ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ, ಡಿ. 27 :
ಚಳ್ಳಕೆರೆ ತಾಲೂಕಿನ ದೊಡ್ಡ ಉಳ್ಳಾರ್ತಿ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಎರಚಿ ಅಪಮಾನ ಮಾಡಿದ್ದು ಭಾವಚಿತ್ರಕ್ಕೆ ಅಪಮಾನ ಮಾಡಿದ ಕಿಡಿಗೇಡಿಗಳನ್ನು ಬಂಧಿಸಿ ಶಿಕ್ಷೆಗೆ ಗುರಿಪಡಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾರಕ್ಷಣಾಧಿಕಾರಿಗಳಲ್ಲಿ ಕಾಂಗ್ರೆಸ್ ಪಕ್ಷದ ಎಸ್.ಸಿ. ಘಟಕದ ಜಿಲ್ಲಾಧ್ಯಕ್ಷರಾದ ಜಯ್ಯಣ್ಣ ಆಗ್ರಹಿಸಿದ್ದಾರೆ.
ಈ ಬಗ್ಗೆ ಹೇಳೀಕೆಯನ್ನು ನೀಡಿರುವ ಅವರು, ಚಳ್ಳಕೆರೆ ತಾಲೂಕಿನ ದೊಡ್ಡ ಉಳ್ಳಾರ್ತಿ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಎರಚಿ ಅಪಮಾನ ಮಾಡಲಾಗಿದ್ದು, ಗ್ರಾಮಾಂತರ ಭಾಗದಲ್ಲಿ ಸಾಮಾಜಿಕ ಸಮಸ್ಯೆಗಳು ಇನ್ನೂ ಜೀವಂತವಾಗಿವೆ. ಜಾತಿ ತಾರತಮ್ಯ, ಪರಿಶಿಷ್ಟರ ಮೇಲಿನ ಹಲ್ಲೆ, ದೌರ್ಜನ್ಯ, ತಾರತಮ್ಯ ನಿಂತಿಲ್ಲ. ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದರನ್ನು ಶಿಕ್ಷೆಗೆ ಗುರಿಪಡಿಸಬೇಕು ಆಗ್ರಹಿಸಿದರು.
ಅಂಬೇಡ್ಕರ್‍ರವರು ನಮಗೆ ಸಂವಿಧಾನವನ್ನು ನೀಡಿದ ಮಹಾನ್ ವ್ಯಕ್ತಿಯಾಗಿದ್ದಾರೆ ಇಂತಹ ವ್ಯಕ್ತಿಯನ್ನು ಅವಮಾನ ಮಾಡಿರುವುದು ಅಕ್ಷ್ಯಮ ಅಪರಾಧವಾಗಿದೆ ಇದನ್ನು ಯಾರೇ ಮಾಡಿರಲಿ ಅವರಿಗೆ ಸರಿಯಾದ ಶಿಕ್ಷೆಯನ್ನು ನೀಡಬೇಕು, ಅವರು ಇನ್ನೂ ಮುಂದೆ ಈ ರೀತಿ ಯಾವ ಭಾವಚಿತ್ರಕ್ಕೂ ಸಹಾ ಅವಮಾನ ಮಾಡದಂತೆ ಎಚ್ಚರಿಕೆಯನ್ನು ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾರಕ್ಷಣಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.

