ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಮಾ. 31 : ಸರ್ಕಾರ ನೇಮಕಾತಿಗೆ ಮುಂದಾಗಿರುವ ಹುದ್ದೆಗಳಿಗೆ ಒಳ ಮೀಸಲಾತಿಯನ್ನು ಅಳವಡಿಸಿಕೊಂಡೇ ನೇಮಕಾತಿ ಮಾಡಲಾಗುವುದು.ಈಗ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ ಅದು ಅಂತಿಮವಾಗುವುದರೊಳಗೆ ನಮ್ಮ ಸರ್ಕಾರ ಒಳ ಮೀಸಲಾತಿಯನ್ನು ಜಾರಿ ಮಾಡಲಿದ್ದು ಅದರಂತೆಯೇ ನೇಮಕಾತಿ ಪ್ರಕ್ರಿಯೆ ನಡೆದು ಎಲ್ಲಾ ಸಮುದಾಯದ ನಿರುದ್ಯೋಗಿ ಅಭ್ಯರ್ಥಿಗಳು ನ್ಯಾಯ ಸಿಗಲಿದೆ ಇದರಲ್ಲಿ ಯಾವುದೇ ಆತಂಕ ಬೇಡ ಎಂದು ಆಹಾರ ಮತ್ತು ನಾಗರೀಕ ಪೋರೈಕೆ ಸಚಿವರಾದ ಕೆ.ಹೆಚ್. ಮುನಿಯಪ್ಪ ತಿಳಿಸಿದರು.
ಚಿತ್ರದುರ್ಗ ನಗರಕ್ಕೆ ಬೇಟಿ ನೀಡಿದ್ದ ಆವರು ಶಿವ ಶರಣ ಮಾದಾರ ಚನ್ನಯ್ಯ ಗುರುಪೀಠದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರ ಮೀಸಲಾತಿಯ ಪ್ರಮಾಣವನ್ನುಶೇ 56% ಕ್ಕೆ ಏರಿಸಿದೆ.. ಆದರೆ ನ್ಯಾಯಾಲಯ ಶೇ 50% ಕ್ಕೆ ಒಳಪಡಿಸುವಂತೆ ಆದೇಶ ನೀಡಿದೆ.ಈ ಆದೇಶದ ಹಿನ್ನೆಲೆಯಲ್ಲಿ ಎಲ್ಲಾ ಸಮುದಾಯಗಳಿಗೆ ಮೀಸಲಾತಿ ಪ್ರಮಾಣವನ್ನು ಸ್ವಲ್ಪಮಟ್ಟಿಗೆ ಕಡಿಮೆ ಮಾಡಿ ಜಾರಿಗೊಳಿಸಲು ಎಲ್ಲಾ ಸಮುದಾಯದ ಮುಖಂಡರುಗಳು ಸಮ್ಮತಿಸಿದ್ದಾರೆ.ಇದರ ಬಗ್ಗೆ ಅಂತಿಮವಾಗಿ ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಿ ಉಪಚುನಾವಣೆಯ ನಂತರ ಜಾರಿ ಮಾಡಲಾಗುವುದು ಎಂದ ಅವರು, ಒಳ ಮೀಸಲಾತಿಗೆ ಸಂಬಂಧಪಟ್ಟಂತೆ ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳು ಕಳೆದ 35 ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿವೆ. ಇದರ ಜಾರಿಗೆ ಹಲವಾರು ಆಯೋಗಗಳನ್ನು ರಚನೆ ಮಾಡಿ ವರದಿಯನ್ನ ತಯಾರಿಸಲಾಗಿದ್ದು.. ಇದರ ಬಗ್ಗೆ ಈಗಾಗಲೇ ಸಚಿವ ಸಂಪುಟದಲ್ಲಿ ಎರಡು ಮೂರು ಬಾರಿ ಚರ್ಚೆ ನಡೆದಿದ್ದು ಅಂತಿಮವಾಗಿ ಮಾರ್ಚ್ 27ರಂದು ವಿಶೇಷ ಅಧಿವೇಶನದಲ್ಲಿ ಸರ್ಕಾರ ಜಾರಿ ಮಾಡಲು ಮುಂದಾಗಿತ್ತು ಆದರೆ ಉಪ ಚುನಾವಣೆಯ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಜಾರಿಯನ್ನು ಮುಂದೂಡಲಾಗಿದೆ ಎಂದು ಸಚಿವರು ತಿಳಿಸಿದರು.
ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆಯ ನೀತಿ ಸಂಹಿತೆ ಮುಗಿದ ನಂತರ ಒಳ ಮೀಸಲಾತಿಯನ್ನು ಜಾರಿ ಮಾಡಲಾಗುವುದು ಇದರಲ್ಲಿ ಯಾವುದೇ ಆತಂಕ ಬೇಡ.ನಮ್ಮ ನೆರೆ ರಾಜ್ಯಗಳು ಈಗಾಗಲೇ ಒಳ ಮೀಸಲಾತಿ ಯನ್ನು ಜಾರಿ ಮಾಡಿವೆ.. ಅದರಂತೆ ನಮ್ಮ ರಾಜ್ಯದಲ್ಲೂ ಸಹ ಜಾರಿಯಾಗಲಿದೆಪರಿಶಿಷ್ಟ ಜಾತಿಯಲ್ಲಿ 101 ಉಪ ಜಾತಿಗಳಿವೆ.ಸಮಗಾರ, ಡೆಕ್ಕರ್, ಡೋಲರ್ ಇವರೆಲ್ಲ ಮಾದಿಗ ಸಮುದಾಯಕ್ಕೆ ಸಂಬಂಧ ಪಟ್ಟವರು.. ಈ ಜನರಿಗೆ ಸ್ವಲ್ಪ ಗೊಂದಲ ಇದೆ.ಇವರಿಗೆ ಯಾವ ರೀತಿ ಪ್ರಾತಿನಿಧ್ಯತೆ ಕೊಡಬೇಕು ಎಂಬುದರ ಸಲುವಾಗಿ ಉಪ ಸಮುದಾಯದ ನಾಯಕರೊಂದಿಗೆ ಸಭೆಯ ಮಾಡಲಿದ್ದೇವೆ.. ನಿಮಗೇನು ಅನ್ಯಾಯ ಆಗಿದೆ ಅದನ್ನು ಕೊಡಲಿಕ್ಕೆ ಸರ್ಕಾರ ಬದ್ದವಾಗಿದೆ ಎಂದು ತಿಳಿಸಿದ ಸಚಿವರು, ಕೆ.ಹೆಚ್ ಮುನಿಯಪ್ಪನವರು ಮಾದಿಗ ಮಹಾಸಭಾ ಕಟ್ಟಿಕೊಂಡು ಜನರನ್ನ ಗೊಂದಲಕ್ಕೆ ಈಡು ಮಾಡುತ್ತಾರೆ ಎಂಬ ಕಾರಜೋಳರವರು ಹೇಳಿಕೆಗೆ ಪ್ರತಿಕ್ರಿಯಿಸಿ ಅವರ ಸರ್ಕಾರದ ಅವಧಿಯಲ್ಲಿ ಮೀಸಲಾತಿಯನ್ನು ಹೆಚ್ಚಳ ಮಾಡಿದ್ದು ಸಂತೋಷ.. ಆದರೆ ಅವರದೇ ಸರ್ಕಾರ ಇತ್ತು 9ನೇಶೆಡ್ಯೂಲಿಗೆ ಸೇರಿಸಬಹುದಾಗಿತ್ತು ಎಂದು ಸಂಸದರಿಗೆ ಟಾಂಗ್ ನೀಡಿದರು.
ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಸಿಲೆಂಡರ್ ಗ್ಯಾಸ್‍ನ ಅಭಾವವಿಲ್ಲ.. ಸರಿಯಾದ ರೀತಿಯಲ್ಲಿ ವಿತರಣೆ ಆಗುತ್ತಿದೆ.. ಯಾರಾದರೂ ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡ ಬಂದರೆ ಅಂತವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು.ಇದಲ್ಲದೆ ರಾಜ್ಯಕ್ಕೆ ಹೆಚ್ಚಿನ ರೀತಿಯಲ್ಲಿ ಪೆಟ್ರೋಲ್ ಹಾಗೂ ಸಿಲೆಂಡರ್ ಗ್ಯಾಸ್ ನೀಡುವಂತೆ ಕೇಂದ್ರಕ್ಕೆ ಪತ್ರವನ್ನು ಸಹ ಬರೆಯಲಾಗಿದೆ ಎಂದ ಸಚಿವ ಮುನಿಯಪ್ಪ 2023 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಪಂಚ ಗ್ಯಾರಂಟಿಗಳನ್ನ ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷ ಬಾಗಲಕೋಟೆ ಹಾಗೂ ದಾವಣಗೆರೆ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲಿದೆ.ಇದಕ್ಕೆ ಎಲ್ಲಾ ಮತದಾರರು ಮತ ನೀಡುವುದರ ಮುಖಾಂತರ ಆಶೀರ್ವಾದ ನೀಡಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲಿದ್ದಾರೆ. ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ರವರ ಮೊಮ್ಮಗ ಹಾಗೂ ಬಾಗಲಕೋಟೆಯಲ್ಲಿ ಮೇಟಿರವರ ಮಗ ಉಮೇಶ್ ಮೇಟಿರವರಿಗೆ ಟಿಕೆಟ್ ನೀಡಲಾಗಿದೆ.. ಇವರನ್ನು ಉಪಚುನಾವಣೆಯಲ್ಲಿ ಗೆಲ್ಲಿಸುವ ಮುಖಾಂತರ ಅವರ ಮೃತ ಹಿರಿಯರ ಆತ್ಮಕ್ಕೆ ಶಾಂತಿಯನ್ನು ನೀಡಬೇಕಾಗಿದೆ ಎಂದರು.
ಗೋಷ್ಟಿಯಲ್ಲಿ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಕಾಂಬ್ಲೆ ಸಂತೋಷ ಡಿಸಿಸಿ ಕಾರ್ಯಾಧ್ಯಕ್ಷರಾದ ಹಾಲಸ್ವಾಮಿ ಸೇರಿದಂತೆ ಇತರರು ಭಾಗವಹಿಸಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್