Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

 

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 26 : ಓಂ ಶಾಂತಿ ಎನ್ನುವ ಪದಕ್ಕೆ ಮಹತ್ವವಿದೆ. ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯಕ್ಕೆ ಬಂದು ಧ್ಯಾನದಲ್ಲಿ ತೊಡಗಿದರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆಂದು ನ್ಯಾಯವಾದಿ ಬಿ.ಕೆ.ರಹಮತ್‍ವುಲ್ಲಾ ಹೇಳಿದರು.

 

ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆಯಿಂದ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

 

ಹನ್ನೆರಡನೆ ಶತಮಾನದ ಬಸವಣ್ಣ, ಪ್ರವಾದಿ ಮಹಮದ್ ಪೈಗಂಬರ್, ಭಗವದ್ಗೀತೆ, ಮಹಾಭಾರತ, ರಾಮಾಯಣ ಇವೆಲ್ಲವು ಮಾನವ ಧರ್ಮ ಒಂದೆ ಎನ್ನುವ ಸಾರವನ್ನು ವಿಶ್ವಕ್ಕೆ ನೀಡಿವೆ. ಹುಟ್ಟು-ಸಾವಿನ ನಡುವೆ ಅನೇಕ ಜಂಜಾಟಗಳು, ದುರಾಸೆ, ಸಂಪತ್ತು ಗಳಿಸಬೇಕೆಂಬ ಹಪಹಪಿಯಿಂದ ಮಾನವ ಅಮೂಲ್ಯವಾದ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾನೆ. ಹುಟ್ಟುವಾಗ ಬರಿಗೈ, ಸತ್ತಮೇಲೂ ಬರಿಗೈಯಲ್ಲೇ ಹೋಗಬೇಕು ಎನ್ನುವ ಸತ್ಯವನ್ನು ತಿಳಿದುಕೊಂಡಾಗ ಜೀವನ ಸುಖಮಯವಾಗಿರುತ್ತದೆ ಎಂದರು.ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಧ್ಯಾನ ಮಾಡಿದರೆ ಮನಸ್ಸು ಪ್ರಶಾಂತವಾಗಿರುತ್ತದೆ. ಮಹಿಳೆ ತ್ಯಾಗದ ಸಂಕೇತ. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಾದರೂ ಮಹಿಳೆಯರು ಒಂದೆಡೆ ಸೇರಿದಾಗ ಸಮಾಜದ ಮುಖ್ಯವಾಹಿಗೆ ಬರಲು ಸಾಧ್ಯ. ಹೆಣ್ಣು ಕೇವಲ ಅಡುಗೆ ಮನೆಗೆ ಮಾತ್ರ ಸೀಮಿತವಲ್ಲ. ಎಲ್ಲಾ ರಂಗದಲ್ಲಿಯೂ ವಿಪುಲ ಅವಕಾಶವಿದೆ. ಸದ್ಬಳಕೆ ಮಾಡಿಕೊಳ್ಳಬೇಕಷ್ಟೆ ಎಂದು ಕರೆ ನೀಡಿದರು.

 

ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಶಿವರಶ್ಮಿ ಅಕ್ಕ ಮಾತನಾಡಿ ಮಹಿಳೆಯರು ಮನೆಯಲ್ಲಿ ಹಸನ್ಮುಖಿಯಾಗಿ ಶಾಂತವಾಗಿದ್ದರೆ ಇಡಿ ಕುಟುಂಬವೆ ನೆಮ್ಮದಿಯಾಗಿರುತ್ತದೆ. ಪ್ರತಿನಿತ್ಯವು ಬೆಳಿಗ್ಗೆ ಎದ್ದ ಕೂಡಲೆ ಧ್ಯಾನ ಮಾಡಿದರೆ ಅಂತರಂಗದ ಶಕ್ತಿ ವೃದ್ದಿಸುತ್ತದೆ. ಒಂದೊಂದು ತುತ್ತು ಊಟ ಮಾಡುವಾಗ ಭಗವಂತನನ್ನು ಸ್ಮರಣೆ ಮಾಡಿಕೊಳ್ಳಬೇಕು. ಮೊಬೈಲ್ ಟಿವಿ.ಯಿಂದ ದೂರವಿದ್ದು, ನಿಮ್ಮ ಜೀವನವನ್ನು ನೀವೆ ರೂಪಿಸಿಕೊಳ್ಳಬೇಕು. ಪ್ರತಿಯೊಬ್ಬರ ಬದುಕಿನಲ್ಲಿಯೂ ಅನೇಕ ಸಮಸ್ಯೆಗಳು ಎದುರಾಗುವುದು ಸಹಜ. ನೀವು ಒಳ್ಳೆ ಸಂಕಲ್ಪ ಮಾಡಿದರೆ ಮನಸ್ಸಿನಲ್ಲಿರುವ ಕಲ್ಮಶ ದೂರವಾಗುತ್ತದೆಂದರು. ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾ ಸಮಿತಿ ಅಧ್ಯಕ್ಷ ಗಣೇಶ್, ಶಬೀನಾಜಾನ್ ವೇದಿಕೆಯಲ್ಲಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now