Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜವಾಬ್ದಾರಿಯುತವಾಗಿ ಎಚ್ಚರಿಕೆಯಿಂದ ಮತ ಎಣಿಕೆಕಾರ್ಯ ನಿರ್ವಹಿಸಲು ಸೂಚನೆ : ಟಿ.ವೆಂಕಟೇಶ್

Facebook
Twitter
Telegram
WhatsApp

ಚಿತ್ರದುರ್ಗ : ಮೇ 21 : ಏಪ್ರಿಲ್ 26ರಂದು ನಡೆದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯವು ಜೂನ್ 04ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ನೂತನ ಕಟ್ಟಡದಲ್ಲಿ ನಡೆಯಲಿದ್ದು, ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ನಿಯೋಜಿತ ಅಧಿಕಾರಿ-ಸಿಬ್ಭಂಧಿಗಳು ತಮ್ಮ ಜಬಾಬ್ದಾರಿಯರಿತು ಪ್ರಜ್ಞಾಪೂರ್ವಕವಾಗಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಖಡಕ್ ಸೂಚನೆ ನೀಡಿದರು.

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಎಲ್ಲಾ ತಾಲೂಕುಗಳ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಮತ ಎಣಕೆ ಕಾರ್ಯಕ್ಕೆ ನಿಯೋಜಿತ ಅಧಿಕಾರಿ-ಸಿಬ್ಬಂಧಿಗಳಿಗೆ ಚುನಾವಣಾ ಕಾರ್ಯನಿರ್ವಹಣೆ ಕುರಿತು ಏರ್ಪಡಿಸಲಾಗಿದ್ದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಎಲ್ಲಾ ತಾಲೂಕುಗಳ ತಹಶೀಲ್ದಾರರು ತಮ್ಮ ಕ್ಷೇತ್ರದ ವ್ಯಾಪ್ತಿಯ ಮತಗಟ್ಟೆಗಳ ಮತಎಣಿಕೆ ಕಾರ್ಯಕ್ಕೆ ಅಗತ್ಯವಿರುವ ಸಿಬ್ಬಂಧಿಗಳನ್ನು ಮಾತ್ರ ಬಳಸಿಕೊಳ್ಳಬೇಕು. ಅಗತ್ಯಕ್ಕಿಂತ ಹೆಚ್ಚಿನ ಸಿಬ್ಭಂಧಿಯನ್ನು ನಿಯೋಜಿಸುವುದು ಸರಿಯಲ್ಲ. ನಿಯೋಜಿತ ಅಧಿಕಾರಿ-ಸಿಬ್ಬಂಧಿಗಳು ಮತ ಎಣಿಕೆ ದಿನದಂದು ಸಕಾಲದಲ್ಲಿ ಮತಎಣಿಕೆ ಕೇಂದ್ರದಲ್ಲಿ ತಮಗೆ ಸೂಚಿಸಿದ ಸ್ಥಳದಲ್ಲಿ ಹಾಜರಿದ್ದು ಅನವಶ್ಯಕ ಚರ್ಚೆಗಳಿಗೆ ಅವಕಾಶವಿಲ್ಲದಂತೆ ಕಾರ್ಯನಿರ್ವಹಿಸಲು ಸೂಚಿಸಿದರು.

ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರತಿ ತಾಲೂಕುವಾರು ಪ್ರತ್ಯೇಕವಾಗಿ ಮತಎಣಿಕೆ ನಡೆಯಲಿದೆ. ಪ್ರತಿ ಸುತ್ತಿನ ಮತಎಣಿಕೆಯ ದಾಖಲೆಗಳನ್ನು ನಿರ್ವಹಿಸಿ, ಸಕ್ಷಮ ಅಧಿಕಾರಿಗಳಿಗೆ ನೀಡಿ ಸಹಿ ಪಡೆದುಕೊಳ್ಳಬೇಕು. ಅದರ ಸಂಪೂರ್ಣ ಜವಾಬ್ದಾರಿಯನ್ನು ಆಯಾ ತಾಲೂಕುಗಳ ತಹಶೀಲ್ದಾರರೆ ನೋಡಿಕೊಳ್ಳಬೇಕು. ಈ ಎಲ್ಲಾ ಚುನಾವಣಾ ಕಾರ್ಯದ ಉಸ್ತುವಾರಿ ಹಾಗೂ ಅಗತ್ಯತೆಗಳನ್ನು ಚುನಾವಣಾ ವೀಕ್ಷಕರ ಉಪಸ್ಥಿತಿಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಗಮನಿಸಲಿದ್ದಾರೆ ಎಂದರು.

 

ಚುನಾವಣಾ ಕಾರ್ಯದ ವ್ಯವಸ್ಥಿತ ನಿರ್ವಹಣೆಗೆ ನಿಯೋಜಿತ ಅಧಿಕಾರಿ-ಸಿಬ್ಬಂಧಿಗಳಿಗೆ ಅಗತ್ಯ ತರಬೇತಿಯನ್ನು ನೀಡಲು ಈಗಾಗಲೇ ದಿನಾಂಕವನ್ನು ನಿಗಧಿಪಡಿಸಲಾಗಿದೆ. ಮತಎಣಿಕೆ ಕಾರ್ಯವು ಯಾವುದೇ ಅಡತಡೆಗಳಿಲ್ಲದೆ ಸುಗಮವಾಗಿ ನಡೆಸಲು ಹಾಗೂ ಈ ಎಲ್ಲಾ ವಿದ್ಯಾಮಾನಗಳನ್ನು ಸಕಾಲದಲ್ಲಿ ಜನರಿಗೆ ತಲುಪಿಸುವುದರ ಜೊತೆಗೆ ವ್ಯವಸ್ಥಿತವಾಗಿ ದಾಖಲೆಗಳನ್ನು ನಿರ್ವಹಿಸಲು ಗಣಕಯಂತ್ರ, ಮುದ್ರಣಯಂತ್ರ, ಝೆರಾಕ್ಸ್, ಇಂಟರ್‍ನೆಟ್ ಸಂಪರ್ಕ ಮತ್ತಿತರ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಜವಾಬ್ದಾರಿಯುತ ಅಧಿಕಾರಿಗಳಿಗೆ ಹೊಣೆಗಾರಿಕೆ ವಹಿಸಲಾಗಿದೆ ಎಂದರು.

ಮತಎಣಿಕೆ ಕಾರ್ಯವನ್ನು ಸಕಾಲದಲ್ಲಿ ಆರಂಭಿಸಿ, ತ್ವರಿತವಾಗಿ ಫಲಿತಾಂಶ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದ ಅವರು, ಈ ಅವಧಿಯಲ್ಲಿ ಕ್ಷೇತ್ರದ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಹಾಗೂ ಶಾಂತಿ-ಸುವ್ಯವಸ್ಥೆ ಕಾಪಾಡಲು ಅಗತ್ಯ ರಕ್ಷಣಾ ಸಿಬ್ಬಂಧಿಗಳ ಸೇವೆಯನ್ನು ಬಳಸಿಕೊಳ್ಳಲಾಗುವುದು ಎಂದವರು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಕಾರ್ತೀಕ್ ಸೇರಿದಂತೆ ಶಿರಾ ಮತ್ತು ಪಾವಗಡ ಸೇರಿದಂತೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ಸಹಾಯಕ ಚುನಾವಣಾಧಿಕಾರಿಗಳು, ನಿಯೋಜಿತ ಅಧಿಕಾರಿ-ಸಿಬ್ಬಂಧಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಾಸಕ ಎನ್.ವೈ.ಗೋಪಾಕೃಷ್ಣ ಅವರಿಗೆ ಹುಟ್ಟುಹಬ್ಬದ ಸಂಭ್ರಮ : ಶುಭಕೋರಿದ ಕಾಂಗ್ರೆಸ್ ಮುಖಂಡರು

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜುಲೈ.03 : ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಕೃಷ್ಣರವರಿಗೆ ಬೃಹದಾಕಾರವಾದ ಹಾರ ಹಾಕಿ ಕಾಂಗ್ರೆಸ್‍ನಿಂದ ಹುಟ್ಟುಹಬ್ಬದ ಶುಭಾಷಯಗಳನ್ನು ಕೋರಲಾಯಿತು.

ತುರುವನೂರು ರಸ್ತೆಯಲ್ಲಿ ಡಿವೈಡರ್ ತೆರವು, ಚಳ್ಳಕೆರೆ ಗೇಟ್ ನಲ್ಲಿ ಹೊಸ ಸಂಚಾರಿ ವೃತ್ತ ನಿರ್ಮಾಣ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಜು. 03:   ನಗರದ ಸಂಚಾರ ದಟ್ಟಣೆ ಹಾಗೂ ಸಮಸ್ಯೆ ಕುರಿತು ಸಂಚಾರ ಠಾಣೆ ಪೊಲೀಸರು ಸಮೀಕ್ಷೆ ನಡೆಸಿ,  ಪರಿಹಾರಕ್ಕಾಗಿ ಸೂಕ್ತ ವರದಿ ಸಿದ್ಧಪಡಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಮಗ್ರ ಚರ್ಚೆ ನಡೆಸಿ, ಸಾಧಕ

ಮೂಡಾ ಸೈಟ್ ಗಳ ಅಕ್ರಮ : ನಾನ್ಯಾಕೆ ರಾಜೀನಾಮೆ ಕೊಡಬೇಕೆಂದು ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ..!

ಬೆಂಗಳೂರು: ಸಿಎಂ ಧರ್ಮ ಪತ್ನಿ ಪಾರ್ವತಿ ಅವರ ಹೆಸರಲ್ಲೂ ಮೂಡ ಸೈಟುಗಳು ರಿಜಿಸ್ಟರ್ ಆಗಿದ್ದವು. ಇದನ್ನು ಖಂಡಿಸಿದ ವಿಪಕ್ಷದವರು ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕೆಂದು ವಿಪಕ್ಷ ನಾಯಕ ಆರ್ ಅಶೋಕ್ ಆಗ್ರಹಿಸಿದರು. ಈ

error: Content is protected !!