ಏಪ್ರಿಲ್ 18ರ ಶನಿವಾರ ಐಪಿಎಲ್‌ನಲ್ಲಿ ಡಬಲ್ ಹೆಡರ್ ಪಂದ್ಯಗಳು ನಡೆಯಲಿದ್ದು, ದಿನದ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ RCB ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕಣಕ್ಕಿಳಿಯಲಿದೆ.
ಈ ಆವೃತ್ತಿಯಲ್ಲಿ ರಜತ್ ಪಾಟಿದಾರ್ ನಾಯಕತ್ವದ ಆರ್‌ಸಿಬಿ ಉತ್ತಮ ಫಾರ್ಮ್‌ನಲ್ಲಿದ್ದು, ಆಡಿದ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಜಯ ಸಾಧಿಸಿ ಕೇವಲ ಒಂದು ಪಂದ್ಯದಲ್ಲಿ ಮಾತ್ರ ಸೋಲು ಅನುಭವಿಸಿದೆ.
ಮತ್ತೊಂದೆಡೆ, ಆರಂಭದಲ್ಲಿ ಸತತ ಗೆಲುವುಗಳೊಂದಿಗೆ ಮಿಂಚಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಇತ್ತೀಚಿನ ಎರಡು ಪಂದ್ಯಗಳಲ್ಲಿ ಸೋತು ಲಯ ಕಳೆದುಕೊಂಡಿದೆ. ಹೀಗಾಗಿ, ಡೆಲ್ಲಿ ಮತ್ತೆ ಗೆಲುವಿನ ಹಾದಿಗೆ ಮರಳಲು ಯತ್ನಿಸುತ್ತಿದ್ದರೆ, ಆರ್‌ಸಿಬಿ ತನ್ನ ಗೆಲುವಿನ ಸರಣಿಯನ್ನು ಮುಂದುವರಿಸಲು ಸಜ್ಜಾಗಿದೆ.
ಐಪಿಎಲ್ 2026ರ 26ನೇ ಪಂದ್ಯವಾಗಿರುವ ಈ ಮುಖಾಮುಖಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಲ್ಲಿ ನಡೆಯಲಿದೆ. ಪಂದ್ಯ ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದ್ದು, ಟಾಸ್ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.ಪ್ರೇಕ್ಷಕರು ಈ ಪಂದ್ಯವನ್ನು Star Sports ನೆಟ್‌ವರ್ಕ್‌ನಲ್ಲಿ ನೇರಪ್ರಸಾರವಾಗಿ ವೀಕ್ಷಿಸಬಹುದು. ಜೊತೆಗೆ JioHotstar ಆಪ್ ಮೂಲಕ ಮೊಬೈಲ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಕೂಡ ಲಭ್ಯವಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











