ಭಾರತ vs ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ ಇಂದು

2 Min Read

ಸುದ್ದಿಒನ್ :  ಏಕದಿನ ವಿಶ್ವಕಪ್ ಕ್ರಿಕೆಟ್ ವೇಳಾಪಟ್ಟಿ ಬಿಡುಗಡೆಯಾದಾಗಿನಿಂದಲೂ ಎಲ್ಲ ಕ್ರೀಡಾಭಿಮಾನಿಗಳಿಗೂ ಒಂದೇ ಕಾತರ. ಭಾರತ-ಪಾಕಿಸ್ತಾನ ಪಂದ್ಯ ಯಾವಾಗ ? ಇಂದು ಆ ಸಮಯ ಈಗ ಸಮಯ ಬಂದಿದೆ. ಇಡೀ ಕ್ರಿಕೆಟ್ ಜಗತ್ತು ಕಾತರದಿಂದ ಕಾಯುತ್ತಿದ್ದ ದಾಯಾದಿಗಳ ಕಾದಾಟದ ದಿನ ಬಂದಿದೆ. 2023ರಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ಭಾರತ-ಪಾಕಿಸ್ತಾನ ತಂಡಗಳು ಇಂದು ಮುಖಾಮುಖಿಯಾಗಲಿವೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದೆ. ಇದು ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಿದೆ. ಸುಮಾರು 1 ಲಕ್ಷದ 30 ಸಾವಿರ ಅಭಿಮಾನಿಗಳ ಹರ್ಷೋದ್ಗಾರದ ನಡುವೆ ಈ ಪಂದ್ಯ ನಡೆಯಲಿದೆ. ಎಲ್ಲಾ ಪಂದ್ಯದ ಟಿಕೆಟ್‌ಗಳು ಈಗಾಗಲೇ ಹಾಟ್ ಕೇಕ್‌ನಂತೆ ಮಾರಾಟವಾಗಿವೆ. ಈ ಪಂದ್ಯದ ಕ್ರೇಜ್ ಗಾಗಿ‌ ಕೊಹ್ಲಿ, ಸೂರ್ಯಕುಮಾರ್ ಯಾದವ್ ರಂತಹ ಆಟಗಾರರು ಸಾಮಾಜಿಕ ಜಾಲತಾಣಗಳಲ್ಲಿ ನಮಗೆ ಟಿಕೆಟ್ ಕೇಳಬೇಡಿ ಎಂದು ವಿನಂತಿಸುತ್ತಿದ್ದಾರೆ.

ಇದುವರೆಗೆ ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಭಾರತ-ಪಾಕಿಸ್ತಾನ ತಂಡಗಳು 7 ಬಾರಿ ಮುಖಾಮುಖಿಯಾಗಿವೆ.  ಎಲ್ಲದರಲ್ಲೂ ಟೀಂ ಇಂಡಿಯಾ ಮೇಲುಗೈ ಸಾಧಿಸಿದೆ. ಇಂದಿನ ಪಂದ್ಯದಲ್ಲೂ ಅದೇ ವರಸೆಯನ್ನು ಮುಂದುವರಿಸಲು ರೋಹಿತ್ ನೇತೃತ್ವದ ಟೀಂ ಇಂಡಿಯಾ ಉತ್ಸುಕವಾಗಿದೆ.  ಆಟಗಾರರ ಫಾರ್ಮ್ ಆದ ತವರು ನೆಲದಲ್ಲಿ ಪಂದ್ಯ ನಡೆಯುತ್ತಿದೆ. ಹಾಗೆಂದು ಪಾಕಿಸ್ತಾನವನ್ನು ಕಡಿಮೆ ಅಂದಾಜು ಮಾಡುವಂತಿಲ್ಲ. ಉಭಯ ತಂಡಗಳೂ ಟೂರ್ನಿಯಲ್ಲಿ ಈಗಾಗಲೇ ಆಡಿದ ಎರಡೂ ಪಂದ್ಯಗಳನ್ನು ತಂಡ ಗೆದ್ದು ಮುನ್ನಡೆಯಲ್ಲಿವೆ.

ವಿಶೇಷವಾಗಿ ಶಾಹೀನ್ ಶಾ ಆಫ್ರಿದಿ ಮತ್ತು ಹ್ಯಾರಿಸ್ ರವೂಫ್ ಅವರಂತಹ ವೇಗಿಗಳು ಯಾವುದೇ ಕ್ಷಣದಲ್ಲಿ ಪಂದ್ಯವನ್ನು ಹತೋಟಿಗೆ ತರಬಲ್ಲರು. ಬ್ಯಾಟಿಂಗ್ ನಲ್ಲಿ ಉತ್ತಮ ಫಾರ್ಮ್ ನಲ್ಲಿರುವ ಮೊಹಮ್ಮದ್ ರಿಜ್ವಾನ್ ಅವರನ್ನು ಭಾರತೀಯ ಬೌಲರ್ ಗಳು ಕಟ್ಟಿಹಾಕಬೇಕಿದೆ. ಈ ಪಂದ್ಯದ ಮೂಲಕ ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ ಶುಭಮನ್ ಗಿಲ್ ರೀ ಎಂಟ್ರಿ ಕೊಡುವ ಸಾಧ್ಯತೆ ಇದೆ. ಜ್ವರದಿಂದಾಗಿ ಅವರು 2023 ರ ODI ವಿಶ್ವಕಪ್‌ನ ಮೊದಲ ಎರಡು ಪಂದ್ಯಗಳಿಂದ ದೂರ ಉಳಿದಿದ್ದರು.

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸ್ಪಿನ್ನರ್‌ಗಳು ಹೆಚ್ಚು ಪ್ರಭಾವ ಬೀರುವ ಸಾಧ್ಯತೆಯಿದೆ ಎಂಬ ನಿರೀಕ್ಷೆಗಳಿವೆ. ಈ ಹಿನ್ನೆಲೆಯಲ್ಲಿ ಭಾರತ ಮೂವರು ಸ್ಪಿನ್ನರ್‌ಗಳನ್ನು (ಜಡೇಜಾ, ಅಶ್ವಿನ್, ಕುಲದೀಪ್) ಕಣಕ್ಕಿಳಿಸುವ ಸಾಧ್ಯತೆಯಿದೆ.

ತಂಡಗಳ ವಿವಿರ :
ಭಾರತ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ / ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ / ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಸಿಮ್ರಾಜ್, ಮೊಹಮ್ಮದ್ ಬುಮ್ರಾ

ಪಾಕಿಸ್ತಾನ: ಅಬ್ದುಲ್ಲಾ ಶಫಿಕಿ, ಇಮಾಮ್-ಉಲ್-ಹಕ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ಹಸನ್ ಅಲಿ

ಪಂದ್ಯ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ.

Share This Article
Leave a Comment

Leave a Reply

Your email address will not be published. Required fields are marked *