Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಒಳಮೀಸಲಾತಿ ಜಾರಿ : ಚಿತ್ರದುರ್ಗದಲ್ಲಿ ಆಗಸ್ಟ್ 24 ರಂದು ವಿಜಯೋತ್ಸವ : ಮಾಜಿ ಸಚಿವ ಎಚ್.ಆಂಜನೇಯ

---Advertisement---

 

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 22 : ಒಳಮೀಸಲಾತಿ ಹೋರಾಟವು ಆಗಸ್ಟ್ 19ರಂದು ಫಲ ನೀಡಿದ್ದು, ಈ ಕಾರಣಕ್ಕೆ ಆಗಸ್ಟ್ 24ರ ಭಾನುವಾರ ಬೆಳಗ್ಗೆ 10.30ಕ್ಕೆ ಚಿತ್ರದುರ್ಗ ನಗರದಲ್ಲಿ ಸಂಭ್ರಮೋತ್ಸವ ಹಾಗೂ ಕೃತಜ್ಞತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದ್ದಾರೆ.

ಒಳಮೀಸಲಾತಿ ಕಲ್ಪನೆ ಹುಟ್ಟು ಹಾಕಿದ ಮಂದಕೃಷ್ಣ ಮಾದಿಗ ಅವರ ಹೋರಾಟದ ರಥವನ್ನು ರಾಜ್ಯದಲ್ಲಿ ಮುನ್ನಡೆಸಿದವರು. ಲಕ್ಷಾಂತರ ಮಂದಿ ಮಾದಿಗರು, ರಾಜಕಾರಣಿಗಳು, ನೌಕರರು, ವಿದ್ಯಾರ್ಥಿಗಳು. ಮಾದಿಗ ದಂಡೋರ, ಮಾದಿಗ ಮೀಸಲಾತಿ ಹೋರಾಟ ಸಮಿತಿ, ದಸಂಸ ಸೇರಿ ನೂರಾರು ಸಂಘಟನೆಗಳು ಸುದೀರ್ಘ 35 ವರ್ಷ ಹೋರಾಟದ ಹಾದಿ ಸವಿಸಿವೆ.

ಜೊತೆಗೆ ಸುಪ್ರೀಂ ಕೋರ್ಟ್‌ನಲ್ಲಿ ಅನೇಕರು ಒಳಮೀಸಲಾತಿ ಏಕೆ ಬೇಕೆಂದು ಸಮರ್ಥವಾಗಿ ವಾದ ಮಂಡಿಸಲು ಬೆನ್ನಿಗೆ ನಿಂತಿದ್ದಾರೆ. ಮುಖ್ಯವಾಗಿ ಒಳಮೀಸಲಾತಿ ಜಾರಿಗೆ ಇದ್ದ ಅಡೆತಡೆಗಳನ್ನು ಮೆಟ್ಟಿ ನಿಂತು ಸಾಮಾಜಿಕ ನ್ಯಾಯದ ಹರಿಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ವರದಿ ಜಾರಿಗೊಳಿಸಿದ್ದಾರೆ. ಮಾದಿಗ ಸಮುದಾಯಕ್ಕೆ ಶೇ.6 ಮೀಸಲಾತಿ ನೀಡಿ ನುಡಿದಂತೆ ನಡೆದಿದ್ದಾರೆ. ಆದ್ದರಿಂದ ಸುದೀರ್ಘ 35 ವರ್ಷಗಳ ಕಾಲದ ಹೋರಾಟದ ಹಾದಿಯಲ್ಲಿ ಹೆಜ್ಹೆ ಹಾಕಿದವರನ್ನು ಸ್ಮರಿಸುವುದು ಹಾಗೂ ಒಳಮೀಸಲಾತಿ ಜಾರಿಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸಬೇಕಾಗಿದೆ. ಜೊತೆಗೆ ನಾವೆಲ್ಲರೂ ಒಂದೇಡೆ ಸೇರಿ ಸಂಭ್ರಮಿಸಿ, ವಿಜಯೋತ್ಸವ ಆಚರಿಸಬೇಕಾಗಿದೆ.

ಆದ್ದರಿಂದ ಆಗಸ್ಟ್ 24 ಭಾನುವಾರ ಬೆಳಗ್ಗೆ 10.30ಕ್ಕೆ ಚಿತ್ರದುರ್ಗದ ಒನಕೆ ಓಬವ್ವ ವೃತ್ತದಲ್ಲಿ ಸಂಭ್ರಮಾಚಾರಣೆ, ವಿಜಯೋತ್ಸವ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಲ್ಲಿಂದಲೇ ಕೃತಜ್ಞತೆ ಸಲ್ಲಿಸಲು ಕಾರ್ಯಕ್ರಮ ಹಮ್ಮಿಕೊಳ್ಳಕಾಗಿದೆ.

ಅಂದು ಹೆಚ್ಚಿನ ಸಂಖ್ಯೆಯಲ್ಲಿ ಮಾದಿಗ ಸಮುದಾಯದವರು ಹಾಗೂ ಒಳ ಮೀಸಲಾತಿಗಾಗಿ ಹೋರಾಟದೊಂದಿಗೆ ಹೆಜ್ಜೆ ಹಾಕಿದವರು, ಸಮುದಾಯದ ಮುಖಂಡರು, ರಾಜಕಾರಣಿಗಳು ಹಾಗೂ ಒಳಮೀಸಲಾತಿ ಪರವಿದ್ದ ಸಹೋದರ ಸಮಾಜದ ಮುಖಂಡರು ಸೇರಿ ಎಲ್ಲ ವರ್ಗದವರು ಪಾಲ್ಗೊಳ್ಳುವಂತೆ ಮಾಜಿ ಸಚಿವ ಎಚ್.ಆಂಜನೇಯ ವಿನಂತಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment