ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 12 : ಚಿತ್ರದುರ್ಗ
ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಗಳನ್ನು ಸಾಹಿತಿ ಬಿ.ಎಲ್.ವೇಣು ರವರು ಇಂದು (ಫೆಬ್ರವರಿ. 12 ರ ಗುರುವಾರ) ನಗರದಲ್ಲಿನ ಅವರ ನಿವಾಸದಲ್ಲಿ ಅನಾವರಣಗೊಳಿಸಿದರು.
ಫೆ.17 ಮತ್ತು 18 ರಂದು ನಗರದ ಸ್ಟೇಡಿಯಂ ರಸ್ತೆಯಲ್ಲಿರುವ ಜಿ.ಜಿ. ಸಮುದಾಯ ಭವನದಲ್ಲಿ ಜರುಗಲಿರುವ 18 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಜರುಗಲಿದೆ. ಈ ಸಮ್ಮೇಳನವು ಮಹಿಳಾ ಅಧ್ಯಕ್ಷರ ಆಯ್ಕೆಯಿಂದ ಪ್ರಾಮುಖ್ಯತೆ ಪಡೆದಿದೆ. 17 ಸಮ್ಮೇಳನಗಳಲ್ಲಿ ಮಹಿಳೆಯರನ್ನು ಕಡೆಗಣಿಸಲಾಗಿತ್ತು. ಆದರೆ ಈ ಬಾರಿ ಈ ಕೊರತೆ ನಿವಾರಣೆಯಾಗಿದೆ. ಮಹಿಳಾ ಪ್ರಾತಿನಿಧ್ಯಕ್ಕೆ ಪರಿಷತ್ತು ನಿರ್ಧರಿಸಿರುವುದು ಉತ್ತಮ ಬೆಳವಣಿಗೆಯಾಗಿದೆ.
ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಕೆ.ಆರ್.ಸಂಧ್ಯಾರೆಡ್ಡಿಯವರು ಚಿತ್ರದುರ್ಗದಲ್ಲಿ ಹುಟ್ಟಿ, ಬೆಳೆದು ಶಿಕ್ಷಣ ಪಡೆದವರಾಗಿದ್ದಾರೆ. ಲೇಖಕಿಯರ ಸಂಘದ ಅಧ್ಯಕ್ಷರಾಗಿ ಬಹುಮುಖ ಪ್ರತಿಭೆಯನ್ನು ಹೊಂದಿದ್ದಾರೆ. ಜಾನಪದ, ಪ್ರವಾಸ ಸೇರಿದಂತೆ ಸಾಹಿತ್ಯದ ನಾನಾ ಕ್ಷೇತ್ರಗಳಲ್ಲಿ 75 ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದಿಂದ ಬಂದ ಸಂಧ್ಯಾರೆಡ್ಡಿಯವರÀ ತಾಯಿಯೂ ಸಹ ಲೇಖಕಿಯಾಗಿದ್ದರು. ಅವರ ತಾಯಿ ಅನಸೂಯ ರಾಮರೆಡ್ಡಿಯವರ ಒಂದು ಕಾದಂಬರಿ ಚಲನಚಿತ್ರವಾಗಿದೆ. ಸಮ್ಮೇಳನದಲ್ಲಿ ಸಾಹಿತಿ, ಮಠಮಾನ್ಯಗಳು, ರಾಜಕಾರಣಿಗಳು ಸೇರಿದಂತೆ ಎಲ್ಲ ಕನ್ನಡಿಗರ ಸಹಕಾರ ಇದಕ್ಕೆ ಅಗತ್ಯವಾಗಿದೆ. ಆರೋಗ್ಯದ ಸಮಸ್ಯೆಗಳಿಂದ ನಾನು ಸಮ್ಮೇಳನದಲ್ಲಿ ಭಾಗವಹಿಸುತ್ತಿಲ್ಲ. ಆದರೆ ಸಮ್ಮೇಳನ ಯಶಸ್ವಿಯಾಗಲೆಂದು ಹಾರೈಸುತ್ತೇನೆ ಎಂದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡಿ, ಆರು ವರ್ಷಗಳ ನಂತರ ಜಿಲ್ಲೆಯಲ್ಲಿ ಸಮ್ಮೇಳನವು ಜರುಗುತ್ತಿದೆ. ನಗರಾಭಿವೃದ್ಧಿ ಪ್ರಾಧಿಕಾರದಿಂದ ಪಾರ್ಕ ನಡಿಗೆ ಮಾರ್ಗ (ವಾಕಿಂಗ್ ಪಾತ್) ನಿರ್ಮಾಣ ಮಾಡಲಾಗುತ್ತಿದೆ. ಸಮ್ಮೇಳನದಲ್ಲಿ ಈಗಾಗಲೇ ಸಮ್ಮೇಳನದ ವಾತಾವರಣ ಸೃಷ್ಟಿಯಾಗಿದೆ. ನಗರದ ಪ್ರಮುಖ ಬೀದಿಗಳಲ್ಲಿ ಕನ್ನಡದ ಬಾವುಟಗಳು ರಾರಾಜಿಸುತ್ತಿವೆ. ಜನಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸೂಚಿಲಾಗುವುದು. ಕಸಾಪ ವತಿಯಿಂದ ದತ್ತಿನಿಧಿ ಕಾರ್ಯಕ್ರಮಗಳನ್ನು ಸಮ್ಮೇಳನದ ನಂತರ ಆಯೋಜಿಸಲು ಸೂಚಿಸಿದರು.
ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ, ತಾಲ್ಲೂಕು ಅಧ್ಯಕ್ಷ ವಿ.ಎಲ್.ಪ್ರಶಾಂತ್, ಕಾರ್ಯದರ್ಶಿ ವಿ.ಶ್ರೀನಿವಾಸ ಮಳಲಿ ಶಿಕ್ಷಕರಾದ ಆರ್.ಮಹಾಂತೇಶ್, ಸಿ.ಎಂ.ಚಂದ್ರಶೇಖರ್ ಇದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್