ಬೆಂಗಳೂರು; ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ಒಂದು ವಾರದೊಳಗೆ ಒಳ ಮೀಸಲಾತಿಯ ಮಧ್ಯಂತರ ವರದಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ತದನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚಿಸಿ ಆದಷ್ಟು ಶೀಘ್ರದಲ್ಲಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೊಳಿಸಲು ಕರ್ನಾಟಕ ಸರ್ಕಾರ ಬದ್ಧವಾಗಿದೆ. ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಒಳಮೀಸಲಾತಿ ಕುರಿತು ಹೇಳಿದ್ದೇವೆ. ಎಂಪೆರಿಕಲ್ ಡೇಟಾ ನಿರ್ದಿಷ್ಟವಾದ ಅಭಿಪ್ರಾಯ ಬರುತ್ತದೆ ಎಂದು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ತಿಳಿಸಿದ್ದಾರೆ. ಪರಿಶಿಷ್ಟ ಜಾತಿಯ ಒಳಮೀಸಲಾತಿಗೆ ಸಂಬಂಧಿಸಿದಂತೆ ಇಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆದಿದೆ. ಈ ಸಭೆಯಲ್ಲಿ ನ್ಯಾಯಮೂರ್ತಿ ನಾಗಮೋಹನ್ ಅವರು ಕೂಡ ಅಭಿಪ್ರಾಯಪಟ್ಟಿದ್ದಾರೆ. ವಿಚಾರವನ್ನ ತಿಳಿಸಿದ್ದಾರೆ.

ಇದೆ ವೇಳೆ, ಸಮಾಜ ಕಲ್ಯಾಣ ಸಚಿವರಾದ ಡಾ. ಹೆಚ್.ಸಿ.ಮಹದೆವಪ್ಪ ಅವರು ಮಾತನಾಡಿ, ಒಳ ಮೀಸಲಾತಿ ಸಂಬಂಧ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಹಿರಿಯ ಸಚಿವರ ಜೊತೆ ಸುಧೀರ್ಘ ಸಭೆ ನಡೆಸಲಾಗಿದೆ. ಒಳಮೀಸಲಾತಿ ಜಾರಿಗಾಗಿ ಈವರೆಗೂ ಆಗಿರುವ ಪ್ರಗತಿಯ ಮಾಹಿತಿಯನ್ನು ನಾಗ ಮೋಹನ್ ದಾಸ್ ಸಮಿತಿ ನೀಡಿದೆ. ಆದಷ್ಟು ಬೇಗ ಒಳಮೀಸಲಾತಿ ಜಾರಿಗೆ ಪ್ರಸ್ತಾಪ ಇಟ್ಟಿದ್ದಾರೆ. ದತ್ತಾಂಶ ಆಧಾರದ ಮೇಲೆ ಸುದೀರ್ಘ ಚರ್ಚೆ ಮಾಡಿದ್ದೇವೆ ನಾಗಮೋಹನ್ ದಾಸ್ ಅವರು ವಾರದೊಳಗೆ ಮಧ್ಯಂತರ ವರದಿ ನೀಡುತ್ತಾರೆ. ಆ ವರದಿ ಮೇಲೆ ಒಳಮೀಸಲಾತಿ ಜಾರಿ ಕುರಿತು ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದರು. ಒಳಮೀಸಲಾತಿ ಜಾರಿಗೆ ಆದಷ್ಟು ಬೇಗ ಬರಲಿ ಎಂದೇ ಹಲವರು ಕಾಯುತ್ತಿದ್ದಾರೆ.


