ಹೊಸ ವರ್ಷದ ಸಂಭ್ರಮಾಚರಣೆ : ಸಚಿವ ಸುಧಾಕರ್ ಹೇಳಿದ್ದೇನು ? 

suddionenews
1 Min Read

ಬೆಂಗಳೂರು : ಕೆಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ಹೊಸ ವರ್ಷದ ಮೊದಲು ಮಾಸ್ಕ್ ಬಳಕೆಯನ್ನು ಕಡ್ಡಾಯಗೊಳಿಸಿದೆ.

ಈ ಕುರಿತು ಮಾಹಿತಿ ನೀಡಿರುವ ಆರೋಗ್ಯ ಸಚಿವ ಕೆ ಸುಧಾಕರ್, ಚಿತ್ರಮಂದಿರಗಳು, ಶಾಲಾ-ಕಾಲೇಜುಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಪಬ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಬಾರ್‌ಗಳಲ್ಲಿ ಹೊಸ ವರ್ಷವನ್ನು ಆಚರಿಸಲು ಮಾಸ್ಕ್  ಕಡ್ಡಾಯವಾಗಿರುತ್ತದೆ. ಹೊಸ ವರ್ಷದ ಆಚರಣೆಗಳು ಮಧ್ಯ ರಾತ್ರಿ 1 ಗಂಟೆಯ ಮೊದಲು ಮುಕ್ತಾಯಗೊಳ್ಳಬೇಕು. ಯಾರೂ ಭಯಪಡುವ ಅಗತ್ಯವಿಲ್ಲ, ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದರು.

ಇದಕ್ಕೂ ಮುನ್ನ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಾಮಾನ್ಯ ಜೀವನ ಮತ್ತು ಆರ್ಥಿಕ ಚಟುವಟಿಕೆಗಳಿಗೆ ಅಡ್ಡಿಯಾಗದಂತೆ ಸರ್ಕಾರವು ಹಂತ ಹಂತವಾಗಿ ತಡೆಗಟ್ಟುವ ಕ್ರಮಗಳನ್ನು ಜಾರಿಗೆ ತರುತ್ತದೆ. “ಪ್ರಸ್ತುತ ಕೋವಿಡ್ ಪರಿಸ್ಥಿತಿಯನ್ನು ಇಂದು  ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು. ಬೂಸ್ಟರ್ ಡೋಸ್ ಹೆಚ್ಚಳ, ಪರೀಕ್ಷೆ, ಇನ್ಫ್ಲುಯೆನ್ಸ ತರಹದ ಅನಾರೋಗ್ಯ (ಐಎಲ್ಐ) ಮತ್ತು ತೀವ್ರ ಉಸಿರಾಟದ ಕಾಯಿಲೆ (ಎಸ್ಎಆರ್ಐ) ಪ್ರಕರಣಗಳಿಗೆ ಪರೀಕ್ಷೆಯನ್ನು ಕಡ್ಡಾಯಗೊಳಿಸುವ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಗತ್ಯತೆಯ ಬಗ್ಗೆ ಚರ್ಚಿಸಲಾಯಿತು.

Share This Article
Leave a Comment

Leave a Reply

Your email address will not be published. Required fields are marked *