Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಕ್ತ ಕೊಟ್ಟು ಜೀವ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ : ಡಾ. ರವೀಂದ್ರನಾಥ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.02  : ರಕ್ತಹೀನತೆಯಿಂದ ಬಳಲುತ್ತಿರುವವರಿಗೆ ರಕ್ತ ಕೊಟ್ಟು ಜೀವ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ. ರವೀಂದ್ರನಾಥ್ ಹೇಳಿದರು.

ಕರ್ನಾಟಕ ರಾಜ್ಯ ಮಾದಿಗ ಸಮಾಜದ ವತಿಯಿಂದ ಐ.ಎಂ.ಎ.ಹಾಲ್‍ನಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಎರಡನೆ ವರ್ಷದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ರಕ್ತದಾನ ಮಹಾದಾನ. ರಕ್ತಕ್ಕೆ ಪರ್ಯಾಯ ಬೇರೆ ಯಾವುದೂ ಇಲ್ಲ. ಅಪಘಾತ, ಹೆರಿಗೆ, ಆಪರೇಷನ್ ಇನ್ನು ಅನೇಕ ತುರ್ತು ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆಯಿರುತ್ತದೆ. ಹಾಗಾಗಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿರುವವರಿಗೆ ರಕ್ತ ನೀಡಿ ಅಮೂಲ್ಯವಾದ ಪ್ರಾಣ ಉಳಿಸುವಂತೆ ಸಾರ್ವಜನಿಕರಲ್ಲಿ ವಿನಂತಿಸಿದರು.

ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಆಯಕ್ತರಾದ ಸೋಮಶೇಖರ್, ಭ್ರಷ್ಠಾಚಾರ ವಿರೋಧಿ ಆಂದೋಲನ ರಾಜ್ಯಾಧ್ಯಕ್ಷ ಹನುಮಂತಪ್ಪ ದುರ್ಗ, ಕರ್ನಾಟಕ ರಾಜ್ಯ ಮಾದಿಗ ಸಮಾಜ ಜಿಲ್ಲಾ ಘಟಕದ ಗೌರವಾಧ್ಯಕ್ಷ ದೇವರಾಜ್, ಅಧ್ಯಕ್ಷ ಟಿ.ಶೇಖರಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓ.ಸೋಮಪ್ಪ ಹಾಗೂ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

ಭಾಷಣದಲ್ಲಿ ಯಡವಟ್ಟು : ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಕುಮಾರಸ್ವಾಮಿ ದೂರು.. ಎಫ್ಐಆರ್ ದಾಖಲು..!

ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣಾ ಕ್ಷೇತ್ರಕ್ಕೆ ಬಿಜೆಪಿ ಅದ್ಯಾವಾಗ ಮತ್ತೆ ಪ್ರಹ್ಲಾದ್ ಜೋಶಿ ಅವರಿಗೇನೆ ಟಿಕೆಟ್ ಕೊಟ್ಟಿತೇ ಅಂದಿನಿಂದಾನೇ ದಿಂಗಾಲೇಶ್ವರ ಸ್ವಾಮೀಜಿಗೆ ಬೇಸರ ಉಂಟಾಗಿತ್ತು. ಅಭ್ಯರ್ಥಿಯನ್ನು ಬದಲಾಯಿಸಿ ಎಂದು ಮನವಿ ಕೂಡ ಅಭ್ಯರ್ಥಿಯ ಬದಲಾವಣೆ

error: Content is protected !!