Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಾಸವಿ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಸಂವಿಧಾನ ದಿನ ಮತ್ತು ಇಂಜಿನಿಯರ್ಸ್ ಡೇ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.15 : ಅಂತರಾಷ್ಟ್ರೀಯ ಸಂವಿಧಾನ ಅಂಗೀಕರಿಸಿಕೊಂಡ ದಿನ ಹಾಗೂ ಇಂಜಿನಿಯರ್ಸ್ ಡೇ ಕಾರ್ಯಕ್ರಮವನ್ನು ವಾಸವಿ ವಿದ್ಯಾಸಂಸ್ಥೆಯಲ್ಲಿ ಶುಕ್ರವಾರ ಆಚರಿಸಲಾಯಿತು.

1945 ನವೆಂಬರ್ 26 ರಂದು ಸಂವಿಧಾನ ಅಂಗೀಕರಿಸಿ ಅಧಿನಿಯಮ ಅರ್ಪಿಸಿಕೊಂಡಿದ್ದು, ಸಂವಿಧಾನದ ಪ್ರತಿಜ್ಞಾವಿಧಿಯನ್ನು ವಾಸವಿ ಕನ್ನಡ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಕೆ.ಆರ್.ರಾಧಾಮಣಿ ಬೋಧಿಸಿದರು.

ಭಾರತ ರತ್ನ ಮೋಕ್ಷಗುಂಡಂ ಸರ್ ಎಂ.ವಿಶ್ವೇಶ್ವರಯ್ಯನವರ ಜನ್ಮದಿನವನ್ನು ಆಚರಿಸಲಾಯಿತು. ಸಹ ಶಿಕ್ಷಕಿ ಆರ್.ಮಂಜುಳ ವಿಶ್ವೇಶ್ವರಯ್ಯನವರ ಮೇರು ವ್ಯಕ್ತಿತ್ವವನ್ನು ಪರಿಚಯಿಸಿದರು.

ವಾಸವಿ ವಿದ್ಯಾಸಂಸ್ಥೆ ನಿಕಟಪೂರ್ವ ಅಧ್ಯಕ್ಷ ಪಿ.ಎಲ್.ಸುರೇಶ್‍ರಾಜು ಮಾತನಾಡಿ ಕುವೆಂಪುರವರ ಕವಿವಾಣಿಯಂತೆ ಸರ್ ಎಂ.ವಿಶ್ವೇಶ್ವರಯ್ಯನವರು ಯಂತ್ರ ಋಷಿ ಎಂದು ಬಣ್ಣಿಸಿದರು.

ವಾಸವಿ ವಿದ್ಯಾಸಂಸ್ಥೆ ಅಧ್ಯಕ್ಷ ಎಸ್.ಎ.ಸತ್ಯನಾರಾಯಣ ಶ್ರೇಷ್ಠಿ, ಸಹ ಕಾರ್ಯದರ್ಶಿ ಎಲ್.ಎನ್.ಅಜಯ್‍ಕುಮಾರ್, ಮುಖ್ಯ ಶಿಕ್ಷಕರು ಮತ್ತು ಶಿಕ್ಷಕ ವೃಂದದವರು ಈ ಸಂದರ್ಭದಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...