Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ಏಕದಿನ ತಂಡ ಪ್ರಕಟ; ರೋಹಿತ್, ಕೊಹ್ಲಿ ವಾಪಸ್; ಹಾರ್ದಿಕ್ ಪಾಂಡ್ಯ ಔಟ್!

---Advertisement---

ದೆಹಲಿ.ಜೂನ್.21: ಮುಂಬರುವ 2026ರ ಇಂಗ್ಲೆಂಡ್ ಪ್ರವಾಸದ ಏಕದಿನ ಸರಣಿಗಾಗಿ ಬಿಸಿಸಿಐ (BCCI) ಭಾನುವಾರ ಭಾರತ ತಂಡವನ್ನು ಪ್ರಕಟಿಸಿದೆ. ಬ್ಯಾಟರ್ ಶುಬ್ಮನ್ ಗಿಲ್ ಅವರಿಗೆ ತಂಡದ ನಾಯಕತ್ವದ ಜವಾಬ್ದಾರಿ ವಹಿಸಲಾಗಿದ್ದು, ಶ್ರೇಯಸ್ ಅಯ್ಯರ್ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.

ಅತ್ಯಂತ ಪ್ರಮುಖವಾಗಿ, ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರ ಆಯ್ಕೆಯು ಸಂಪೂರ್ಣವಾಗಿ ಅವರ ಫಿಟ್ನೆಸ್ ಕ್ಲಿಯರೆನ್ಸ್ (Fitness Clearance) ಮೇಲೆ ಅವಲಂಬಿತವಾಗಿದೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ. ಹಿರಿಯ ಆಟಗಾರ ರೋಹಿತ್ ಶರ್ಮಾ ಮತ್ತು ವೇಗಿ ಜಸ್‌ಪ್ರಿತ್ ಬುಮ್ರಾ ತಂಡದಲ್ಲಿದ್ದಾರೆ. ವಿಕೆಟ್ ಕೀಪರ್‌ಗಳಾಗಿ ಕೆ.ಎಲ್. ರಾಹುಲ್ ಮತ್ತು ಇಶಾನ್ ಕಿಶನ್ ಸ್ಥಾನ ಪಡೆದಿದ್ದಾರೆ. ಮತ್ತೊಂದೆಡೆ, ಮುಂಬೈ ಇಂಡಿಯನ್ಸ್ ಪರ ಐಪಿಎಲ್ ಆಡುವಾಗ ಗಾಯಗೊಂಡಿದ್ದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಇನ್ನೂ ಸಂಪೂರ್ಣ ಫಿಟ್‌ ನೆಸ್ ಸಾಧಿಸದ ಕಾರಣ ಈ ಪ್ರವಾಸದಿಂದ ಹೊರಬಿದ್ದಿದ್ದಾರೆ.

ಭಾರತ ಏಕದಿನ ತಂಡ ಇಂತಿದೆ:
ಶುಬ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್),ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಕುಲದೀಪ್ ಯಾದವ್, ಜಸ್‌ಪ್ರಿತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ಅರ್ಶ್‌ದೀಪ್ ಸಿಂಗ್, ಗುರ್ನೂರ್ ಬ್ರಾರ್

Join WhatsApp

Join Now

Join Telegram

Join Now