Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಒಳಮೀಸಲಾತಿ ವಿಚಾರ : ಗುರುವಾರಕ್ಕೆ ಡೆಡ್ ಲೈನ್ ಕೊಟ್ಟ ಸಮಿತಿ

---Advertisement---

 

ಬೆಂಗಳೂರು: ಒಳಮೀಸಲಾತಿಯನ್ನ ಜಾರಿ ಮಾಡದೆ ಹುದ್ದೆಗಳ ನೇಮಕಾತಿ ಮಾಡಬೇಕು ಎನ್ನುತ್ತಿದೆ ಸರ್ಕಾರ. ಆದ್ರೆ ಮೊದಲು ಒಳಮೀಸಲಾತಿ ಜಾರಿ‌ ಮಾಡಿ ಎಂದು ಸಮಿತಿ ಪಟ್ಟು ಹಿಡಿದಿದೆ. ಇಂದು ಕರ್ನಾಟಕ ಸಮಸ್ತ ಒಳಮೀಸಲಾತಿ ಸಮಿತಿ ಸುದ್ದಿಗೋಷ್ಠಿ ನಡೆಸಿ, ಸರ್ಕಾರಕ್ಕೆ ಡೆಡ್ಲೈನ್ ನೀಡಿದೆ.

ಒಳಮೀಸಲಾತಿ ಸಮಿತಿಯೂ ಸರ್ಕಾರದ ನಿರ್ಧಾರವನ್ನು ಖಂಡಿಸಿದ್ದು, ಗುರುವಾರ 12ನೇ ತಾರೀಖಿನಂದು ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ. ಫೆಬ್ರವರಿ 26ರ ಸಂಪುಟದ ಉದ್ಯೋಗ ಭರ್ತಿ ತೀರ್ಮಾನಕ್ಕೆ ವಿರೋಧಿಸಿ, ಒಳಮೀಸಲಾತಿ ತಪ್ಪಿಸುವ ಹುನ್ನಾರ ಅಂತ ಟೀಕಿಸಿದೆ. ಈ ಆದೇಶ ಹಿಂಪಡೆಯದಿದ್ದರೆ ಸಾಮಾಜಿಕ ನ್ಯಾಯದ ಬಗ್ಗೆ ಮಾತನ್ನಾಡುವ ನೈತಿಕತೆ ಸಿಎಂ ಸಿದ್ದರಾಮಯ್ಯ ಅವರಿಗೆ ಇರುವುದಿಲ್ಲ ಎಂದು ಮಾರಸಂದ್ರ ಮುನಿಯಪ್ಪ ಕಟುವಾಗಿ ಟೀಕಿಸಿದ್ದಾರೆ.

ದಲಿತ ಒಳಮೀಸಲಾತಿ ನೀಡಿಕೆಯು ರಾಜ್ಯ ಕಾಂಗ್ರೆಸ್  ಸರ್ಕಾರದಲ್ಲಿ ಜಟಾಪಟಿಗೆ ಕಾರಣವಾಗಿದೆ. ಸರ್ಕಾರ ಒಲಮೀಸಲಾತಿ ನೀಡದೇ ಸರ್ಕಾರಿ ನೌಕರರ ನೇಮಕಾತಿಗೆ ಮುಂದಾಗಿದೆ. ಇದಕ್ಕೆ ದಲಿತ ಎಡಗೈ ನಾಯಕರು ವಿರೋಧಿಸುತ್ತಿದ್ದಾರೆ. ಒಳ ಮೀಸಲಾತಿ ಹೋರಾಟಕ್ಕೂ ಡೆಡ್ಲೈನ್ ನೀಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...