Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

SM ಕೃಷ್ಣ ಸಹೋದರಿ ಮನೆ ಮೇಲೂ ಐಟಿ ದಾಳಿ..!

Facebook
Twitter
Telegram
WhatsApp

 

ಬೆಂಗಳೂರು: ಅಕ್ರಮ ಹಣ ಸಾಗಾಟದ ಮೇಲೆ ಹದ್ದಿನ ಕಣ್ಣಿಟ್ಟಿರುವ ಚುನಾವಣಾ‌ ಅಧಿಕಾರಿಗಳ ಕಣ್ಣಿಗೆ ಆಗಾಗ ಕೋಟ್ಯಾಂತರ ರೂಪಾಯಿ ಹಣ ಬೀಳುತ್ತಲೇ ಇದೆ. ಅಲ್ಲಿ ಇಲ್ಲಿ ಆಗಾಗ ದಾಳಿ ಯಾಗಿ ಹಣ ಸಿಕ್ಕಿ ಬೀಳುತ್ತಿದೆ. ಇದೀಗ ಐಟಿ ಅಧಿಕಾರಿಗಳು ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಸಹೋದರಿ ಮನೆ ಮೇಲೂ ದಾಳಿ ನಡೆಸಿದ್ದಾರೆ. ಮಹತ್ತರವಾದ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಎಸ್ ಎಂ ಕೃಷ್ಣ ಅವರ ಸಹೋದರಿ ಎಸ್ ಎಂ ಸುನೀತಾ ಅವರು ಬೆಂಗಳೂರಿನಲ್ಲೇ ವಾಸವಾಗಿದ್ದಾರೆ. ಕೋರಮಂಗಲದಲ್ಲಿ ಅವರ ಮನೆ ಇದ್ದು, ಐಟಿ ಅಧಿಕಾರಿಗಳು ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಬಾಗ್ಮನೆ ಹೆಸರಿನಲ್ಲಿರುವ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳ ದಾಳಿ ನಡೆದಿದೆ. ಸುಮಾರು ಎಂಟು ಅಧಿಕಾರಿಗಳ ತಂಡದಿಂದ ಈ ದಾಳಿ ನಡೆದಿದೆ. ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದು, ಸದ್ಯ ಪರಿಶೀಲನೆ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಚುನಾವಣೆ ಇರುವ ಕಾರಣ, ಹಣ ಸಾಗಾಟ ಸೇರಿದಂತೆ ಇತ್ಯಾದಿ ಇತ್ಯಾದಿ ಮೇಲೆ ಅಧಿಕಾರಿಗಳು ಕಣ್ಣಿಟ್ಟಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!