Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗಾಗಿ ಅರ್ಜಿ ಆಹ್ವಾನ

---Advertisement---

 

ಚಿತ್ರದುರ್ಗ. ಸೆ.30: ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ 2025-26ನೇ ಸಾಲಿನಲ್ಲಿ ಕೃಷಿಯಲ್ಲಿ ಯಂತ್ರೋಪಕರಣಗಳನ್ನು ರೈತರಿಗೆ ಬಾಡಿಗೆ ಆಧಾರದಲ್ಲಿ ಒದಗಿಸುವಂತೆ ಹಾಗೂ ಜಿಲ್ಲೆಯಲ್ಲಿ ಯಂತ್ರಧಾರೆ ಕೇಂದ್ರಗಳನ್ನು ಇನ್ನಷ್ಟು ಬಲ ಪಡಿಸಲು ವೈಯಕ್ತಿಕ ಫಲಾನುಭವಿಗಳಿಗೆ ಸಾಮಾನ್ಯ ಹಾಗೂ ಪರಿಶಿಷ್ಟ ಜಾತಿಯ ರೈತರಿಂದ ಕಂಬೈನ್ಸ್ ಹಾರ್ವೆಸ್ಟರ್ ಹಬ್ ಸ್ಥಾಪನೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

 

ಚಿತ್ರದುರ್ಗ ಜಿಲ್ಲೆಯಲ್ಲಿ ಸಾಮಾನ್ಯ ಘಟಕದಡಿ ವೈಯಕ್ತಿಕ ಫಲಾನುಭವಿಗಳಿಗೆ (ಎರಡು). ವಿಶೇಷ ಘಟಕ ಯೋಜನೆ ವರ್ಗದ ರೈತರಿಗೆ (ಒಂದು) ಘಟಕ ಸ್ಥಾಪನೆಗೆ ಅವಕಾಶ ಕಲ್ಪಿಸಲಾಗಿದೆ. ಈ ಯಂತ್ರಗಳನ್ನು ಬಾಡಿಗೆಗೆ ನೀಡುವ ಮೂಲಕ ರೈತರು ಹೆಚ್ಚುವರಿ ಆದಾಯ ಪಡೆಯಬಹುದಾಗಿದೆ. ಹೈಟೆಕ್ ಹಾರ್ವೆಸ್ಟರ್ ಹಬ್‍ಗಳನ್ನು ಬೆಳೆಯ ವಿಧ ಮತ್ತು ಕಟಾವು ಅವಧಿಯ ಆಧಾರದ ಮೇಲೆ ಕಾರಿಡರ್ ಮಾದರಿಯಲ್ಲಿ ಸ್ಥಾಪಿಸುವುದು. ಕೃಷಿ ಯಂತ್ರೋಪಕರಣವಾರು ನಿಗದಿಪಡಿಸಿದ ಗರಿಷ್ಠ ಸಹಾಯಧನವನ್ನು ಒದಗಿಸಲಾಗುವುದು. ಈ ಸಹಾಯಧನವನ್ನು ಕ್ರೆಡಿಟ್ ಲಿಂಕ್ಸ್ ಬ್ಯಾಕ್ ಎಂಡೆಡ್ ಸಬ್ಸಿಡಿ ಮೂಲಕ ಬಿಡುಗಡೆ ಮಾಡಲಾಗುವುದು. ಆಯ್ಕೆಯಾದ ಫಲಾನುಭವಿಗಳು ಕೃಷಿ ಮೂಲಭೂತ ಸೌಕರ್ಯ ನಿಧಿ ಸಾಲದ ನೆರವನ್ನು ಪಡೆಯಲು ಸಹ ಅವಕಾಶವಿದೆ.

ಅರ್ಜಿಗಳನ್ನು ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಅಕ್ಟೋಬರ್ 8 ರೊಳಗಾಗಿ ಸಲ್ಲಿಸುವುದು. ಸಹಾಯಕ ಕೃಷಿ ನಿರ್ದೇಶಕರು ಸ್ವೀಕೃತವಾಗುವ ಎಲ್ಲ ಅರ್ಜಿಗಳನ್ನು ಮೇಲ್ಕಂಡ ಎಲ್ಲ ಅಂಶಗಳನ್ವಯ ಪರಿಶೀಲಿಸಿ ಸಂಬಂಧಿಸಿದ ಉಪ ಕೃಷಿ ನಿರ್ದೇಶಕರ ಮುಖಾಂತರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಸಮೀಪದ ರೈತ ಸಂಪರ್ಕ ಕೇಂದ್ರ. ಆಯಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸುವಂತೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ. ಬಿ. ಮಂಜುನಾಥ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now