ಸುದ್ದಿಒನ್, ಚಿತ್ರದುರ್ಗ, ಜೂನ್. 22 : ನಗರದ ಬಾಪೂಜಿ ಪಬ್ಲಿಕ್ ಶಾಲೆಯ ಆಶ್ರಯದಲ್ಲಿ ದಿನಾಂಕ 21 ಜೂನ್ 2026 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಸಸಿಗೆ ನೀರು ಎರೆಯುವ ಮೂಲಕ ಉದ್ಘಾಟಿಸಿ, ಮಕ್ಕಳ ಉಜ್ವಲ ಭವಿಷ್ಯವು ಹೆಮ್ಮರವಾಗಿ ಬೆಳೆಯಲಿ ಎಂದು ಆಶಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಯಶೀಲ ರೆಡ್ಡಿಯವರು ಮಾತನಾಡಿ, ಯೋಗ ಮಾಡುವ ಮೂಲಕ ಯೋಗದ ಮಹತ್ವ ಮತ್ತು ಯೋಗ ಮಾಡುವ ಸರಿಯಾದ ಕ್ರಮವನ್ನು ಮಕ್ಕಳಿಗೆ ಸವಿಸ್ತಾರವಾಗಿ ತಿಳಿಸಿಕೊಟ್ಟರು.
ಕಾರ್ಯಕ್ರಮದ ಅಧ್ಯಕ್ಷೀಯ ನುಡಿಗಳನ್ನಾಡಿದ ಬಾಪೂಜಿ ಸಮೂಹ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ|| ಕೆ.ಎಂ. ವೀರೇಶ್ ಅವರು, ಮಕ್ಕಳ ಸರ್ವೋತ್ತೋಮುಖ ಅಭಿವೃದ್ದಿಗೆ ಯೋಗವು ಅತ್ಯಂತ ಸಹಾಯಕವಾಗಿದೆ ಎಂದು ಪ್ರತಿಪಾದಿಸಿದರು. ಇದೇ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರಾದ ಕೆ.ಎಂ. ಚೇತನ್ ಅವರು ಮಾತನಾಡಿ, ಯೋಗವು ಕೇವಲ ಯೋಗ ದಿನಾಚರಣೆಗೆ ಮಾತ್ರ ಮೀಸಲಾಗದೆ, ಪ್ರತಿದಿನವೂ ಸ್ವಸ್ಥ ಆರೋಗ್ಯಕ್ಕೆ, ಸದೃಢ ಹಾಗೂ ಸಮತೋಲನ ಆರೋಗ್ಯಕ್ಕೆ ಅತ್ಯವಶ್ಯಕವಾಗಿದೆ ಎಂದು ನೆರೆದಿದ್ದ ಎಲ್ಲರಿಗೂ ಮನವರಿಕೆ ಮಾಡಿಕೊಟ್ಟರು. ಇದೇ ವೇಳೆ ಅವರು ಮಕ್ಕಳಿಗೆ ಯೋಗ, ಧ್ಯಾನ ಹಾಗೂ ಪ್ರಾಣಾಯಾಮದ ಮಹತ್ವವನ್ನು ವಿವರಿಸುತ್ತಾ, ಇಡೀ ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ ನಮ್ಮ ದೇಶದ ಹಿರಿಮೆಯನ್ನು ಮುಕ್ತಕಂಠದಿಂದ ಕೊಂಡಾಡಿದರು.

ಈ ಶುಭ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಜಗದೀಶ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಶಿಕ್ಷಣ ಸಂಯೋಜಕರಾದ ಮೂರ್ತಾಚಾರ್ ಹಾಗೂ ಸಿ.ಆರ್.ಪಿ ಶಿವರುದ್ರಪ್ಪನವರು ಉಪಸ್ಥಿತರಿದ್ದರು. ಶಾಲೆಯ ದೈಹಿಕ ಶಿಕ್ಷಕರಾದ ಕೆ.ಎಂ. ಮಲ್ಲಿಕಾರ್ಜುನ್ ಹಾಗೂ ಯೋಗಪಟು ಸುನೀಲ್ ಕುಮಾರ್ ಡಿ.ಜೆ ರವರ ಮಾರ್ಗದರ್ಶನದಲ್ಲಿ ಸಂಸ್ಥೆಯ ಎಲ್ಲಾ ವಿಭಾಗಗಳ ಮುಖ್ಯಸ್ಥರು ಮತ್ತು ಶಿಕ್ಷಕರು ಮಕ್ಕಳೊಂದಿಗೆ ಉತ್ಸಾಹದಿಂದ ಯೋಗಾಸನಗಳನ್ನು ಮಾಡುವ ಮೂಲಕ ಯೋಗ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










