Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇತಿಹಾಸದ ಬಗ್ಗೆ ಆಸಕ್ತಿ ಮೂಡಿಸಿಕೊಳ್ಳಿ :  ವಿದ್ಯಾರ್ಥಿಗಳಿಗೆ ಎಸ್.ರೇವಣಸಿದ್ದಪ್ಪ ಕಿವಿಮಾತು

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552

ಸುದ್ದಿಒನ್,ಚಿತ್ರದುರ್ಗ, ಮೇ. 18  : ಚರಿತ್ರೆಗೆ ದಾಖಲೆ ಮುಖ್ಯ. ದಾಖಲೆ ಇಲ್ಲದೆ ಚರಿತ್ರೆ ಬರೆಯುವುದು ಕಷ್ಟ ಎಂದು ಸರ್ಕಾರಿ ಕಲಾ ಕಾಲೇಜು ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕ ಎಸ್.ರೇವಣಸಿದ್ದಪ್ಪ ಹೇಳಿದರು.

ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಸರ್ಕಾರಿ ವಸ್ತು ಸಂಗ್ರಹಾಲಯ ಚಿತ್ರದುರ್ಗ, ಸರ್ಕಾರಿ ಕಲಾ ಕಾಲೇಜು ಸ್ವಾಯತ್ತ ಇದರ ಸಹಯೋಗದೊಂದಿಗೆ ರಂಗಯ್ಯನಬಾಗಿಲು ಸಮೀಪವಿರುವ ಸರ್ಕಾರಿ ವಸ್ತು ಸಂಗ್ರಹಾಲಯದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಅಂತರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.

ಪಿ.ಹೆಚ್.ಡಿ. ಮಾಡುವಾಗ ಸಂಗ್ರಹಾಲಯಗಳು ಸಹಾಯವಾಗುತ್ತವೆ. ಶಾಸನ, ತಾಳೆಗರಿ, ಕೈಬರಹ, ಕಡತಗಳು ಸಿಗುತ್ತವೆ. ಪುರಾತತ್ವ ಇಲಾಖೆ ಚರಿತ್ರೆಗಾರರಿಗೆ ತವರು ಮನೆ ಇದ್ದಂತೆ. ಇತಿಹಾಸ ಬರೆಯುವ ಪ್ರಯತ್ನ ಮಾಡಿಲ್ಲ. ಯೂರೋಪಿಯನ್ನರು ಬರೆದಿರುವ ಚರಿತ್ರೆಯನ್ನೇ ಇದುವರೆವಿಗೂ ಓದುತ್ತಿದ್ದೇವೆ. ಜಿಲ್ಲೆಯಲ್ಲಿ ಐತಿಹಾಸಿಕ ನೆಲೆಗಳಿವೆ. ಅಧ್ಯಯನದಲ್ಲಿ ತೊಡಗಿಕೊಳ್ಳಿ ಎಂದು ಇತಿಹಾಸ ವಿಭಾಗದ ವಿದ್ಯಾರ್ಥಿಗಳಿಗೆ ತಿಳಿಸಿದರು.

ಎಲ್ಲಾ ಯುಗಗಳಿಗೂ ಸಂಬಂಧಪಟ್ಟ ದಾಖಲೆಗಳಿವೆ. ಮಾನವನ ಮೊಟ್ಟ ಮೊದಲ ಕುರುಹು ಪತ್ತೆಯಾಗಿದ್ದು, ದಕ್ಷಿಣ ಭಾರತದಲ್ಲಿ ಕದಂಬರು, ಮಯೂರವರ್ಮ, ಭಟ್ಟರು ಇಲ್ಲಿಗೆ ಬಂದರು. ತಾಳೆಗರಿ, ಶಾಸನ, ವೀರಗಲ್ಲು, ಮಾಸ್ತಿಗಲ್ಲುಗಳುಗಳಿವೆ. ಇತಿಹಾಸದ ಬಗ್ಗೆ ಆಸಕ್ತಿ ಮೂಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ನಿವೃತ್ತ ಪ್ರಾಂಶುಪಾಲರಾದ ಕೆ.ಎಸ್.ರಾಜಪ್ಪ ಮಾತನಾಡಿ ಮ್ಯೂಸಿಯಂನಲ್ಲಿ ಸಾಕಷ್ಟು ವಿಚಾರಗಳು ಸಿಗುತ್ತವೆ. ಸಣ್ಣ ಸಣ್ಣ ವಿಷಯಗಳನ್ನಿಟ್ಟುಕೊಂಡು ಸಂಶೋಧನೆ ಮಾಡಲು ಅವಕಾಶಗಳಿದೆ. ಮೊಬೈಲ್ ಗೀಳಿನಲ್ಲಿ ಯುವ ಜನಾಂಗ ಹಾಳಾಗುತ್ತಿದೆ. ಸಂಗ್ರಹಾಲಯಗಳನ್ನು ತಿರುಗಿ ಹೆಚ್ಚಿನ ಜ್ಞಾನ ವೃದ್ದಿಸಿಕೊಳ್ಳಿ ಎಂದು ಇತಿಹಾಸ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಮದಕರಿನಾಯಕ ಸಾಂಸ್ಕøತಿಕ ಕೇಂದ್ರದ ಅಧ್ಯಕ್ಷ ಡಿ.ಗೋಪಾಲಸ್ವಾಮಿನಾಯಕ ಮಾತನಾಡುತ್ತ ವಸ್ತು ಸಂಗ್ರಹಾಲಯಗಳಲ್ಲಿ ಪೂರ್ವಜರ ಜೀವನ, ಪರಂಪರೆ, ಸ್ಮಾರಕಗಳು ಸಿಗುತ್ತವೆ. ದೆಹಲಿಯಲ್ಲಿ ಐದು ಸಾವಿರ ವರ್ಷಗಳ ಇತಿಹಾಸವಿರುವ ಮ್ಯೂಸಿಯಂ ಇದೆ. ಇತಿಹಾಸ, ಪರಂಪರೆ, ಸಂಸ್ಕøತಿಯನ್ನು ಸಂಗ್ರಹಾಲಯಗಳು ತಿಳಿಸುತ್ತವೆ. ಚಿತ್ರದುರ್ಗ ಸಾಂಸ್ಕøತಿಕ, ಜಾನಪದಕ್ಕೆ ತವರು ಮನೆಯಿದ್ದಂತೆ. ಮುರುಘಾಮಠದಲ್ಲಿಯೂ ಅತ್ಯುತ್ತಮವಾದ ಸಂಗ್ರಹಾಲಯವಿದೆ. ಇತಿಹಾಸ ವಿದ್ಯಾರ್ಥಿಗಳು ಅವುಗಳನ್ನೆಲ್ಲಾ ನೋಡಿ ಕಲಿಯುವುದು ಬಹಳಷ್ಟಿದೆ ಎಂದರು.

ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿ.ಪ್ರಹ್ಲಾದ್ ಮಾತನಾಡಿ ಸಂಗ್ರಹಾಲಯಗಳಿಂದ ಹಲವಾರು ವಿಚಾರಗಳನ್ನು ತಿಳಿದುಕೊಳ್ಳಬಹುದು. ರಾಜ ವಂಶಸ್ಥರು, ಸಂಸ್ಕøತಿ, ಪರಂಪರೆ, ಇತಿಹಾಸಕ್ಕೆ ಸಂಬಂಧಪಟ್ಟ ಪ್ರಾಚೀನ ಕುರುಹುಗಳು, ಸಿಗುತ್ತವೆ. ನಮ್ಮ ಜಿಲ್ಲೆಯಲ್ಲಿ ನಾಲ್ಕು ಮ್ಯೂಸಿಯಂಗಳಿವೆ. ಎಲ್ಲವನ್ನು ಇತಿಹಾಸ ವಿಭಾಗದ ವಿದ್ಯಾರ್ಥಿಗಳು ನೋಡಬೇಕೆಂದು ತಿಳಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment