Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಂತರ ಜಿಲ್ಲಾ ಸಾಹಿತ್ಯ ಸಮ್ಮೇಳನ : ಸೆಪ್ಟೆಂಬರ್ 24 ರಂದು ಸಾಣೆಹಳ್ಳಿಯಲ್ಲಿ ಪೂರ್ವಭಾವಿ ಸಭೆ

---Advertisement---

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.19 :
ಅಂತರ ಜಿಲ್ಲಾ ಸಾಹಿತ್ಯ ಸಮ್ಮೇಳನ ಆಯೋಜನೆಯ ಬಗ್ಗೆ ಸಭೆ ಸಾಹಿತ್ಯ,ಕಲೆ,ಸಂಸ್ಕøತಿಗಳಲ್ಲಿ ಪರಸ್ಪರ ಹತ್ತಿರವಿರುವ ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕನ್ನಡ ಸಾಹಿತ್ಯ ಪರಿಷತ್ತು ಘಟಕಗಳ ಜಂಟಿಯಾಗಿ ಪ್ರಥಮ ಅಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲು ಉದ್ದೇಶಿಸಲಾಗಿದೆ.

ಇದಕ್ಕೆ ಪೂರಕವಾಗಿ ಹೊಸದುರ್ಗ ತಾಲ್ಲೂಕು ಸಾಣೇಹಳ್ಳಿಯಲ್ಲಿ  ದಿನಾಂಕ 24.09.2023 ರ ಭಾನುವಾರ ಬೆಳಗ್ಗೆ 11 ಕ್ಕೆ ಹೊಸದುರ್ಗ ತಾಲ್ಲೂಕು ಸಾಣೆಹಳ್ಳಿ ಶ್ರೀಮಠದ ಆವರಣದಲ್ಲಿ ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿದೆ.

ಸಾಣೆಹಳ್ಳಿಯ ಶ್ರೀ ಪಂಡಿತಾರಾಧ್ಯ ಸ್ವಾಮೀಜಿ ಸಾನಿಧ್ಯದಲ್ಲಿ ಸಭೆ ಜರುಗಲಿದೆ. ಕಸಾಪ ಗೌರವ ಸಲಹೆಗಾರರಾದ ಎ.ಸಿ.ಚಂದ್ರಪ್ಪ, ಚಿತ್ರದುರ್ಗ ಕಸಾಪ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ, ಚಿಕ್ಕಮಗಳೂರು ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್,ಹೊಸದುರ್ಗ ತಾಲ್ಲೂಕು ಕಸಾಪ ಅಧ್ಯಕ್ಷ ಬಿ.ಪಿ.ಓಂಕಾರಪ್ಪ, ಹೊಳಲ್ಕೆರೆ ಕಸಾಪ ಅಧ್ಯಕ್ಷ ಎನ್. ಶಿವಮೂರ್ತಿ ಸೇರಿದಂತೆ ಕಸಾಪದ ಪದಾಧಿಕಾರಿಗಳು ಮತ್ತಿತರರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆಯಲ್ಲಿ ಸಮ್ಮೇಳನ ದಿನಾಂಕ, ಸ್ಥಳ ಸೇರಿದಂತೆ ಪ್ರಮುಖ ವಿಷಯಗಳನ್ನು ಕುರಿತು ಚರ್ಚಿಸಲಾಗುವುದು ಎಂದು ಚಿತ್ರದುರ್ಗ ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ. ಶಿವಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment