Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟನ್ರ್ಷಿಪ್ ಅವಕಾಶ : ನವೆಂಬರ್ 15 ಕೊನೆಯ ದಿನ

Post-matric scholarships, incentive grants, and hostel admission for Scheduled Caste students: Online applications invited
---Advertisement---

 

ಚಿತ್ರದುರ್ಗ. ಅ.29: ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಸ್ನಾತಕೋತ್ತರ ಪದವೀಧರರಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟನ್ರ್ಷಿಪ್ ಅವಕಾಶ ಕಲ್ಪಿಸಿದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು.

ಬರವಣಿಗೆಯಲ್ಲಿ ಪರಿಣತಿ ಹೊಂದಿರುವ, ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 2021-2022, 2022-23, 2023-24 ಹಾಗೂ 2024-2025ನೇ ಶೈಕ್ಷಣಿಕ ವರ್ಷದಲ್ಲಿ ಯಾವುದೇ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರವೇಶ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಅಕಾಡೆಮಿ ಅಧ್ಯಕ್ಷೆ ಶ್ರೀಮತಿ ಆಯೇಶಾ ಖಾನಂ ತಿಳಿಸಿದ್ದಾರೆ.

ಒಟ್ಟು 21 ಅಭ್ಯರ್ಥಿಗಳಿಗೆ ಇಂಟನ್ರ್ಷಿಪ್ ಅವಕಾಶ ಒದಗಿಸಲಾಗುವುದು. ಅದರ ವಿವರ ಹೀಗಿದೆ: ಮಹಿಳಾ ಆಯವ್ಯಯದಡಿ 08 ಮಹಿಳೆಯರು, ಪರಿಶಿಷ್ಟ ಜಾತಿ ಉಪಯೋಜನೆಯಡಿ 09 ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ 4 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಇಂಟನ್ರ್ಷಿಪ್ಗೆ ಅವಕಾಶ ಕಲ್ಪಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಎರಡು ತಂಡಗಳಲ್ಲಿ ಎರಡು ತಿಂಗಳ ಇಂಟನ್ರ್ಷಿಪ್ಗೆ ಅವಕಾಶ ಕಲ್ಪಿಸಲಾಗುವುದು. ಇಂಟನ್ರ್ಷಿಪ್ಗೆ ಸಂಸ್ಥೆ ಹಾಗೂ ಸ್ಥಳವನ್ನು ಅಕಾಡೆಮಿಯೇ ನಿಗದಿ ಪಡಿಸುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಅಕಾಡೆಮಿ ವತಿಯಿಂದ ಮಾಸಿಕ 20,000/- ರೂ. ಸ್ಟೈಪೆಂಡ್ ನೀಡಲಾಗುವುದು.  ಅಭ್ಯರ್ಥಿಗಳು ತಮ್ಮ ಸ್ವವಿವರ (Curriculum Vitae)  ದೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ಗೂಗಲ್ ಫಾರ್ಮ್ https://forms.gle/Qth3f5FjMHXSxTB68 ರಲ್ಲಿ ಅರ್ಜಿ ಸಲ್ಲಿಸುವುದು.

 

ಅಭ್ಯರ್ಥಿಗಳ ಆಯ್ಕೆಯ ಅಂತಿಮ ತೀರ್ಮಾನ ಅಕಾಡೆಮಿಯ ಸಮಿತಿಯದ್ದೇ ಅಗಿರುತ್ತದೆ. ಅರ್ಜಿ ಸಲ್ಲಿಸಲು 2025 ರ ನವೆಂಬರ್ 15 ಕೊನೆಯ ದಿನವಾಗಿದೆ ಎಂದು ಅವರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now