ಬ್ರಿಟನ್: ಭಾರತೀಯ ಮೂಲದ ಸಾಹಿಲ್ ಭವ್ನಾನಿ ಎಂಬಾತ ಬ್ರಿಟನ್ ಯೂನಿವರ್ಸಿಟಿಯಲ್ಲಿ ಇಂಜಿನಿಯರಿಂಗ್ ಶಿಕ್ಷಣ ಮಾಡುತ್ತಿದ್ದಾನೆ. ಆದ್ರೆ ಇತ್ತೀಚೆಗೆ ನರ್ಸಿಂಗ್ ಹುಡುಗಿಯೊಬ್ಬಳನ್ನ ಹಿಂಬಾಲಿಸಿದ್ದಾನೆ ಎಂಬ ಆರೋಪದ ಮೇಲೆ ಆತನಿಗೆ ಶಿಕ್ಷೆ ವಿಧಿಸಲಾಗಿದೆ.
ಆಕ್ಫರ್ಡ್ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಹಿಂಬಾಲಿಸಿದ ಆರೋಪ ಹಾಗೂ 100 ಪುಟಗಳ ಬೆದರಿಕೆ ಪತ್ರ ನೀಡಿದ್ದಕ್ಕಾಗಿ ಭವ್ನಾನಿಗೆ ನಾಲ್ಕು ತಿಂಗಳ ಜೈಲು ಶಿಕ್ಷೆ, ಎರಡು ವರ್ಷಗಳ ಅಮಾನತು ಹಾಗೂ ಐದು ವರ್ಷಗಳ ತಡೆಯಾಜ್ಞೆ ಶಿಕ್ಷೆ ವಿಧಿಸಿ, ನ್ಯಾಯಾಲವೂ ಆದೇಶ ಹೊರಡಿಸಿದೆ.
ಈ ಶಿಕ್ಷೆ ಕ್ರಿಮಿನಲ್ ಅಪರಾಧಕ್ಕಾಗಿ ನೀಡಲಾಗಿದ್ದು, ನ್ಯಾಯಾಲಯವು ಆರೋಪಿಗೆ ಪರೀಕ್ಷೆ ಬರೆಯಲು ಅನುಮತಿಸಬೇಕೆ ಎಂದೂ ಚರ್ಚೆ ನಡೆಸಲಾಗಿತ್ತು. ಆಕ್ಸ್ಫರ್ಡ್ ಮೇಲ್ ವರದಿ ಮಾಡಿರುವ ಪ್ರಕಾರ, ಭವ್ನಾನಿಗೆ ಕಳೆದ ತಿಂಗಳೇ ಶಿಕ್ಷೆಯಾಗಬೇಕಿತ್ತು. ಆದರೆ ವಿಶ್ವವಿದ್ಯಾಲಯವು ವಿದ್ಯಾರ್ಥಿಯನ್ನು ಇಂಜಿನಿಯರಿಂಗ್ ಕೋರ್ಸ್ ಮಧ್ಯದಿಂದ ಅಮಾನತು ಮಾಡಬೇಕೆ ಎಂದು ಚರ್ಚೆ ನಡೆಸಿತ್ತು. ಆದ್ದರಿಂದ ಪ್ರಕರಣವನ್ನು ಜನವರಿ 2022ಕ್ಕೆ ಮುಂದೂಡಲಾಗಿತ್ತು. ಆದರೆ ವಿಶ್ವವಿದ್ಯಾಲಯ ಈ ಕುರಿತು ತೀರ್ಮಾನ ತೆಗೆದುಕೊಂಡಿದ್ದರಿಂದ ನ್ಯಾಯಾಲಯ ಶಿಕ್ಷೆ ವಿಧಿಸಿದೆ.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…