ಸುದ್ದಿಒನ್, ಚಿತ್ರದುರ್ಗ, ಜುಲೈ. 12 : ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಇಂದಿನ ಸಮಾಜದಲ್ಲಿ ಸ್ಪರ್ಧಾತ್ಮಕ ಯುಗಕ್ಕೆ ಹೊಂದಿಕೊಳ್ಳುವುದು ಅನಿವಾರ್ಯವಾಗಿದೆ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದರು.
ನಗರದ ಪಿಳೇಕೆರನಹಳ್ಳಿಯಲ್ಲಿ ಶುಕ್ರವಾರ ಬಾಪೂಜಿ ಸಮೂಹ ಸಂಸ್ಥೆಯ ಕೆ.ಎಂ.ಎಸ್ ಪ್ರಥಮ ದರ್ಜೆ ಕಾಲೇಜು ಆಯೋಜಿಸಿದ್ದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಿಕ್ಷಣದೊಂದಿಗೆ ವಿದ್ಯಾರ್ಥಿಗಳು ಸಾಮಾಜಿಕ ಬದ್ಧತೆ ಹೊಂದಬೇಕು. ಜೀವನಕ್ಕಾಗಿ ಇತರ ಕೌಶಲ್ಯಗಳನ್ನು ಕಲಿತು ಸಮಾಜದಲ್ಲಿ ತಮ್ಮ ಛಾಪು ಮೂಡಿಸಬೇಕು. ಈ ಕಾಲೇಜಿನಲ್ಲಿ ಎಲ್ಲಾ ಸಮಾಜದ ವಿದ್ಯಾರ್ಥಿಗಳಿಗೆ ಸಮಾನ ಶಿಕ್ಷಣ ನೀಡುತ್ತಾ ಬಂದಿದೆ ಎಂದರು.
ಬಾಪೂಜಿ ಶಿಕ್ಷಣ ಸಮೂಹ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ.ಕೆ.ಎಂ.ವೀರೇಶ್ ಮಾತನಾಡಿ, ಪದವಿ ಶಿಕ್ಷಣ ಮುಗಿದ ಬಳಿಕ ವಿದ್ಯಾರ್ಥಿಗಳು ಇನ್ನೂ ಹೆಚ್ಚಿನ ಶಿಕ್ಷಣ ಪಡೆದು ದೇಶಕ್ಕೆ ತಮ್ಮ ಸೇವೆ ನೀಡುವಂತಹ ಕಾರ್ಯದಲ್ಲಿ ತಮ್ಮನು ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ಬಾಪೂಜಿ ಸಮೂಹ ಸಂಸ್ಥೆಗಳ ನಿರ್ದೇಶಕ ಕೆ.ಎಂ. ಚೇತನ್, ಬಾಪೂಜಿ ಸಮೂಹ ಸಂಸ್ಥೆಗಳ ಸಹ ನಿರ್ದೇಶಕಿ ಮೇಘನ ಕೆ.ಎಂ. ಚೇತನ್, ಕೆ.ಎಂ.ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ಮಂಜುಳ.ಕೆ, ಕೆ.ಎಂ.ಎಸ್. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಿ.ಎನ್.ವೀರೇಶ್, ಬಜೆಪಿ ವಕ್ತಾರ ನಾಗರಾಜ ಬೆಂದ್ರೆ, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಇದ್ದರು.