ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮೇ. 27 : ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿರುವ ಕೆ.ಎನ್.ಜಗದೀಶ್‍ಕುಮಾರ್ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಪವಿತ್ರ ಜಿಲ್ಲಾ ರಕ್ಷಣಾಧಿಕಾರಿಗೆ ಮಂಗಳವಾರ ಮನವಿ ಸಲ್ಲಿಸಿದರು.
ನಾಗಲಕ್ಷ್ಮಿ ಚೌಧರಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆಯಾದಾಗಿನಿಂದಲೂ 26 ಜಿಲ್ಲೆಗಳಲ್ಲಿ ಮಿಂಚಿನ ಪ್ರವಾಸ ನಡೆಸಿ ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯ, ದಬ್ಬಾಳಿಕೆ, ಅತ್ಯಾಚಾರಗಳ ವಿರುದ್ದ ಹೆಣ್ಣು ಮಕ್ಕಳಲ್ಲಿ ಅರಿವು ಮೂಡಿಸಿ ಮಹಿಳೆಯರ ರಕ್ಷಣೆಗಾಗಿಯೇ ಇರುವ ಕಾನೂನುಗಳ ಬಗ್ಗೆ ಜಾಗೃತಿ ಮೂಡಿಸುತ್ತಿರುವುದನ್ನು ಸಹಿಸಿಕೊಳ್ಳದ ಕೆ.ಎನ್.ಜಗದೀಶ್‍ಕುಮಾರ್ ಹಗುರವಾಗಿ ಮಾತನಾಡಿರುವುದು ಖಂಡನೀಯ. ತಕ್ಷಣವೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಅಹಿಂದ ಕಾರ್ಮಿಕ ಅಧ್ಯಕ್ಷ ಪಾಂಡುರಂಗಪ್ಪ, ನಾಗಲಕ್ಷ್ಮಿಚೌಧರಿ ಅಭಿಮಾನಿಗಳ ಬಳಗದ ರಮೇಶ್ ನಂದಿಹಳ್ಳಿ, ಓಂಕಾರಪ್ಪ, ಹರಿಯಬ್ಬೆ ತಿಪ್ಪೇಸ್ವಾಮಿ ಇವರುಗಳು ಈ ಸಂದರ್ಭದಲ್ಲಿದ್ದರು.












