತ್ರದುರ್ಗ. ನ.14: ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿಯಮಿತ, ಕರ್ನಾಟಕ ರಾಜ್ಯ ಸಹಕಾರ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳಿ, ಕರ್ನಾಟಕ ರಾಜ್ಯ ಸಹಕಾರ ಕುಕ್ಕುಟ ಮಹಾಮಂಡಳಿ, ಕರ್ನಾಟಕ ರಾಜ್ಯ ನೂಲಿನ ಗಿರಣಿಗಳ ಮಹಾಮಂಡಳಿ, ಚಿತ್ರದುರ್ಗ ಜಿಲ್ಲಾ ನೂಲಿನ ಗಿರಣಿಗಳ ಮಹಾಮಂಡಳಿ, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಒಕ್ಕೂಟ, ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಾಗೂ ಜಿಲ್ಲೆಯ ಎಲ್ಲಾ ರೀತಿಯ ಸಹಕಾರಿ ಸಂಸ್ಥೆಗಳು, ಬ್ಯಾಂಕ್‌ಗಳು ಸೌಹಾರ್ದ ಸಹಕಾರಿಗಳು ಮತ್ತು ಸಹಕಾರ ಇಲಾಖೆ ಸಹಯೋಗದಲ್ಲಿ ಇದೇ ನ.15ರಂದು ಬೆಳಿಗ್ಗೆ 11 ಗಂಟೆಗೆ ನಗರದ ಶ್ರೀರಾಮ ಕಲ್ಯಾಣ ಮಂಟಪದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024 ಕಾರ್ಯಕ್ರಮ ಆಯೋಜಿಸಲಾಗಿದೆ.

ಸಹಕಾರ ಸಚಿವ ಕೆ.ಎನ್.ರಾಜಣ್ಣ ಕಾರ್ಯಕ್ರಮ ಉದ್ಘಾಟಿಸುವರು. ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ, ಮತ್ತು ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಡಿ.ಸುಧಾಕರ್ ಸಹಕಾರ ಧ್ವಜಾರೋಹಣ ಮಾಡಲಿದ್ದಾರೆ. ಸಂಸದ ಗೋವಿಂದ ಎಂ ಕಾರಜೋಳ ವಸ್ತು ಪ್ರದರ್ಶನ ಉದ್ಘಾಟಿಸುವರು. ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ಅಧ್ಯಕ್ಷ ಜಿ.ಟಿ.ದೇವೇಗೌಡ ಸಹಕಾರ ವಾರ ಪತ್ರಿಕೆ ವಿಶೇಷ ಸಂಚಿಕೆ ಬಿಡುಗಡೆ ಮಾಡುವರು. ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಅಧ್ಯಕ್ಷತೆ ವಹಿಸುವರು.

ಕಾರ್ಯಕ್ರಮದಲ್ಲಿ ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಅಧ್ಯಕ್ಷ ಹಾಗೂ  ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕ ಅಭಿವೃದ್ಧಿ ನಿಗಮದ ಅಧ್ಯಕ್ಷ

ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಹಾಗೂ ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ಕರ್ನಾಟಕ ಸಹಕಾರ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳಿ ಅಧ್ಯಕ್ಷ ವೆಂಕಟರಾವ್ ನಾಡಗೌಡ ಸೇರಿದಂತೆ ಸಹಕಾರ ಮಂಡಳಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರು, ವಿವಿಧ ಮಹಾಮಂಡಳಿಗಳು. ಜಿಲ್ಲಾ ಒಕ್ಕೂಟಗಳು ಮತ್ತು ಎಲ್ಲಾ ಸಹಕಾರ ಸಂಘ- ಸಂಸ್ಥೆಗಳು ಹಾಗೂ ಸಹಕಾರ ಇಲಾಖೆ ಅಧಿಕಾರಿ, ಸಿಬ್ಬಂದಿ ವರ್ಗದವರು ಭಾಗವಹಿಸುವರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರವಿ ಬೆಳಗೆರೆ ವ್ಯಕ್ತಿಯಲ್ಲ, ಶಕ್ತಿ : ಕೊಂಡ್ಲಹಳ್ಳಿ ಮಹಾದೇವ

ಸುದ್ದಿಒನ್, ಮೊಳಕಾಲ್ಮೂರು, ನವೆಂಬರ್. 14 : ತನ್ನ ಮೊನಚು ಬರವಣಿಗೆ,ಮಾತಿನ ಮೂಲಕ ನಾಡಿಗೇ ಪರಿಚಯವಾಗಿದ್ದ ‘ಅಕ್ಷರ ಬ್ರಹ್ಮ’ ರವಿ ಬೆಳಗೆರೆ ಅವರು ಕನ್ನಡ ಪತ್ರಿಕೋದ್ಯಮ ಕಂಡ ‘ಎಂದೂ ಮರೆಯದ ಮಾಣಿಕ್ಯ’ ಎಂದು ಪತ್ರಕರ್ತ ಕೊಂಡ್ಲಹಳ್ಳಿ

ಉತ್ತಮ ಜೀವನಶೈಲಿಯಿಂದ ಮಧುಮೇಹ ನಿಯಂತ್ರಣ : ಡಾ. ಸತೀಶ್

  ಸುದ್ದಿಒನ್, ಚಿತ್ರದುರ್ಗ:ನ. 14 : ಮಧುಮೇಹ ಅಂದರೆ ಭಯ ಪಡಬೇಕಿಲ್ಲ. ಅದು ಜೀವನದ ಕೊನೆಯೂ ಅಲ್ಲ. ಬದುಕಿಯೂ ಬದುಕದಂತೆ ಜೀವಿಸುವುದು ಸರಿಯಲ್ಲ. ಮಧುಮೇಹಿಗಳು ಜೀವನವನ್ನು ನೋಡುವ ದೃಷ್ಟಿಕೋನವನ್ನೂ ಬದಲಾಯಿಸಿಕೊಳ್ಳಬೇಕು. ನಾನು ಮಧುಮೇಹಿ ಎಂಬ

ವಕ್ಫ್ ವಿವಾದ : ಜಮೀರ್‌ ಮೇಲೆ ರೇಣುಕಾಚಾರ್ಯ ಕಿಡಿ..!

ದಾವಣಗೆರೆ: ರಾಜ್ಯದೆಲ್ಲೆಡೆ ವಕ್ಫ್ ವಿವಾದ ಜೋರಾಗಿದೆ. ರೈತರ ಜಮೀನು, ದೇವಸ್ಥಾನಗಳ ಪಹಣಿಗಳೆಲ್ಲಾ ವಕ್ಫ್ ಹೆಸರು ಸೇರ್ಪಡೆಯಾಗಿ ವಿವಾದ ಹುಟ್ಟು ಹಾಕಿದೆ. ಈ ಸಂಬಂಧ ಕೋಪಗೊಂಡ ರೇಣುಕಾಚಾರ್ಯ, ಇದೀಗ ಸಚಿವ ಜಮೀರ್ ಅಹ್ಮದ್ ವಿರುದ್ಧ ಕೆಂಡದಂತ

error: Content is protected !!