Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗದ ಕಾಡುಗೊಲ್ಲರಿಗೆ ಅನ್ಯಾಯ : ಸಿಜೆ. ಪಾತಯ್ಯ ನಂದಿಹಳ್ಳಿ ಅಸಮಾಧಾನ

---Advertisement---

 

ಸುದ್ದಿಒನ್, ಹಿರಿಯೂರು, ಸೆಪ್ಟೆಂಬರ್. 28 : ಚಿತ್ರದುರ್ಗ ಜಿಲ್ಲೆಯಲ್ಲಿನ ಕಾಡುಗೊಲ್ಲರಿಗೆ ನಿಗಮ ಮಂಡಳಿ ಸ್ಥಾನ ನೀಡದೆ ಸರ್ಕಾರ ಜಿಲ್ಲೆಯ ಜನಸಂಖ್ಯೆಯನ್ನು ಕಡೆಗಣಿಸಿದೆ ಎಂದು ಮಾಜಿ ಕೆಪಿಸಿಸಿ ಕಾರ್ಯದರ್ಶಿ ಸಿಜಿ. ಪಾತಯ್ಯ ನಂದಿಹಳ್ಳಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪತ್ರಿಕಾ ಪ್ರಕಟಣೆ ಹೇಳಿಕೆ ನೀಡಿರುವ ಅವರು ಇತ್ತೀಚೆಗಷ್ಟೇ 39 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡಲಾಗಿದೆ. ಅದರಲ್ಲೂ ಕಾಡುಗೊಲ್ಲ ಅಭಿವೃದ್ಧಿ ನಿಗಮ ಅಧ್ಯಕ್ಷರಾಗಿ ಹಾರೋಗೆರೆ ಮಹೇಶ್ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಸಂತಸ ತಂದಿದೆ. ಆದರೆ ಬಹುಸಂಖ್ಯಾತರಾಗಿರುವ ಜಿಲ್ಲೆಯ ಕಾಡುಗೊಲ್ಲರಿಗೆ ಮತ್ತೊಂದು ನಿಗಮಕ್ಕೆ ಅಧ್ಯಕ್ಷರನ್ನಾಗಿ ನೇಮಕ ಮಾಡಬಹುದಿತ್ತು‌, ನೌಕರಿಯಿಂದ ನಿವೃತ್ತಿ ಹೊಂದಿ ಪಕ್ಷಕ್ಕೆ ಬಂದಿರುವರನ್ನು ಗುರುತಿಸಿದಂತೆ, ಪಕ್ಷಕ್ಕಾಗಿ ಅನೇಕ ನಾಯಕರು ದುಡಿದಿದವರನ್ನು ಗುರುತಿಸಬೇಕು. ಸರ್ಕಾರ ಕೇವಲ ಸಮುದಾಯವನ್ನು ಮತಬ್ಯಾಂಕ್ ಗಷ್ಟೇ ಬಳಸಿಕೊಳ್ಳುತ್ತಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲು ಕಾಡುಗೊಲ್ಲರು ಕಾರಣಕರ್ತರು ಎಂಬುದನ್ನು ಮರೆಯಬಾರದು. ಸಣ್ಣ ಜನಾಂಗವನ್ನು ಕೈ ಬಲಪಡಿಸಲು ಜಿಲ್ಲೆಯ ಸಚಿವರು ಹಾಗೂ ಶಾಸಕರ ಇಚ್ಛಾಶಕ್ತಿ ಇಲ್ಲದಂತಾಗಿದೆ ಎಂದು ಕಿಡಿಕಾರಿದರು.

ಬುಡಕಟ್ಟು ಕಾಡುಗೊಲ್ಲರ ಬದುಕು ಹೀನಾಯ ಸ್ಥಿತಿಯಲ್ಲಿದೆ. ಕುರಿ ಮೇಕೆ ಸಾಕಾಣಿಕೆಯೊಂದಿಗೆ ಅಲೆಮಾರಿಗಳಾಗಿ ಬದುಕುತ್ತಿರುವ ಈ ಸಮುದಾಯ ಆರ್ಥಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮುಂದೆ ಬರಬೇಕಿದೆ. ಹಿಂದುಳಿದ ಸಮುದಾಯಗಳ ಅಭಿವೃದ್ಧಿ ರಾಜಕೀಯವೇ ಅಸ್ತಿತ್ವ. ಹಿಂದುಳಿದ ವರ್ಗಗಳಿಗೆ ಸಿಗಬೇಕಾದ ಹುದ್ದೆಗಳು ಅನ್ಯಾರ ಪಾಲಾಗುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು. ಇನ್ನೇನಾದರೂ ಉಳಿದ ಮಂಡಳಿಗಳಿಗೆ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರ ಹುದ್ದೆಗಳನ್ನು ಜಿಲ್ಲೆಯ ಕಾಡುಗೊಲ್ಲರಿಗೆ ನೀಡಬೇಕು ಇಲ್ಲವಾದರೆ ಮುಂಬರುವ ಜಿಪಂ, ತಾಪಂ, ಹಾಗೂ ಸ್ಥಳೀಯ ನಗರಸಭೆ, ಪಟ್ಟಣ ಪಂಚಾಯಿತಿ ಚುನಾವಣೆಗಳಲ್ಲಿ ಕಾಡುಗೊಲ್ಲರು ತಕ್ಕ ಪಾಠ ಕಲಿಸಿದ್ದಾರೆ ಎಂದು ಸರ್ಕಾರವನ್ನು ಸಿಜೆ. ಪಾತಯ್ಯ ಎಚ್ಚರಿಸಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...