Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಅಮಾನವೀಯ ವರ್ತನೆ : ದಾಖಲೆಗಳು ಮುಖ್ಯವಲ್ಲ, ಜೀವ ಮುಖ್ಯವೆಂದ ಸಚಿವ ಸುಧಾಕರ್

Facebook
Twitter
Telegram
WhatsApp

ಬೆಂಗಳೂರು: ಆಸ್ಪತ್ರೆಗಳಲ್ಲಿ ವೈದ್ಯರು, ವೈದ್ಯಾಧಿಕಾರಿಗಳು ಅಮಾನವೀಯವಾಗಿ ನಡೆದುಕೊಂಡರೆ ಕೇವಲ ಅಮಾನತಲ್ಲ, ಕೆಲಸದಿಂದಲೇ ವಜಾ ಮಾಡಲಾಗುವುದು. ವಜಾ ಮಾಡಲು ಕಾನೂನಿನಲ್ಲಿ ಬದಲಾವಣೆ ತರಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗುವುದು. *ಮುಂದಿನ ಅಧಿವೇಶನದಲ್ಲೇ ಕಾನೂನು ತಿದ್ದುಪಡಿ ತರಲು* ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ತಾಯಿ ಹಾಗೂ ನವಜಾತ ಶಿಶುಗಳ ಮರಣದ ದುರ್ಘಟನೆ ಕುರಿತು ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿದರು. ನತದೃಷ್ಟ ಹೆಣ್ಣುಮಗಳನ್ನು ಬಾಲಕಿಯರ ಮಂದಿರಕ್ಕೆ ದಾಖಲಿಸಲಾಗಿದೆ. ಆಕೆಗೆ ಸರ್ಕಾರದಿಂದಲೇ 5 ಲಕ್ಷ ರೂ. ಎಫ್‌ಡಿ ಇರಿಸಲು ಕ್ರಮ ವಹಿಸಲಾಗಿದೆ. ಹಾಗೆಯೇ ಆಕೆಯ ಶೈಕ್ಷಣಿಕ ಭವಿಷ್ಯವನ್ನೂ ರೂಪಿಸಲಾಗುವುದು. ಈ ಘಟನೆಯಲ್ಲಿ ಅಮಾನವೀಯವಾಗಿ ನಡೆದುಕೊಂಡ ವೈದ್ಯರು, ಸಿಬ್ಬಂದಿಗೆ ಹಾಗೂ ಜಿಲ್ಲಾ ಸರ್ಜನ್‌ ಗೆ, ಆಡಳಿತ ವೈಫಲ್ಯ ಎಂದು ಪರಿಗಣಿಸಿ ಕಾರಣ ಕೇಳಿ ನೋಟಿಸ್‌ ನೀಡಲಾಗಿದೆ. ಕರ್ತವ್ಯದಲ್ಲಿರುವ ವೈದ್ಯರಿಗೆ ಕೂಡ ಪ್ರಕರಣದ ಗಂಭೀರತೆ ಬಗ್ಗೆಯೂ ತಿಳಿಸಲಾಗಿದೆ. ಹಾಗೆಯೇ ಅವರಿಗೂ ಶೋಕಾಸ್‌ ನೋಟಿಸ್‌ ನೀಡಿ 24 ಗಂಟೆಯೊಳಗೆ ಉತ್ತರ ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಈ ರೀತಿಯ ಘಟನೆ ಎಂದೂ ಮರುಕಳಿಸಬಾರದು. ಅದಕ್ಕಾಗಿ ಎಲ್ಲಾ ಕ್ರಮಗಳನ್ನು ವಹಿಸಲಾಗಿದೆ. ಯಾವುದೇ ರೋಗಿ ತುರ್ತು ಪರಿಸ್ಥಿತಿಯಲ್ಲಿ ಆಸ್ಪತ್ರೆಗೆ ಬಂದಾಗ ಯಾವ ದಾಖಲೆಗಳೂ ಮುಖ್ಯವಲ್ಲ. ತಾಯಿ ಕಾರ್ಡ್‌, ಆಧಾರ್‌ ಕಾರ್ಡ್‌ಗಳನ್ನು ಚಿಕಿತ್ಸೆ ನೀಡಿದ ಬಳಿಕವೂ ಕೇಳಬಹುದು. ಈ ಬಗ್ಗೆ ಹಿಂದಿನಿಂದಲೂ ಸೂಚನೆ ಇದೆ. ಖಾಸಗಿ ಆಸ್ಪತ್ರೆಗಳಲ್ಲಿ 76 ತುರ್ತು ಸೇವೆಗಳನ್ನು ಜೋಡಿಸಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಈ ಸೇವೆಗಳು ಇಲ್ಲವಾದರೆ, ಖಾಸಗಿ ಆಸ್ಪತ್ರೆಯಲ್ಲಿ ಆ ಸೇವೆ ಪಡೆಯಬಹುದು. ಆಗ ಸರ್ಕಾರವೇ ವೆಚ್ಚ ಭರಿಸುತ್ತದೆ ಎಂದರು.

ಎಲ್ಲಾ ಸೌಲಭ್ಯಗಳು ಇದ್ದರೂ, ಆರೋಗ್ಯ ಸಿಬ್ಬಂದಿ ಮಾಡಿದ ಕೆಲಸದಿಂದ ಸರ್ಕಾರಕ್ಕೆ ಮುಜುಗರವಾಗಿದೆ. ಇದು ಇಡೀ ಮಾನವ ಸಂಕುಲಕ್ಕೆ ಕರಾಳ ದಿನವಾಗಿದೆ. ಇದಕ್ಕಾಗಿ ನಾನು ಬಹಳ ವಿಷಾದ, ಸಹಾನುಭೂತಿ ವ್ಯಕ್ತಪಡಿಸುತ್ತೇನೆ ಎಂದರು. ಈ ಕುಟುಂಬದ ಸಂಬಂಧಿಕರನ್ನು ಪತ್ತೆ ಮಾಡಲು 36 ಗಂಟೆಗಳಿಂದ ಪೊಲೀಸರು ಶ್ರಮಿಸುತ್ತಿದ್ದಾರೆ. ಆದರೆ ಯಾರೂ ಇನ್ನೂ ಮುಂದೆ ಬಂದಿಲ್ಲ. ಇಂತಹ ಪರಿಸ್ಥಿತಿ ಇದ್ದರೂ, ಸಂಪೂರ್ಣ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಲಿದೆ ಎಂದರು.

ಗರ್ಭಿಣಿ ಯಾವುದೇ ರಾಜ್ಯದವರಾಗಿದ್ದರೂ, ದಾಖಲೆ ಇಲ್ಲದಿದ್ದರೂ ಆಸ್ಪತ್ರೆಗೆ ಬಂದಾಗ ಚಿಕಿತ್ಸೆ ನೀಡಿ ಹೆರಿಗೆ ಮಾಡಿಸಬೇಕಿತ್ತು. ಮಾನವೀಯತೆಯಿಂದ ಅವರೊಂದಿಗೆ ನಡೆದುಕೊಳ್ಳಬೇಕಿತ್ತು. ಇಲ್ಲಿ ದಾಖಲೆ ಮುಖ್ಯವಲ್ಲ, ಜೀವ ಮುಖ್ಯ. ಕೆಲವರಿಂದ ಆದ ಈ ಘಟನೆಯಿಂದ ಇಡೀ ವ್ಯವಸ್ಥೆಗೆ ಕೆಟ್ಟ ಹೆಸರು ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!