ಸುದ್ದಿಒನ್,ಹುಬ್ಬಳ್ಳಿ,ಮೇ08:ಕರ್ನಾಟಕ ರಾಜಕಾರಣದಲ್ಲಿ ಸಚಿವ ಸಂಪುಟ ಪುನರ್ರಚನೆಯ ಕುರಿತಾದ ಚರ್ಚೆಗಳು ಮತ್ತೊಮ್ಮೆ ಕಾವೇರಿವೆ. ರಾಜ್ಯ ಸಚಿವ ಸಂಪುಟದಲ್ಲಿ ಶೀಘ್ರದಲ್ಲೇ ಮಹತ್ವದ ಬದಲಾವಣೆಗಳಾಗಲಿವೆ ಎಂದು ಕಾಂಗ್ರೆಸ್ ಮುಖ್ಯ ಸಚೇತಕ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಅವರು ಶನಿವಾರ ಇಲ್ಲಿ ಮಹತ್ವದ ಸುಳಿವು ನೀಡಿದ್ದಾರೆ.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತಕ್ಕೆ ಹೊಸ ಚೈತನ್ಯ ನೀಡುವ ನಿಟ್ಟಿನಲ್ಲಿ ಸಂಪುಟ ಪುನರ್ರಚನೆಯ ಪ್ರಕ್ರಿಯೆ ಚಾಲನೆಯಲ್ಲಿದೆ.ಸಂಪುಟ ಪುನರ್ರಚನೆಯು ಕೇವಲ ರಾಜ್ಯ ಮಟ್ಟದ ತೀರ್ಮಾನವಲ್ಲ, ಇದು ಹೈಕಮಾಂಡ್ ಮೇಲೆ ಅವಲಂಬಿತವಾಗಿದೆ ಎಂದು ತಿಳಿಸಿದರು.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶೀಘ್ರದಲ್ಲೇ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.ದೆಹಲಿ ಭೇಟಿಯ ನಂತರವಷ್ಟೇ ಯಾರನ್ನು ಕೈಬಿಡಬೇಕು ಮತ್ತು ಯಾರನ್ನು ಸೇರಿಸಿಕೊಳ್ಳಬೇಕು ಎಂಬ ಬಗ್ಗೆ ಅಂತಿಮ ಪಟ್ಟಿ ಸಿದ್ಧವಾಗಲಿದೆ ಎಂದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











