Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ನೌಕರರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ದುರಂತ, ಸರ್ಕಾರ ನೌಕರರ ಹಿತ ಕಾಪಾಡಲಿ : ಕೆ. ಮಂಜುನಾಥ

---Advertisement---

 

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.19 : ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರು ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಹೆಚ್ಚುವರಿ ಕಾರ್ಯಭಾರವನ್ನು ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ಮೇಲೆ ಏರುತ್ತಿರುವುದರಿಂದ ಮೇಲಾಧಿಕಾರಿಗಳ, ಜನಪ್ರತಿನಿಧಿಗಳ ಒತ್ತಡ ಸಾರ್ವಜನಿಕರಿಗೆ ಸೇವೆಗಳನ್ನು ಒದಗಿಸಲಾಗದೆ ದಿನನಿತ್ಯ ಸಾರ್ವಜನಿಕರ ಆರೋಪ, ನಿಂದನೆಗಳನ್ನು ಸಹಿಸಲಾಗದೆ ನೌಕರರು ನೊಂದು ಆತ್ಮಹತ್ಯೆಯ ದಾರಿ ಹಿಡಿಯುತ್ತಿರುವುದು ದುರಂತವಾಗಿದೆ ಎಂದು ಚಿತ್ರದುರ್ಗ ಸರ್ಕಾರಿ ನೌಕರರ ಸಂಘದ ನಿಕಟ ಪೂರ್ವ ಅಧ್ಯಕ್ಷ ಕೆ. ಮಂಜುನಾಥ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರಗಳು ಸರ್ಕಾರದ ಅಂಗವಾಗಿ ಕೆಲಸ ನಿರ್ವಹಿಸುತ್ತಿರುವ ಸರ್ಕಾರಿ ನೌಕರರ ಕಾರ್ಯಭಾರವನ್ನು ಕಮ್ಮಿ ಮಾಡಲು ಆದಷ್ಟು ಬೇಗ  ಇಲಾಖೆಗಳಲ್ಲಿ ಖಾಲಿ ಉಳಿದಿರುವ 259000 ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ಹಿತ ಕಾಪಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.

ರಾಜ್ಯ ಸರ್ಕಾರದ ಅಧೀನದಲ್ಲಿ ಬರುವ 72 ಇಲಾಖೆಗಳ ಮಾತೃ ಇಲಾಖೆಯಾದ ಕಂದಾಯ ಇಲಾಖೆಯ ನೌಕರರಾದ ಗುರುಲಿಂಗಪ್ಪ ಅವರ ಕುಟುಂಬದ ವರ್ಗದವರಿಗೆ ದುಃಖವನ್ನು ಬರಿಸುವಂತಹ ಶಕ್ತಿ ಭಗವಂತ ನೀಡಲಿ ಹಾಗೂ ಸರ್ಕಾರ ಈ ಕೂಡಲೇ 50 ಲಕ್ಷಗಳ ಪರಿಹಾರವನ್ನು ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment