ದೆಹಲಿ,ಜುಲೈ.12: ಭಾರತೀಯ ಚಿತ್ರರಂಗದ ದಂತಕಥೆ, ಬಹುಭಾಷಾ ಗಾಯಕಿ ಎಸ್. ಜಾನಕಿ (ಶಿಷ್ಟ್ಲಾ ಜಾನಕಿ) ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, “ಎಸ್. ಜಾನಕಿ ಅವರ ನಿಧನವು ಭಾರತೀಯ ಸಂಗೀತ ಲೋಕಕ್ಕೆ ಎದುರಾದ ತುಂಬಲಾರದ ನಷ್ಟವಾಗಿದೆ. ದಶಕಗಳ ಕಾಲ ತಮ್ಮ ಸುಮಧುರ ಕಂಠದಿಂದ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿದ್ದ ಅವರು, ಮುಂಬರುವ ತಲೆಮಾರುಗಳಿಗೂ ಪ್ರೇರಣೆಯಾಗಿದ್ದಾರೆ. ಅವರ ಅಗಲಿಕೆಯಿಂದ ದುಃಖಿತರಾಗಿರುವ ಅವರ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಭಗವಂತನು ನೋವನ್ನು ಭರಿಸುವ ಶಕ್ತಿ ನೀಡಲಿ,” ಎಂದು ಕಂಬನಿ ಮಿಡಿದಿದ್ದಾರೆ.
The passing of the distinguished playback singer S. Janaki Amma is an irreparable loss to the world of music and culture. Her songs in various languages were popular across generations. They gave voice to every emotion with unparalleled grace as well as versatility. Her melodies…
ಇದನ್ನು ಓದಿಉದ್ಯೋಗಿಗಳೇ ಗಮನಿಸಿ: ಪಿಎಫ್ ಬಡ್ಡಿದರ, ಹಿಂಪಡೆಯುವಿಕೆ ಮತ್ತು ಪೆನ್ಷನ್ ಗೆ ಸಂಬಂಧಿಸಿದ 12 ಪ್ರಮುಖ ನಿಯಮಗಳು ಇಲ್ಲಿವೆ!— Narendra Modi (@narendramodi) July 12, 2026
ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ ಭಾಷೆಗಳು ಹಾಗೂ ಹಿಂದಿ ಒಳಗೊಂಡಂತೆ ಸಾವಿರಾರು ಗೀತೆಗಳನ್ನು ಹಾಡಿ, ‘ಗಾನಕೋಗಿಲೆ’ ಎಂದೇ ಪ್ರಸಿದ್ಧರಾಗಿದ್ದ ಎಸ್. ಜಾನಕಿ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು, ರಾಜಕಾರಣಿಗಳು ಹಾಗೂ ಕೋಟ್ಯಂತರ ಸಂಗೀತ ಪ್ರೇಮಿಗಳು ಕಂಬನಿ ಮಿಡಿಯುತ್ತಿದ್ದಾರೆ.








