ಬೆಂಗಳೂರು: ಕೊರೊನಾ ಕಂಟ್ರೋಲ್ ಮಾಡಲು ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಮೊರೆ ಹೋಗಿತ್ತು. ಆದ್ರೆ ಇದೀಗ ವೀಕೆಂಡ್ ಕರ್ಫ್ಯೂ ರದ್ದು ಮಾಡಿದೆ ಎನ್ನಲಾಗಿದೆ.
ವೀಕೆಂಡ್ ಕರ್ಫ್ಯೂ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ವ್ಯಾಪಾರಿಗಳು, ಹೊಟೇಲ್ ಮಾಲೀಕರೆಲ್ಲ ಕರ್ಫ್ಯೂ ಗೆ ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಇಂದು ತಜ್ಞರು, ಅಧಿಕಾರಿಗಳ ಜೊತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಭೆ ನಡೆಸುತ್ತಿದ್ದಾರೆ.
ಸಭೆಯಲ್ಲಿ ವಿಕೇಂಡ್ ಕರ್ಫ್ಯೂ ತೆಗೆಯುವ ಬಗ್ಗೆ ನಿರ್ಧಾರ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನೈಟ್ ಕರ್ಫ್ಯೂ ಮಾತ್ರ ಮುಂದುವರೆಸೋಣಾ. ವೀಕೆಂಡ್ ಕರ್ಫ್ಯೂ ಬೇಡ ಎಂಬ ನಿರ್ಧಾರಕ್ಕೆ ಬರಲಾಗಿದೆ ಎನ್ನಲಾಗಿದೆ. ಕಠಿಣ ಕ್ರಮದೊಂದಿಗೆ ವೀಕೆಂಡ್ ಕರ್ಫ್ಯೂ ರದ್ದು ಮಾಡಲು ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.
ಒಟ್ಟಾರೆ ಕಳೆದ ಎರಡು ವರ್ಷದಿಂದ ಕೊರೊನಾ ಕೊಟ್ಟ ಸಂಕಷ್ಟ ಅಷ್ಟಿಷ್ಟಲ್ಲ. ಕೊರೊನಾದಿಂದ ಅದೆಷ್ಟೋ ಜನ ಕೆಲಸ ಕಳೆದುಕೊಂಡ್ರು, ಅದೆಷ್ಟೋ ವ್ಯಾಪಾರಿಗಳು ನಷ್ಟ ಅನುಭವಿಸಿದ್ರು. ಈಗ ಎಲ್ಲವೂ ತಹಬದಿಗೆ ಬರ್ತಾ ಇದೆ ಎನ್ನುವಾಗ್ಲೇ ಮತ್ತೇ ವೀಕೆಂಡ್ ಕರ್ಫ್ಯೂ ಅಂದ್ರೆ ಜನ ಮತ್ತೆ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇತ್ತು. ಹೀಗಾಗಿ ಜನರ ಮನವಿಗೆ ಸರ್ಕಾರ ಸ್ಪಂದಿಸಿದೆ ಎಂದೇ ಹೇಳಲಾಗುತ್ತಿದೆ.