Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕುಮಾರಸ್ವಾಮಿ ಆರೋಗ್ಯ ಸರಿ ಇಲ್ವಾ..? ವೈರಲ್ ಆದ ಫೋಟೋ ಬಗ್ಗೆ ನಿಖಿಲ್ ಹೇಳಿದ್ದೇನು..?

---Advertisement---

ದೇವನಹಳ್ಳಿ: ಸೋಷಿಯಲ್ ಮೀಡಿಯಾದಲ್ಲಿ ಹೀಗೆ ಸ್ಕ್ರಾಲ್ ಮಾಡುವಾಗ ನಿನ್ನೆ ಒಂದಷ್ಟು ಮಂದಿಯ ಗಮನಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಫೋಟೋ ಕಣ್ಣಿಗೆ ಬಿದ್ದಿರುತ್ತೆ. ಆ ಫೋಟೋದಲ್ಲಿ ಕುಮಾರಸ್ವಾಮಿ ಅವರು ತೀರಾ ಸಣ್ಣಗೆ ಆಗಿದ್ದರು. ನೋಡುಗರಿಗೇನೆ ಬೇಸರವೆನಿಸಿತ್ತು. ಆ ಫೋಟೋ ಜೊತೆಗೆ, ಅಧಿಕಾರಕ್ಕಿಂತ ಆರೋಗ್ಯ ಮುಖ್ಯ ಎಂಬಂತೆ ಬರೆಯಲಾಗಿತ್ತು. ಇದನ್ನ ಕಂಡ ಕುಮಾರಣ್ಣನ ಅಭಿಮಾನಿಗಳು ನೊಂದುಕೊಂಡಿದ್ದಾರೆ. ಇದೀಗ ಅವರ ಪುತ್ರ ನಿಖಿಲ್ ಕುಮಾರ್ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಕುಮಾರಣ್ಣನ ಆರೋಗ್ಯ ಸರಿ ಇಲ್ಲ ಅಂತ ರಾಜ್ಯದೆಲ್ಲೆಡೆ ಚರ್ಚೆಗಳು ಶುರುವಾಗಿದೆ. ಅವರ ತಂದೆ, ತಾಯಿ ಆಶೀರ್ವಾದ, ಭಗವಂತನ ಕೃಪೆ, ನಿಮ್ಮೆಲ್ಲರ ಪ್ರೀತಿಯ ಹಾರೈಕೆಯಿಂದ ಕುಮಾರಣ್ಣ ಆರೋಗ್ಯವಾಗಿದ್ದಾರೆ. ಯಾವುದೇ ಸಮಸ್ಯೆ ಇಲ್ಲ. ಯಾರೂ ಕೂಎ ಆತಂಕ ಪಡುವ ಅಗತ್ಯವಿಲ್ಲ. ಇತ್ತೀಚೆಗೆ ಮಾಧ್ಯಮಗಳು ಮತ್ತು ಕಾರ್ಯಕರ್ತರು ಕುಮಾರಣ್ಣನ ಆರೋಗ್ಯದಲ್ಲಿ ಏರುಪೇರಾಗಿದೆ ಅಂತ ಕೇಳುತ್ತಾ ಇದ್ದರು. ಹೀಗಾಗಿ ನಾನು 80 ಕ್ಷೇತ್ರಗಳಲ್ಲಿ ಸುತ್ತಾಡಿ ಅವರ ಜವಾಬ್ದಾರಿಯನ್ನು ಹೊರುತ್ತಿದ್ದೇನೆ.

ಪ್ರತಿದಿನವೂ ದೇವರಲ್ಲಿ ನನ್ನ ಆಯಸ್ಸನ್ನು ನನ್ನ ತಂದೆಗೆ ಕೊಡು ದೇವರೆ ಎಂದು ಕೇಳಿಕೊಳ್ಳುತ್ತಿದ್ದೇನೆ. ನಾನು ಕೇವಲ ಮಗನಾಗಿ ಈ ಮಾತನ್ನ ಹೇಳ್ತಿಲ್ಲ. ಕುಮಾರಣ್ಣನ ಆರೋಗ್ಯದಲ್ಲಿ ಸಣ್ಣಪುಟ್ಟ ಏರುಪೇರಾಗಿದೆ. ಆದರೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಮತ್ತೆ ಅವರು ಚೇತರಿಕೆ ಕಾಣುತ್ತಿದ್ದಾರೆ. ಶೀಘ್ರದಲ್ಲಿಯೇ ಸಂಪೂರ್ಣ ಗುಣಮುಖರಾಗುತ್ತಾರೆ. ದೇವೇಗೌಡರು, ಕುಮಾರಣ್ಣ ಇಬ್ಬರು ಸಹ ಶತಾಯುಷಿಗಳಾಗುತ್ತಾರೆ ಎಂಬ ನಂಬಿಕೆ ಇದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ ನಿಖಿಲ್ ಕುಮಾರಸ್ವಾಮಿ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment