Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪತ್ರಿಕಾ ಕಚೇರಿಗಳಲ್ಲಿ ಇಂಟರ್ನ್‍ಷಿಪ್ ಯೋಜನೆ: ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

---Advertisement---

 

ಚಿತ್ರದುರ್ಗ. ಜ.03: ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಂದ ವಿವಿಧ ಪತ್ರಿಕಾಲಯಗಳಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ.

ಒಟ್ಟು ಐವರು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶವಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಎರಡು ತಿಂಗಳ ಅವಧಿಗೆ ವಿವಿಧ ಪತ್ರಿಕಾ ಕಚೇರಿಗಳಲ್ಲಿ ತರಬೇತಿ ಪಡೆಯಲು ಅವಕಾಶ ಕಲ್ಪಿಸಲಾಗುವುದು. ತರಬೇತಿ ಅವಧಿಯಲ್ಲಿ ಮಾಸಿಕ 20,000 ರೂ. ಶಿಷ್ಯವೇತನ ನೀಡಲಾಗುವುದು.

ಅಭ್ಯರ್ಥಿಗಳು ರಾಜ್ಯದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿರಬೇಕು. ವಯಸ್ಸು 28 ವರ್ಷ ಮೀರಿರಬಾರದು. ಅರ್ಹತಾ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.

ಆಸಕ್ತ ಅಭ್ಯರ್ಥಿಗಳು ಜನವರಿ 20 ರ ಒಳಗಾಗಿ ತಮ್ಮ ಸ್ವವಿವರ, ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸ, ಆರ್ಥಿಕ ಸ್ಥಿತಿ, ಅಂಕಪಟ್ಟಿಗಳ ಮಾಹಿತಿಯನ್ನು ಸ್ಕ್ಯಾನ್ ಮಾಡಿ
karnatakamediaacademy@gmail.com  ಗೆ ಇ-ಮೇಲ್ ಮೂಲಕ ಕಳುಹಿಸಬಹುದಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment