ಬೆಂಗಳೂರು: ಗೋವಾದ ಹೊಟೇಲ್ ಒಂದರಲ್ಲಿ ತಂಗಿದ್ದ ಸ್ಟಾರ್ಟ್ ಅಪ್ ಕಂಪನಿಯ ಸಿಇಒ ಸುಚನಾ ಸೇಠ್ ತನ್ನ ಮಗುವನ್ನೇ ಕೊಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಸ್ಟ್ ಸಿಕ್ಕಿದೆ. ಮಗುವನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇದಕ್ಕೆಲ್ಲಾ ಗಂಡ-ಹೆಂಡತಿಯ ಜಗಳವೇ ಮಗುವಿನ ಕೊಲೆಗೆ ಕಾರಣವಾಯ್ತು ಎನ್ನಲಾಗುತ್ತಿದೆ.

ಸುಚೇನಾ ಸೇಠ್ ಮೂಲತಃ ಪಶ್ಚಿಮ ಬಂಗಾಳದವರು. ಬೆಂಗಳೂರಿಗೆ ಬಂದ ಸುಚೇನಾ, ಸ್ಟಾರ್ಟಪ್ ಕಂಪನಿ ಆರಂಭಿಸಿದರು. 2008-09ರಲ್ಲಿ ತಮಿಳುನಾಡು ಮೂಲದ ಟೆಕ್ಕಿ ವೆಂಕಟರಮಣ ಅವರ ಜೊತೆಗೆ ಮದುವೆಯಾಗಿದ್ದರು. ಆದರೆ ಕಳೆದ ಎರಡು ವರ್ಷಗಳಿಂದ ಪತಿಯಿಂದ ದೂರವಾಗಿದ್ದರು. ಡಿವೋರ್ಸ್ ಪಡೆದ ಬಳಿಕ ಗಂಡ-ಹೆಂಡತಿ ದೂರವಾಗಿದ್ದರು. ಇದರ ನಡುವೆ ಮಗುವನ್ನು ನೋಡಲು ಕೋರ್ಟ್ ಅನುಮತಿ ನೀಡಿತ್ತು.
ಪ್ರತಿ ಭಾನುವಾರ ಭೇಟಿಗೆ ಹಾಗೂ ವಿಡಿಯೋ ಕಾಲ್ ಗೆ ಅವಕಾಶ ನೀಡಲಾಗಿತ್ತು. ಅದರಂತೆ ಸುಚೇನಾ ಪತಿ, ವಿಡಿಯೋ ಕಾಲ್ ಮಾಡುವ ಮೂಲಕ ಮಗುವಿನ ಜೊತೆಗೆ ಸಂಪರ್ಕದಲ್ಲಿದ್ದರು. ಗಂಡನ ಮೇಲಿನ ಕೋಪದಿಂದ ಮಗುವನ್ನು ಕೊಂದಿರುವ ಶಂಕೆ ವ್ಯಕ್ತಪಡಿಸಿದ್ದಾರೆ ಪೊಲೀಸರು. ಇನ್ನು ನಾಲ್ಕು ವರ್ಷದ ಮಗುವನ್ನು ಕೊಂದ ಸುಚೇನಾ ಸೇಠ್, ತಾವೂ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದರಂತೆ.
ಈ ಸಂಬಂಧ ಈಗಾಗಲೇ ಚಿತ್ರದುರ್ಗ ಪೊಲೀಸರು ಸುಚೇನಾ ಸೇಠ್ ಅವರನ್ನು ಬಂಧಿಸಿದ್ದಾರೆ. ಮಗುವಿನ ಮೃತದೇಹವನ್ನು ಹಿರಿಯೂರಿನ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ಮಗುವಿನ ಕೊರಳಿನ ಭಾಗದಲ್ಲಿ ನರಗಳು ಊದಿಕೊಂಡಿದ್ದು, ಮಗುವನ್ನು ಕತ್ತು ಇಸುಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















