Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭೇಟಿಗೆ ಹೂಗುಚ್ಛ ಬದಲು ನೋಟ್‌ಬುಕ್, ಪೆನ್ ನೀಡಿ: ಜಿಲ್ಲಾಧಿಕಾರಿ ಎಸ್.ರಮ್ಯ ಮನವಿ

---Advertisement---

ಚಿತ್ರದುರ್ಗ. ಸೆ.10: ಜಿಲ್ಲಾಧಿಕಾರಿಗಳನ್ನು ಭೇಟಿಯಾಗುವ ಸಂದರ್ಭದಲ್ಲಿ ಹೂಗುಚ್ಛ, ಶಾಲು ಅಥವಾ ಹಾರಗಳನ್ನು ನೀಡುವ ಬದಲಾಗಿ ನೋಟ್‌ಬುಕ್ ಮತ್ತು ಪೆನ್‌ಗಳನ್ನು ನೀಡುವಂತೆ ಜಿಲ್ಲಾಧಿಕಾರಿ ಎಸ್. ರಮ್ಯ ಅವರು ಸಾರ್ವಜನಿಕರು ಹಾಗೂ ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.

ಸೌಜನ್ಯದ ಭೇಟಿಯ ವೇಳೆ ಗಣ್ಯರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಹೂಗುಚ್ಛ ನೀಡಿ ಗೌರವಿಸುವುದು ವಾಡಿಕೆಯಾಗಿದೆ. ಆದರೆ ಹೂಗುಚ್ಛಗಳು ಅಲ್ಪಕಾಲಿಕವಾಗಿದ್ದು, ಪುನರ್ ಬಳಕೆಗೆ ಯೋಗ್ಯವಾಗಿರುವುದಿಲ್ಲ. ಈ ಹಿನ್ನೆಲೆಯಲ್ಲಿ ‘ಕಲಿಕೆಗೆ ಉಡುಗೊರೆ’ ಎಂಬ ಸದುದ್ದೇಶದಿಂದ ಈ ಹೊಸ ತೀರ್ಮಾನ ಕೈಗೊಳ್ಳಲಾಗಿದೆ. ಹೂಗುಚ್ಛದ ಬದಲು ಸಂಗ್ರಹವಾಗುವ ನೋಟ್‌ಬುಕ್ ಹಾಗೂ ಬರವಣಿಗೆ ಉಪಕರಣಗಳನ್ನು ಸರ್ಕಾರಿ ಶಾಲೆಗಳ ಮತ್ತು ಆರ್ಥಿಕವಾಗಿ ಹಿಂದುಳಿದ ಬಡ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಲಾಗುತ್ತದೆ. ಇದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ಮತ್ತು ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ಜಿಲ್ಲಾಧಿಕಾರಿ ಎಸ್.ರಮ್ಯ ಅಭಿಪ್ರಾಯಪಟ್ಟಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now