ಕಿಚ್ಚ ಸುದೀಪ್ ಕಾಂಗ್ರೆಸ್ ಪರವೂ ಪ್ರಚಾರ ನಡೆಸಲಿದ್ದಾರಾ..? : ಡಿಕೆಶಿ ಹೇಳಿದ್ದೇನು..?

suddionenews
1 Min Read

ಬೆಂಗಳೂರು: ನಟ ಸುದೀಪ್ ಈಗಾಗಲೇ ಬಿಜೆಪಿ ಪರ ಪ್ರಚಾರದಲ್ಲಿ ತೊಡಗಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಸಂಬಂಧಪಟ್ಟ ಕ್ಷೇತ್ರಗಳಲ್ಲಿ ಪ್ತಚಾರ ನಡೆಸುತ್ತಿದ್ದಾರೆ. ಈ ವೇಳೆ ಸುದೀಪ್ ಅವರ ಅಭಿಮಾನಿಗಳು ಸಹಸ್ರಾರು ಸಂಖ್ಯೆಯಲ್ಲಿ ಸೇರುತ್ತಿದ್ದಾರೆ. ಬಿಸಿಲು ಎನ್ನದೆ ತಮ್ಮ ನೆಚ್ಚಿ‌ನ ನಟನಿಗೆ ಜೈಕಾರ ಹಾಕುತ್ತಿದ್ದಾರೆ. ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸುದೀಪ್ ಅವರು ನಮ್ಮ ಪಕ್ಷದ ಪರವೂ ಪ್ರಚಾರ ಮಾಡಲಿದ್ದಾರೆ ಎಂದಿದ್ದಾರೆ.

ಈ ಹಿಂದೆಯೇ ಕಾಂಗ್ರೆಸ್ ನಾಯಕರು ಸುದೀಪ್ ಅವರನ್ನು ಸಂಪರ್ಕಿಸಿದ್ದರು. ಆದರೆ ಸುದೀಪ್ ಅವರು ಬಿಜೆಪಿಗೆ ಅದರಲ್ಲೂ ಸಿಎಂ ಬೊಮ್ಮಾಯಿ ಅವರಿಗೆ ಬೆಂಬಲ ಸೂಚಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮಾತನಾಡಿದ್ದು, ವಿಧಾನಸಭಾ ಚುನಾವಣೆಯಲ್ಲಿ ನಟ ಸುದೀಪ್ ಕೆಲ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವುದಾಗಿ ತಿಳಿಸಿದ್ದಾರೆ ಎಂದಿದ್ದಾರೆ.

ಈ ವಿಚಾರವನ್ನು ಡಿಕೆ ಶಿವಕುಮಾರ್ ಹೇಳುತ್ತಿದ್ದಂತೆ ಅಭಿಮಾನಿಗಳು ಆಶ್ಚರ್ಯಗೊಂಡಿದ್ದಾರೆ. ಬಿಜೆಪಿ ಪಕ್ಷವನ್ನು ಸೇರದೆ ಕಿಚ್ಚ ಸುದೀಪ್ ಬೆಂಬಲವನ್ನಷ್ಟೇ ಘೋಷಿಸಿ, ಪ್ರಚಾರವನ್ನು ನಡೆಸುತ್ತಿದ್ದಾರೆ. ಇದರ ಮಧ್ಯೆ ಕಾಂಗ್ರೆಸ್ ಪರವೂ ಪ್ರಚಾರ ನಡೆಸುತ್ತಾರಾ ಎಂಬ ಗೊಂದಲದಲ್ಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *