ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಚಾಂಪಿಯನ್‌ಶಿಪ್ ಪ್ರಶಸ್ತಿ ಪಡೆದ ಜ್ಞಾನಪೂರ್ಣ ಶಾಲೆಯ ವಿದ್ಯಾರ್ಥಿಗಳು

1 Min Read

 

 

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್.06 : ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿಯ ಜ್ಞಾನಪೂರ್ಣ ಶಾಲೆಯ ವಿದ್ಯಾರ್ಥಿಗಳು ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.

ಭಾನುವಾರ ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಜ್ಞಾನಪೂರ್ಣ ವಿದ್ಯಾಸಂಸ್ಥೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿ ಪ್ರಥಮ ದ್ವಿತೀಯ ಮತ್ತು ಟೀಮ್ ಚಾಂಪಿಯನ್ಶಿಪ್ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.

ಅಂತರಾಷ್ಟ್ರೀಯ ಮಟ್ಟದಲ್ಲಿ ಗ್ರಾಮೀಣ ಪ್ರತಿಭೆಗಳು ಭಾಗವಹಿಸಿ ಜ್ಞಾನಪೂರ್ಣ ವಿದ್ಯಾ ಸಂಸ್ಥೆಯ ಕೀರ್ತಿಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರನ್ನು ಜ್ಞಾನಪೂರ್ಣ ವಿದ್ಯಾ ಸಂಸ್ಥೆಯ ಕಾರ್ಯದರ್ಶಿಯವರಾದ ಎನ್ ಎಲ್ ವೆಂಕಟೇಶ್ ರೆಡ್ಡಿ ಅವರು ಅಭಿನಂದಿಸಿದ್ದಾರೆ.

ಈ  ಸಂದರ್ಭದಲ್ಲಿ ಜ್ಞಾನಪೂರ್ಣ ವಿದ್ಯಾಸಂಸ್ಥೆಯ ಆಡಳಿತ ಅಧಿಕಾರಿಗಳಾದ ಡಾ. ಕೆ. ಎನ್. ಸ್ವಾಮಿ, ಜ್ಞಾನಪೂರ್ಣ ಐಸಿಎಸ್ಇ ವಿಭಾಗದ ಪ್ರಾಂಶುಪಾಲರಾದ ಶ್ರೀಮತಿ ವಿಜಯಶ್ರೀ ಹಾಗೂ ಜ್ಞಾನಪೂರ್ಣ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಸುರೇಶ್ ರವರು, ಕರಾಟೆ ತರಬೇತುದಾರರಾದ ಪ್ರಭು ಅವರು ಹಾಗೂ ದೈಹಿಕ ಶಿಕ್ಷಕರಾದ ಬಾಬು ಟಿ ಇವರು ಮತ್ತು ಇತರ ಶಿಕ್ಷಕರು ಹಾಜರಿದ್ದು ಅಂತರಾಷ್ಟ್ರೀಯ ಮಟ್ಟದಲ್ಲಿ ಶಾಲೆಯ ಕೀರ್ತಿಪತಾಕೆಯನ್ನು ಹಾರಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರನ್ನು ಅಭಿನಂದಿಸಿರುತ್ತಾರೆ.

Share This Article
Leave a Comment

Leave a Reply

Your email address will not be published. Required fields are marked *