Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಒಳ ಮೀಸಲಾತಿಯಲ್ಲಿ ಅನ್ಯಾಯ, ಸಮೀಕ್ಷೆಯಲ್ಲಾದರೂ ನ್ಯಾಯ ಸಿಗಲಿ : ಬಸವನಾಗಿದೇವ ಸ್ವಾಮಿಜಿ ಒತ್ತಾಯ  

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 22 : ನಾಗಮೋಹನ್‍ದಾಸ್ ಆಯೋಗದಂತೆ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸಿರುವುದರಲ್ಲಿ ನಮಗೆ ಅನ್ಯಾಯವಾಗಿದೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸೋಮವಾರದಿಂದ ನಡೆಸುತ್ತಿರುವ ಜಾತಿ ಸಮೀಕ್ಷೆಯಲ್ಲಾದರೂ ಛಲವಾದಿಗಳಿಗೆ ನ್ಯಾಯ ಸಿಗಲಿ ಎಂದು ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮಿ ಒತ್ತಾಯಿಸಿದರು.

ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಹಿಂದೆ ಆದ ತಪ್ಪು ಮತ್ತೆ ಮರುಕಳಿಸಬಾರದು. ಸಮೀಕ್ಷೆಗೆ ಮನೆ ಬಾಗಿಲಿಗೆ ಬಂದಾಗ ಛಲವಾದಿ ಎಂದು ಬರೆಸಿ. ಧರ್ಮ ಕಾಲಂನಲ್ಲಿ ಭೌದ್ದ ಧರ್ಮ ಎಂದು ಬರೆಸಬೇಕು. ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಎನ್ನುವ ಪದ ಜಾತಿಗಳಲ್ಲ. ಎಂಟನೆ ಕಾಲಂನಲ್ಲಿ ಭೌದ್ದ ಧರ್ಮ ಎಂದೆ ಬರೆಸುವಂತೆ ಬಲಗೈ ಜಾತಿಗಳ ಒಕ್ಕೂಟ ಬೆಂಗಳೂರಿನಲ್ಲಿ ನಡೆಸಿದ ಸಭೆಯಲ್ಲಿ ತೀರ್ಮಾನಿಸಿದೆ. ಅದರಂತೆ ಛಲವಾದಿ ಜನಾಂಗ ಸಮೀಕ್ಷೆಯಲ್ಲಿ ನಿಖರವಾದ ಮಾಹಿತಿ ನೀಡುವಂತೆ ಜಾಗೃತಿಗೊಳಿಸಿದರು.

ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್ ಮಾತನಾಡಿ ಹಿಂದಿನ ಸಮೀಕ್ಷೆಯಲ್ಲಿ ತಪ್ಪಾಗಿರುವುದರಿಂದ ಛಲವಾದಿಗಳಲ್ಲಿ ಕೆಲವರನ್ನು ಬೇರೆ ಜಾತಿಗಳಿಗೆ ಸೇರಿಸಲಾಗಿದೆ. ನಾವುಗಳು ಮತ್ತೊಬ್ಬರ ಊಟ ಕಸಿಯುವವರಲ್ಲ. ಸಮೀಕ್ಷೆಯಲ್ಲಿ ಛಲವಾದಿ ಎಂದು ನಮೂದಿಸಿ ಧರ್ಮದ ವಿಚಾರ ಬಂದಾಗ ಬೌದ್ದ ಧರ್ಮ ಎಂದೆ ಬರೆಸಬೇಕು. ತುಳಿತಕ್ಕೊಳಪಟ್ಟು ಈಗಲೂ ಅಸ್ಪøಶ್ಯರಾಗಿಯೇ ಉಳಿದಿದ್ದೇವೆ. ಎಲ್ಲಾ ಜನಾಂಗದಲ್ಲಿಯೂ ಬಡವರಿದ್ದಾರೆ. ಜಾತಿಗಳನ್ನು ಒಡೆಯುವುದು ಕಾಂಗ್ರೆಸ್ ಉದ್ದೇಶವಲ್ಲ. ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕನಸು ನನಸಾಗಬೇಕೆಂಬ ಆಶಯವಿಟ್ಟುಕೊಂಡಿದೆ ಎಂದರು.

ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ದಾವಣಗೆರೆ ಜಿಲ್ಲಾ ಛಲವಾದಿ ಮಹಾಸಭಾ ಅಧ್ಯಕ್ಷ ರುದ್ರಮುನಿ ಮಾತನಾಡುತ್ತ ಒಳ ಮೀಸಲಾತಿಯಲ್ಲಿ ಶೇ.6 ರಷ್ಟು ಮೀಸಲಾತಿ ನಮಗೆ ಸಿಕ್ಕಿರುವುದನ್ನು ಸ್ವಾಗತಿಸುತ್ತೇವೆ. ಜನಸಂಖ್ಯೆಯಲ್ಲಿ ಛಲವಾದಿಗಳು ಜಾಸ್ತಿಯಿದ್ದರೂ ಹಿಂದಿನ ಸಮೀಕ್ಷೆಯಲ್ಲಿ ಕಡಿಮೆ ತೋರಿಸಿ ಅನ್ಯಾಯವೆಸಗಲಾಗಿದೆ.

ಪ್ರವರ್ಗ ಬಿ.ಯಲ್ಲಿಟ್ಟಿದ್ದರೆ ಅದನ್ನು ಸರ್ಕಾರ ಹಿಂದಕ್ಕೆ ಪಡೆಯಬೇಕು. ಸಮೀಕ್ಷೆಗೆ ತೆಲಂಗಾಣ 90 ದಿನಗಳನ್ನು ತೆಗೆದುಕೊಂಡಿದೆ. ಅದೇ ನಮ್ಮ ರಾಜ್ಯ ಸರ್ಕಾರ ಹದಿನೈದು ದಿನಗಳನ್ನು ನಿಗಧಿಪಡಿಸಿರುವುದರಿಂದ ಸಮೀಕ್ಷೆ ಯಶಸ್ವಿಯಾಗುವುದಿಲ್ಲ. ಹಾಗಾಗಿ ಇನ್ನು ಕೆಲವು ದಿನಗಳ ವಿಸ್ತರಣೆಯಾಗಬೇಕೆಂದು ಮನವಿ ಮಾಡಿದರು.

ಛಲವಾದಿ ಸಮಾಜದ ಮುಖಂಡರುಗಳಾದ ಹೆಚ್.ಅಣ್ಣಪ್ಪಸ್ವಾಮಿ, ವೈ.ತಿಪ್ಪೇಸ್ವಾಮಿ, ಹಾಲೇಶಪ್ಪ, ನರಸಿಂಹಮೂರ್ತಿ, ಛಲವಾದಿ ತಿಪ್ಪೇಸ್ವಾಮಿ, ಭೂತೇಶ್, ಮೂಡಲಗಿರಿಯಪ್ಪ ಇನ್ನು ಮುಂತಾದವರು ಪತ್ರಿಕಾಗೋಷ್ಠಿಯಲ್ಲಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...