Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕ ವಿಧಾನಸಭಾ ಸಚಿವಾಲಯದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

---Advertisement---

ಬೆಂಗಳೂರು: ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಹಾಕಬಹುದು. ಜ್ಯೂನಿಯರ್ ಪ್ರೋಗ್ರಾಮರ್, ಕನ್ನಡ ವರದಿಗಾರರು, ಕಂಪ್ಯೂಟರ್ ಆಪರೇಟರ್, ಕಿರಿಯ ಸಹಾಯಕರು, ಕಿರಿಯ ಗ್ರಂಥಾಲಯ ಸಹಾಯಕರು, ಮಸಾಜರ್, ಬಡಗಿ, ದಲಾಯತ್, ಸ್ವೀಪರ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು, 25.11.2024 ಅರ್ಜಿ ಸಲ್ಲಿಕೆಗೆ ಕಡೆಯ ದಿನವಾಗಿದೆ.

* ಜ್ಯೂನಿಯರ್ ಪ್ರೋಗ್ರಾಂ: ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್/ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ ಪದವಿ ಪಡೆದಿರಬೇಕು.

* ಕನ್ನಡ ವರದಿಗಾರರು: ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಶೀಘ್ರಲಿಪಿ ಹಾಗೂ ಕನ್ನಡ ಬೆರಳಚ್ಚು ಪರೀಕ್ಷೆಯಲ್ಲು ಪಾಸ್ ಆಗಿರಬೇಕು. ಹಿಂದಿ ಶೀಘ್ರಲಿಪಿ ಉತ್ತೀರ್ಣರಾಗಿರಬೇಕು.

* ಕಂಪ್ಯೂಟರ್ ಆಪರೇಟರ್: ಕಂಪ್ಯೂಟರ್ ಅಪ್ಲಿಕೇಶನ್ ನಲ್ಲಿ ಪದವಿ ಪಡೆದಿರಬೇಕು.

* ಕಿರಿಯ ಸಹಾಯಕರು: ಪದವಿ ಪಡೆದಿರಬೇಕು ಹಾಗೂ ಗಣಕಯಂತ್ರದ ಸಾಮಾನ್ಯ ತಿಳುವಳಿಕೆ ಇರಬೇಕು.

* ಕಿರಿಯ ಗ್ರಂಥಾಲಯ ಸಹಾಯಕರು: ಲೈಬ್ರರಿ ಸೈನ್ಸ್ ನಲ್ಲಿ ಪದವಿ ಪಡೆದಿರಬೇಕು

* ಮಸಾಜರ್ : ಏಳನೇ ತರಗತಿ ಪಾಸ್ ಆಗಿರಬೇಕು. ಯಾವುದಾದರೂ ಹೆಲ್ತ್ ಕ್ಲಬ್ ನಲ್ಲಿ ಮಸಾಜರ್ ಆಗಿ ಕೆಲಸ ಮಾಡಿರಬೇಕು.

ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಆದರೆ ಉಳಿದ ಸಾಮಾನ್ಯ ವರ್ಗದ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 500 ಶುಲ್ಕ ಇರಲಿದೆ. ಅರ್ಜಿಯೊಂದಿಗೆ ಎಲ್ಲಾ ದಾಖಲೆಗಳನ್ನು ಲಗತ್ತಿಸಿ ಕರ್ನಾಟಕ ವಿಧಾನಸಭೆ ಸಚಿವಾಲಯ, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು 560001 ಈ ವಿಳಾಸಕ್ಕೆ ಕೊನೆ ದಿನಾಂಕದ ಒಳಗೆ ಕಳುಹಿಸಿ ಕೊಡಿ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment