Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸುವರ್ಣಸೌಧದಲ್ಲಿ ಚೆನ್ನಮ್ಮ, ರಾಯಣ್ಣ ಪ್ರತಿಮೆ ಸ್ಥಾಪನೆ : ಸಿಎಂ ಬೊಮ್ಮಾಯಿ

Facebook
Twitter
Telegram
WhatsApp

ಬೆಂಗಳೂರು: ಸುವರ್ಣ ವಿಧಾನಸೌಧದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ಈ ವರ್ಷವೇ ಪ್ರತಿಷ್ಠಾಪನೆ ಮಾಡುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಬೆಳಗಾವಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿ ಕಿತ್ತೂರು ಚೆನ್ನಮ್ಮಾಜಿ ವಿಜಯ ಜ್ಯೋತಿ ಯಾತ್ರೆಗೆ ಚಾಲನೆ ನೀಡಲಾಯಿತು. ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ಕಿತ್ತೂರು ಉತ್ಸವ ಪ್ರಾರಂಭವಾಗಿ 25-30 ವರ್ಷ ಕಳೆದಿದೆ. ಮಧ್ಯೆ-ಮಧ್ಯೆ ಕುಂಟುತ್ತಾ ಇದ್ದ ಉತ್ಸವಕ್ಕೆ ನಮ್ಮ ಸರ್ಕಾರ ಅಧಿಕೃತ ಆದೇಶದ ಮೂಲಕ ರಾಜ್ಯ ಮಟ್ಟದಲ್ಲಿ ಕಿತ್ತೂರು ಉತ್ಸವ ಆಚರಣೆ ಮಾಡುತ್ತಿದೆ. ಹಿಂದೆ ತಾವು ಬೆಳಗಾವಿ ಉಸ್ತುವಾರಿ ಸಚಿವರಾಗಿದ್ದ ಸಂದರ್ಭದಲ್ಲಿ ಹೆಚ್ಚಿನ ಅನುದಾನ ನೀಡಿ 3 ದಿನಗಳ ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಿದ್ದನ್ನು ಸ್ಮರಿಸಿದರು

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸರ್ಕಾರದಿಂದ 50 ಕೋಟಿ ಅನುದಾನ ನೀಡಲಾಗಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ, ಬೆಂಗಳೂರಿನಲ್ಲಿ ಇಂದು “ರಾಜ್ಯಮಟ್ಟದ ಕಿತ್ತೂರು ಉತ್ಸವದ ಪೂರ್ವಭಾವಿಯಾಗಿ ಕಿತ್ತೂರು ಚೆನ್ನಮ್ಮಾಜಿ ವಿಜಯ ಜ್ಯೋತಿ ಯಾತ್ರೆಗೆ ಚಾಲನೆ” ನೀಡಿ ಶುಭ ಹಾರೈಸಿದೆನು. ಸಚಿವರಾದ @GovindKarjol, ಶಾಸಕ ಮಹಾಂತೇಶ್ ದೊಡ್ಡಗೌಡರ್, ಮಾಜಿ ಸಚಿವೆ ಲೀಲಾದೇವಿ ಆರ್.ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ

ವಿಶ್ವ ರೆಡ್‍ಕ್ರಾಸ್ ದಿನಾಚರಣೆ | ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಚಿತ್ರದುರ್ಗ ಮೇ. 08 :  ವಿಶ್ವ ರೆಡ್‍ಕ್ರಾಸ್ ದಿನಾಚರಣೆಯ ಅಂಗವಾಗಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಚಿತ್ರದುರ್ಗ ಶಾಖೆ ಹಾಗೂ ಎಸ್.ಜಿ.ಸುರಕ್ಷಾ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಮೇ. 8 ರ ಇಂದು ಕಾಲೇಜಿನಲ್ಲಿ

error: Content is protected !!