ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮೇ. 08 : ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವುದಕ್ಕಾಗಿ ರಾಜ್ಯ ಸರ್ಕಾರ ಮೇ.5 ರಿಂದ ಆರಂಭಿಸಿರುವ ಮನೆ ಮನೆ ಸಮೀಕ್ಷೆಯಲ್ಲಿ ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್ ಪಾಲ್ಗೊಂಡು ಕಡ್ಡಾಯವಾಗಿ ಮಾದಿಗ ಎಂದು ಬರೆಸುವಂತೆ ಜಾಗೃತಿ ಮೂಡಿಸಿದರು.

ನಗರದ ಕೆಳಗೋಟೆಯ ಅಂಬೇಡ್ಕರ್ ಬಡಾವಣೆಯಲ್ಲಿ ಗುರುವಾರ ನಡೆದ ಮನೆ ಮನೆ ಗಣತಿಯಲ್ಲಿ ಭಾಗವಹಿಸಿದ್ದ ಜಿ.ಎಸ್.ಮಂಜುನಾಥ್ ಮಾದಿಗ ಜನಾಂಗ ಯಾವುದೇ ಕಾರಣಕ್ಕೂ ಆದಿ ಕರ್ನಾಟಕ, ಆದಿ ದ್ರಾವಿಡ ಎಂದು ನಮೂದಿಸಬಾರದು. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಹಿಂದುಳಿದಿರುವ ಈ ಸಮಾಜ ಜಾತಿ ಗಣತಿಯಲ್ಲಿ ಮಾದಿಗ ಎಂದು ನಮೂದಿಸದಿದ್ದರೆ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಪರಿಶಿಷ್ಟ ಜಾತಿಯಲ್ಲಿನ ಒಳ ಜಾತಿಗಳಿಗೆ ಆಯಾ ಜನಸಂಖ್ಯೆಗನುಗುಣವಾಗಿ ಮೀಸಲಾತಿಯನ್ನು ಕಲ್ಪಿಸಲು ನೆರವಾಗಲಿದೆ ಎಂದರು.
ಒಳ ಮೀಸಲಾತಿಯನ್ನು ಜಾರಿಗೊಳಿಸುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿಗಿದೆ ಎಂದು ಸುಪ್ರೀಂಕೋರ್ಟ್ ನೀಡಿರುವ ಮಹತ್ತರ ತೀರ್ಪಿನಂತೆ ರಾಜ್ಯ ಸರ್ಕಾರ ಒಳ ಮೀಸಲಾತಿ ವರ್ಗಿಕರಣಕ್ಕೆ ಮುಂದಾಗಿದ್ದು, ಮೇ 17 ರವರೆಗೆ ಜಾತಿ ಸಮೀಕ್ಷೆ ನಡೆಯಲಿದೆ. ಗಣತಿದಾರರು ಮನೆ ಮನೆಗೆ ಭೇಟಿ ನೀಡಿದಾಗ ನಿಖರವಾದ ಮಾಹಿತಿ ನೀಡಿ ಮಾದಿಗ ಎಂದು ಬರೆಸಿ ಶೈಕ್ಷಣಿಕ ಮತ್ತು ಉದ್ಯೋಗಕ್ಕೆ ಅವಕಾಶ ಮಾಡಿಕೊಳ್ಳಬೇಕಿದೆ ಎಂದು ತಿಳಿಸಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











