ಬೆಳಗಾವಿ, ಸುವರ್ಣಸೌಧ, ಡಿಸೆಂಬರ್ 13 : ರೈತರಿಗೆ ತೂಕದಲ್ಲಿ ಮೋಸ ಆಗದಂತೆ ತಡೆಯಲು ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಎಲೆಕ್ಟ್ರಾನಿಕ್ ಆಧಾರಿತ ತೂಕ ಮಷಿನ್ ಅಳವಡಿಸಲು ಕ್ರಮ ವಹಿಸಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಕಾನೂನು ಮಾಪನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಳಗಾವಿಯ ಸುವರ್ಣ ಸೌಧದಲ್ಲಿ ಆಹಾರ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೆಳಗಾವಿ ಜಿಲ್ಲೆಯ ಎಲ್ಲಾ ತಾಲೂಕಿನ ಆಯ್ದ 100 ಜನ ಅಂಗಡಿಕಾರರ ಕುಂದು ಕೊರತೆ ಆಲಿಸಿದ ಸಚಿವರು ಸಾರ್ವಜನಿಕರ ದೂರು ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು. ಪಡಿತರ ಅಕ್ಕಿ ಜೊತೆಗೆ, ಡಿಬಿಟಿ ಮೊತ್ತ ಫಲಾನುಭವಿಗಳಿಗೆ ನಿಯಮಾನುಸಾರ ಪ್ರತಿ ಮಾಹೆ ಜಮೆ ಮಾಡಿಸಬೇಕು. ಅರ್ಹ ಫಲಾನುಭವಿಗಳಿಗೆ ನಿಯಮಾನುಸಾರ ಪಡಿತರ ಚೀಟಿ ಅನುಮೋದನೆ ಮಾಡಲು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಸಕ್ಕರೆ ಸಚಿವರಾದ ಶಿವಾನಂದ ಎಸ್ ಪಾಟೀಲ್, ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಶಾಸಕರಾದ ಲಕ್ಷಣ ಸವದಿ ಹಾಗೂ ಬೀಳಗಿ ಕ್ಷೇತ್ರದ ಶಾಸಕರಾದ ಜೆಟಿ ಪಾಟೀಲ್, ಆಹಾರ ಇಲಾಖೆಯ ಕಾರ್ಯದರ್ಶಿ, ಆಯುಕ್ತರು, ಕರ್ನಾಟಕ ಆಹಾರ ನಿಗಮ ವ್ಯವಸ್ಥಾಪಕ ನಿರ್ದೇಶಕರು, ಕಾನೂನು ಮಾಪನ ಶಾಸ್ತ್ರ ಇಲಾಖೆ ನಿಯಂತ್ರಕರು, ಆಹಾರ ಇಲಾಖೆ ಸಚಿವರ ಆಪ್ತ ಕಾರ್ಯದರ್ಶಿ, ವಿಶೇಷ ಅಧಿಕಾರಿಗಳು ಹಾಗೂ ಬೆಳಗಾವಿ , ಕಲಬುರ್ಗಿ ವಿಭಾಗದ ಆಹಾರ ಇಲಾಖೆಯ ಕಾನೂನು ಮಾಪನ ಶಾಸ್ತ್ರ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾ ವ್ಯವಸ್ಥಾಪಕರು ಸಭೆಯಲ್ಲಿ ಉಪಸ್ಥಿತರಿದ್ದರು.
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…