Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಿಮ್ಮ ಬಿಪಿಎಲ್ ಕಾರ್ಡ್ ಕೂಡ ರದ್ದಾಗಿದ್ಯಾ..? ಹಾಗಾದ್ರೆ ಸರಿಯಾಗಲು ಹೀಗೆ ಮಾಡಿ

---Advertisement---

ಬೆಂಗಳೂರು: ನಕಲಿ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡ್ತೀವಿ ಎಂದು ಸರ್ಕಾರ ಹೇಳಿತ್ತು. ಆದ್ರೆ ಅನರ್ಹರ ಜೊತೆಗೆ ಅರ್ಹರ ಬಿಪಿಎಲ್ ಕಾರ್ಡ್ ಕೂಡ ರದ್ದಾಗಿದೆ. ಇದರಿಂದ ಸಾಕಷ್ಟು ಜನ ನಿಂದಿದ್ದಾರೆ. ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಿದ್ರೆ ಅವುಗಳನ್ನು ಹಿಂತಿರುಗಿಸುವುದಾಗಿ ಸರ್ಕಾರ ಹೇಳಿದೆ. ಹೀಗಾಗಿ ಬಡವರ ಬಿಪಿಎಲ್ ಕಾರ್ಡ್ ರದ್ದಾಗಿದ್ರೆ ಹೀಗೆ ಮಾಡಿ ವಾಪಾಸ್ ಬರುತ್ತೆ.

‘ಒಂದು ವೇಳೆ ಬಿಪಿಎಲ್‌ ಕಾರ್ಡ್‌ ವಿಚಾರದಲ್ಲಿ ಬಡವರಿಗೆ ತೊಂದರೆಯಾದಲ್ಲಿ ತಹಶೀಲ್ದಾರ್‌ ಗಮನಕ್ಕೆ ತಂದರೆ ಒಂದು ವಾರದೊಳಗಾಗಿ ಸಮಸ್ಯೆ ಬಗೆಹರಿಸಲಾಗುವುದು. ಅರ್ಹರಿಗೆ ಬಿಪಿಎಲ್‌ ತಪ್ಪಿ ಹೋಗಬಾರದು. ಆಕಸ್ಮಾತ್‌ ತಪ್ಪಿ ಹೋಗಿದ್ದರೆ ವಾಪಸ್‌ ಕೊಡಲಾಗುವುದು. ಹಾಗೆಯೇ ಪಡಿತರ ಚೀಟಿ ಇಲ್ಲವೆಂದು ಆರೋಗ್ಯ ಸೌಲಭ್ಯ ವಿಚಾರದಲ್ಲಿ ಯಾವುದೇ ತೊಂದರೆ ಆಗುವುದಿಲ್ಲ’ ಎಂದು ಆಹಾರ ಸಚಿವರಾದ ಕೆ.ಎಚ್‌.ಮುನಿಯಪ್ಪ ಅವರು ತಿಳಿಸಿದ್ದಾರೆ.

ಒಂದು ವೇಳೆ ನಿಮ್ಮ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ, ಬಡತನ ರೇಖೆಗಿಂತ ಕೆಳಗೆ ಬರುವವರು ಆಗಿದ್ದರೆ, ತಹಶಿಲ್ದಾರರ ಗಮನಕ್ಕೆ ತರುವುದು ಉತ್ತಮ. ಆಗಲೂ ನಿಮ್ಮ ಬಿಪಿಎಲ್ ಕಾರ್ಡ್ ವಾಪಾಸ್ ಸಿಗಲಿದೆ. ಬಡವರಿಗೆ ಬಿಪಿಎಲ್ ಕಾರ್ಡ್ ನಿಂದ ಸಾಕಷ್ಟು ಅನುಕೂಲವಿದೆ. ಸರ್ಕಾರದಿಂದ ಸಿಗುವ ಅಕ್ಕು ಸಿಗಕಿದೆ, ಸರ್ಕಾರಿ ಆಸ್ಪತ್ರೆಯಲ್ಲಿ ಹಕವು ಸೌಲಭ್ಯಗಳು ಸಿಗಲಿದೆ. ಹೀಗಾಗಿ ಬಿಪಿಎಲ್ ಕಾರ್ಡ್ ಬಡವರಿಗೆ ತುಂಬಾನೇ ಅನುಕೂಲವಾಗಲಿದೆ. ಆದ್ರೆ ಬಿಪಿಎಲ್ ಕಾರ್ಡನ್ನ ಶ್ರೀಮಂತ ವ್ಯಕ್ತಿಗಳು ಸಹ ಹೊಂದಿದ್ದಾರೆ ಎಂಬ ವಿಚಾರ ಹಳ್ಳಿ ಹಳ್ಳಿಗಳಲ್ಲಿದೆ. ಈ ಬಾರಿ ಸುಳ್ಳು ದಾಖಲೆ ಕೊಟ್ಟು ಬಿಪಿಎಲ್ ಪಡೆದವರ ಬಿಪಿಎಲ್ ಕಾರ್ಡ್ ರದ್ದು ಮಾಡುತ್ತೇವೆ ಎಂದಿದ್ದ ಸರ್ಕಾರ ಬಡವರ ಕಾರ್ಡನ್ನು ರದ್ದು ಮಾಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment