Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದ ಪ್ರವಾಸಿ ಮಂದಿರದ ಮುಂಭಾಗದಲ್ಲಿ ಸಿಗ್ನಲ್ ಅಳವಡಿಸಿ : ಕಾಂಗ್ರೆಸ್ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ
                        ಸುರೇಶ್ ಪಟ್ಟಣ್,                         
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಜ. 03 : ಪಾದಚಾರಿಗಳು, ಜನಸಾಮಾನ್ಯರು ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಗರದ ಪ್ರವಾಸಿ ಮಂದಿರದ ಮುಂಭಾಗದ ವೃತ್ತದಲ್ಲಿ ಸಿಗ್ನಲ್ ಅಳವಡಿಸಿ, ಸಂಚಾರಿ ಪೊಲೀಸ್‍ನ್ನು ನೀಡಿ ಸುಗಮ ರಸ್ತೆ ಸಾರಿಗೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಸೂಕ್ತ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಪರವಾಗಿ ಶಿಕ್ಷಕರು & ಪದವೀಧರರ ಕಾಂಗ್ರೆಸ್ ವಿಭಾಗದವತಿಯಿಂದ ಜಿಲ್ಲಾಡಳಿತವನ್ನು ಒತ್ತಾಯಿಸಿ ಮನವಿಯನ್ನು ಸಲ್ಲಿಸಲಾಯಿತು.

ನಗರದ ಹೃದಯ ಭಾಗದಲ್ಲಿರುವ ಪ್ರವಾಸಿ ಮಂದಿರದ ಮುಂಭಾಗದಲ್ಲಿ ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ, ಸರ್ಕಾರಿ ಶಾಲೆ ಮತ್ತು ಕಾಲೇಜುಗಳು ಹಾಗೂ ಪ್ರವಾಸಿ ಮಂದಿರ ಇದ್ದು. ತಾಲ್ಲೂಕು ಕಚೇರಿ ಕಡೆಯಿಂದ ವಾಹನಗಳು ಏಕಮುಖ ರಸ್ತೆಯಲ್ಲಿ ವಿರುದ್ಧವಾಗಿ ಬರುತ್ತವೆ ಮತ್ತು ಪ್ರವಾಸಿ ಮಂದಿರದ ಮುಂಭಾಗದಲ್ಲಿ ಒಂದು ಬಸ್ ನಿಲ್ದಾಣ ಮತ್ತು ಅದರ ಎದುರುಗಡೆ ಇರುವ ಓಲ್ಕ್ ಮಿಡಲ್ ಶಾಲೆ ಮೈದಾನದ ಗೇಟ್ ಪಕ್ಕದಲ್ಲಿ ಆಟೋ ಸ್ಟಾಂಡ್ ಮತ್ತು ಬಹುಗಾಲಿಗಳ ವಾಹನ ಮತ್ತು ಬಸ್ಸ್ ಗಳಿಗೆ ನಿಲ್ದಾಣವಿದ್ದು, ಅಂಬೇಡ್ಕರ್ ವೃತ್ತದ ಕಡೆಯಿಂದ ಬರುವ ವಾಹನಗಳು ಲಿಡ್ಕರ್ ಬಿಲ್ಡಿಂಗ್ ಹಾಗೂ ಕೆ.ಎಫ್.ಸಿ ಬ್ಯಾಂಕ್ ಕಡೆಗೆ ಹೋಗಲು ವಾಹನಗಳು ತಿರುಗಿ ಗಾಂಧಿ ವೃತ್ತದಿಂದ ಬರುವ ವಾಹನಗಳಿಗೆ ಅಡ್ಡವಾಗಿ ಸಂಚರಿಸುವ ಬಹು ಮುಖ್ಯ ವೃತ್ತ ಇದಾಗಿರುತ್ತದೆ.

ಅತ್ಯಂತ ವಾಹನ ದಟ್ಟಣೆ ಇರುವ ಇಂತಹ ವೃತ್ತದಲ್ಲಿ ಶಾಲೆ ಮತ್ತು ಕಾಲೇಜುಗಳನ್ನು ಪ್ರಾರಂಭಿಸುವ ಮತ್ತು ಬಿಡುವ ಸಮಯಗಳಲ್ಲಿ ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿಯ ಸಿಬ್ಬಂಧಿ ವಾಹನಗಳು, ಹಳೇ ಮಾಧ್ಯಮಿಕ ಮೈದಾನದಿಂದ ಹೊರಗೆ ಬರುವುದು ಮತ್ತು ಒಳಗೆ ಹೋಗುವುದರಿಂದ ಮತ್ತು ಸದರಿ ಮೈದಾನದಲ್ಲಿ ಕ್ರೀಡೆಗಳು ನಡೆಯುವ ಸಂದರ್ಭದಲ್ಲಿ ಮತ್ತಿತರೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಾಹನ ದಟ್ಟಣೆಯಿಂದಾಗಿ ವಿದ್ಯಾರ್ಥಿಗಳಿಗೆ ಅತ್ಯಂತ ತೊಂದರೆ ಮತ್ತು ತೀವ್ರ ಸಮಸ್ಯೆ ಉಂಟಾಗುತ್ತಿರುವುದನ್ನು ವಿದ್ಯಾರ್ಥಿಗಳ ಪೋಷಕರು ಹಾಗೂ ಸದರಿ ವೃತ್ತದ ಸುತ್ತಮುತ್ತಲಿನ ಅಂಗಡಿ ಮುಂಗಟ್ಟುಗಳಲ್ಲಿ ಇರುವ ಸಾರ್ವಜನಿಕರು ಮತ್ತು ಪಾದಚಾರಿಗಳು ಹಾಗೂ ಅನೇಕ ವಿದ್ಯಾರ್ಥಿ ಸಂಘಟನೆಗಳು ಶಿಕ್ಷಕರು & ಪದವೀಧರರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಂದು ದಿನ ನಿತ್ಯ ದೂರುಗಳನ್ನು ನೀಡುತ್ತಿರುತ್ತಾರೆ.

ಈ ವತ್ತದಲ್ಲಿರುವ ರಸ್ತೆಯ ಮದ್ಯಭಾಗದಲ್ಲಿ ಬೃಹದಾಕಾರದ ರೋಡ್ ಡಿವೈಂಡರ್ ನಿರ್ಮಿಸಿದ್ದು, ವಿದ್ಯಾರ್ಥಿಗಳು ರಸ್ತೆಯನ್ನು ದಾಟಲು ತು0ಬಾ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ, ಈ ಪರಿಸ್ಥಿತಿಯನ್ನು ಈ ಕೂಡಲೇ ಬಗೆಹರಿಸಬೇಕಾದ ಅನಿವಾರ್ಯತೆ ಇದೆ ಎಂದು ಚಿತ್ರದುರ್ಗ ಜಿಲ್ಲಾ ಶಿಕ್ಷಕರ ಮತ್ತು ಪದವೀಧರರ ಕಾಂಗ್ರೆಸ್ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ಮುದಾಸೀರ್ ನವಾಜ್, ಇನ್‍ಟೆಕ್ ನಗರಾಧ್ಯಕ್ಷ ಜಮೀರ್, ಮುನಿರಾಜ್, ಕೋಟಿ, ಪ್ರಕಾಶ್, ಸುಧಾಮ್ಮ ಸೇರಿದಂತೆ ಇತರರು ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment