ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ಅಗ್ನಿವೀರ್ವಾಯು ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಸಲ್ಲಿಸಬಹುದು. ನವೆಂಬರ್ 23ಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಗ್ನಿವೀರ್ ವಾಯು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ, ಡಿಪ್ಲೋಮಾ ಪೂರ್ಣಗೊಳಿಸಿರಬೇಕು. ಭಾರತೀಯ ವಾಯುಪಡೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಗ್ನಿವೀರ್ ವಾಯು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 21 ವರ್ಷ ಮೀರಿರಬಾರದು. ಇನ್ನು ಎಲ್ಲಾ ಅಭ್ಯರ್ಥಿಗಳಿಗೂ 250 ರೂಪಾಯಿ ಅರ್ಜಿ ಶುಲ್ಕ ಇರಲಿದೆ. ಮಾಸಿಕವಾಗಿ 30 ಸಾವಿರದವರೆಗೂ ವೇತನ ಸಿಗಲಿದೆ.
ದೈಹಿಕ ಸಾಮರ್ಥ್ಯ ಪರೀಕ್ಷೆ, ಹೊಂದಿಕೊಳ್ಳುವಿಕೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಆನ್ಲೈನ್ ಟೆಸ್ಟ್ ಇರಲಿದೆ. ಅರ್ಜಿ ಸಲ್ಲಿಕೆಗೆ ನವೆಂಬರ್ 7ರಿಂದ ಆರಂಭವಾಗಲಿದ್ದು 23ಕ್ಕೆ ಕೊನೆಯ ದಿನಾಂಕವಾಗಿರಲಿದೆ. ಜನವರಿ 18 ಮತ್ತು 24ಕ್ಕೆ ಆನ್ಲೈನ್ ಪರೀಕ್ಷೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ indianairforce.nic.in ಈ ವೆಬ್ಸೈಟ್ಗೆ ಭೇಟಿ ನೀಡಿ.