Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗೋವಿಂದ ಕಾರಜೋಳರವರು ಕೇಂದ್ರ ಸಚಿವರಾಗುವುದು ನಿಶ್ಚಿತ : ಬಿ.ಕಾಂತರಾಜ್

---Advertisement---

 

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 22 : ಸತ್ಯವನ್ನು ಮರೆಮಾಚಿ ಸುಳ್ಳಿನ ಮೇಲೆ ಆಡಳಿತ ನಡೆಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಹಿನ್ನೆಡೆಯಾಗಲಿದೆ ಎಂದು ಜೆಡಿಎಸ್. ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ. ಅಭ್ಯರ್ಥಿ ಗೋವಿಂದ ಕಾರಜೋಳರವರ ಗೆಲುವಿಗೆ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮ ಕಾರ್ಯಕರ್ತರು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದಾರೆ.

 

ಮಧ್ಯಕರ್ನಾಟಕದ ಬಯಲುಸೀಮೆ ಚಿತ್ರದುರ್ಗ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದೆ. ಮದಕರಿನಾಯಕ ಥೀಂ ಪಾರ್ಕ್ ಆಗಬೇಕೆಂಬುದು ನಮ್ಮ ಪ್ರಮುಖ ಬೇಡಿಕೆ. ಅಪ್ಪರ್‍ಭದ್ರಾ ಯೋಜನೆಗೆ ಈಗಾಗಲೆ ಕೇಂದ್ರ ಸರ್ಕಾರ ಐದು ಸಾವಿರದ ಮುನ್ನೂರು ಕೋಟಿ ರೂ.ಗಳನ್ನು ಘೋಷಿಸಿದೆ. ನರೇಂದ್ರಮೋದಿ ಮೂರನೆ ಬಾರಿಗೆ ದೇಶದ ಪ್ರಧಾನಿಯಾಗುವುದು ಖಚಿತ. ಜೊತೆಗೆ ಗೋವಿಂದ ಕಾರಜೋಳರವರು ಕೇಂದ್ರ ಮಂತ್ರಿಯಾಗುವುದು ನಿಶ್ಚಿತ. ಹೀಗಾಗಿ ಕ್ಷೇತ್ರಾದ್ಯಂತ ಸಂಚರಿಸಿ ಕಾರ್ಯಕರ್ತರ ಜೊತೆ ಮಾತುಕತೆ ನಡೆಸಿದ್ದೇನೆಂದು ಹೇಳಿದರು.

ಜೆಡಿಎಸ್. ತಾಲ್ಲೂಕು ಅಧ್ಯಕ್ಷ ತಿಮ್ಮಣ್ಣ, ಜಿಲ್ಲಾ ಉಪಾಧ್ಯಕ್ಷ ಜೆ.ಎನ್.ಕೋಟೆ ಗುರುಸಿದ್ದಪ್ಪ, ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ಮಠದಹಟ್ಟಿ ವೀರಣ್ಣ, ಯುವ ಘಟಕದ ಜಿಲ್ಲಾಧ್ಯಕ್ಷ ಪ್ರತಾಪ್‍ಜೋಗಿ ಪತ್ರಿಕಾಗೋಷ್ಠಿಯಲ್ಲಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment