ಚಿತ್ರದುರ್ಗ(ಮೇ.6) : ಮೇ.14 ರಂದು ಹಿರಿಯೂರು ತಾಲ್ಲೂಕಿನ ಐತಿಹಾಸಿಕ ಧರ್ಮಪುರ ಕೆರೆಗೆ ವಿ.ವಿ.ಸಾಗರ ಜಲಾಶಯದಿಂದ ನೀರು ಬಿಡುವ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಮಿಸಲಿದ್ದಾರೆ. ಶಿಷ್ಟಾಚಾರ ಹಾಗೂ ಸುರಕ್ಷತಾ ಕ್ರಮಗಳೊಂದಿಗೆ ಕಾರ್ಯಕ್ರಮ ಆಯೋಜನೆಗೆ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ ಸೂಚನೆ ನೀಡಿದರು.
ಮುಖ್ಯಮಂತ್ರಿಗಳ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹಿರಿಯೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಇಲಾಖೆ ಅಡಿ ಕೈಗೊಳ್ಳುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಸಂಪೂರ್ಣ ವಿವರವನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ನೀಡಬೇಕು. ಭೂಮಿ ಪೂಜೆ,ಶಂಕುಸ್ಥಾಪನೆ,ಉದ್ಘಾಟನೆ ಹಾಗೂ ಲೋಕಾರ್ಪಣೆಗೆ ಸಿದ್ಧವಿರುವ ಕಾಮಗಾರಿಗಳ ವಿವರ ಹಾಗೂ ಮೊತ್ತಗಳನ್ನು ಮುಖ್ಯಮಂತ್ರಿಗಳ ಕಾರ್ಯಾಲಯಕ್ಕೆ ಕಳುಹಿಸಿಕೊಡಲಾಗುತ್ತದೆ. ವೇದಿಕೆ ಕಾರ್ಯಕ್ರಮ ಆಯೋಜನೆಗೆ ಸೂಕ್ತ ಸ್ಥಳವನ್ನು ತಹಶಿಲ್ದಾರರು ಪರಿಶೀಲಿಸಿ ಆಯ್ಕೆ ಮಾಡಬೇಕು. ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಜಿಲ್ಲಾ ಪಂಚಾಯಿತಿ ಅಡಿ ಬರುವ ಕಾರ್ಯಕ್ರಮಗಳ ವರದಿಯನ್ನು ಜಿ.ಪಂ ಸಿ.ಇ.ಓ ಮೂಲಕ ನೀಡಿ. ಸೂಕ್ತ ಪೆÇಲೀಸ್ ಬಂದೋಬಸ್ತ್ ಕಲ್ಪಿಸಬೇಕು ಎಂದರು.
ಸಭೆಯಲ್ಲಿ ಜಿ.ಪಂ ಸಿ.ಇ.ಓ.ಡಾ.ಕೆ. ನಂದಿನಿದೇವಿ, ಜಿಲ್ಲಾ ಪೆÇಲೀಸ್ ರಕ್ಷಣಾಧಿಕಾರಿ ಕೆ.ಪರಶುರಾಮ್, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.