ಕಾವೇರಿಗಾಗಿ ಇಂದು ಬೆಂಗಳೂರು ಬಂದ್ ಮಾಡಲಾಗಿದೆ. ಆದರೆ ಬಂದ್ ನಡೆಸುತ್ತಿದ್ದವರನ್ನು ಬಂಧಿಸಲಾಗಿದೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಇದೆಂಥಾ ಚೋದ್ಯ? ಒಂದು ಕಡೆ ಮೇಕೆದಾಟು ಬೇಕು ಎಂದು ಪಾದಯಾತ್ರೆ ಮಾಡಿದವರು, ಇಂದು ಕಾವೇರಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ ರೈತರನ್ನು, ಹೋರಾಟಗಾರರನ್ನು ಬಂಧಿಸಿದ್ದಾರೆ. ರಾತ್ರೋರಾತ್ರಿ ಹೋರಾಟಗಾರರನ್ನು ಬಂಧಿಸಿರುವುದು @INCKarnataka ಸರಕಾರದ ಕಿಡಿಗೇಡಿತನದ ಪರಮಾವಧಿ. ಕರ್ನಾಟಕದಲ್ಲಿ ಕಾಂಗ್ರೆಸ್ಸಿಗರಿಗೆ ಒಂದು ನ್ಯಾಯ, ಕನ್ನಡಿಗರಿಗೆ ಇನ್ನೊಂದು ನ್ಯಾಯ ಎನ್ನುವುದು ಇದೆಯಾ?.
ಕೋವಿಡ್ ನಿಯಮ ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಮಾಡಬಹುದಾದರೆ, ನಾಡಿನ ಜೀವನಾಡಿ ಕಾವೇರಿಗಾಗಿ ಕನ್ನಡಿಗರು ಪ್ರತಿಭಟನೆ ನಡೆಸಬಾರದೇ? ಶಾಂತವಾಗಿ ಹೋರಾಟ ನಡೆಸುತ್ತಿದ್ದ ರೈತರು, ಹೋರಾಟಗರನ್ನು ಬಂಧಿಸಿರುವುದು ಖಂಡನೀಯ.
ಇದೇನು ಕನ್ನಡಿಗರ ಸರಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರಕಾರವೋ? ಇಷ್ಟಕ್ಕೂ ಕನ್ನಡಿಗರು ಮತ ಹಾಕಿದ್ದು ಯಾರಿಗೆ?.
ಹೋರಾಟಗಾರರು, ರೈತರನ್ನು ಕೂಡಲೇ ಬಂಧಮುಕ್ತಗೊಳಿಸಬೇಕು. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಬೇಕು. ಕಾಂಗ್ರೆಸ್ ಪಕ್ಷವು ಡಿಎಂಕೆ ಪಕ್ಷದ ಬಿ ಟೀಂ ಆಗಿ ಪರಿವರ್ತನೆ ಆದ ಪರಿಣಾಮವೇ ಈ ಕಾವೇರಿ ಬಿಕ್ಕಟ್ಟು ಎನ್ನುವುದು ಕನ್ನಡಿಗರಿಗೆ ಈಗ ಸ್ಪಷ್ಟವಾಗಿ ಅರ್ಥವಾಗಿದೆ.
#ಬೆಂಗಳೂರು_ಬಂದ್ #ಕಾವೇರಿ_ನಮ್ಮದು ಎಂದು ಟ್ವೀಟ್ ಮಾಡಿದ್ದಾರೆ.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…