Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಧಿಕಾರ ಇಲ್ಲ ಅಂತ ಕುಮಾರಸ್ವಾಮಿ ಹೀಗೆ ಆಡುವುದು ಶೋಭೆ ತರಲ್ಲ : ದಿನೇಶ್ ಗುಂಡೂರಾವ್

---Advertisement---

 ಪ್ರಭಾವಿ ಸಚಿವರೊಬ್ಬರು ಬಿಜೆಪಿಯ ಕದ ತಟ್ಟಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಈ ವಿಚಾರವಾಗಿ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ. ಕುಮಾರಸ್ವಾಮಿ ಅವರು ಅಧಿಕಾರ ಇಲ್ಲ ಅಂತ ಈ ರೀತಿ ಆಡುವುದು, ಅವರಿಗೇನೆ ಶೋಭೆ ತರಲ್ಲ ಎಂದಿದ್ದಾರೆ.

ಸುವರ್ಣಸೌಧದ ಬಳಿ ಈ ಬಗ್ಗೆ ಮಾತನಾಡಿದ್ದು, ಜೆಡಿಎಸ್ ಪಕ್ಷವನ್ನು ಜನ ಹೀನಾಯವಾಗಿ ಸೋಲಿಸಿದ್ದಾರೆ. ವಿರೋಧ ಪಕ್ಷದಲ್ಲಿ ಇದ್ದು, ಗೌರವಯುತವಾಗಿ ಜನರ ಸೇವೆ ಮಾಡಬೇಕು. ಜನ ಕಾಂಗ್ರೆಸ್ ಗೆ ಆಶೀರ್ವಾದ ಮಾಡಿದ್ದಾರೆ. ಅಧಿಕಾರ ಇಲ್ಲದೆ ಇರಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಈ ರೀತಿ ವರ್ತಿಸುವುದು ಸರಿಯಲ್ಲ. ಸರ್ಕಾರ ಪತನ ಮಾಡಬೇಕು ಎಂಬುದು ಅವರ ರಾಜಕಾರಣವಾದರೇ ಏನು ಹೇಳಬೇಕು. ಕಳೆದ ಚುನಾವಣೆಯಲ್ಲಿ ಏನಾಯಿತು ಎಂದು ತಿಳಿದುಕೊಂಡು ಹೆಜ್ಜೆ ಇಡಲಿ. ನಮ್ಮ ಸರ್ಕಾರ ಐದು ವರ್ಷ ಪೂರೈಸಲಿದೆ. ಜನರ ತೀರ್ಪು ಗೌರವಿಸಿ ಮುಂದೆ ನಡೆಯಬೇಕು ಎಂದಿದ್ದಾರೆ.

ವಿರೋಧ ಪಕ್ಷದ ಜವಬ್ದಾರಿಯನ್ನು ಅವರು ನಿಭಾಯಿಸಲಿ. ಯಾವುದೇ ಪಕ್ಷವಾದರೂ ಅದರಲ್ಲಿ ಸಣ್ಣ ಪುಟ್ಟ ಸಮಸ್ಯೆಗಳು ಇರಲಿವೆ. ಅದಕ್ಕೆ ಕಾದು, ಸರ್ಕಾರವನ್ನು ಬೀಳಿಸುವ ಉದ್ದೇಶದಿಂದ ಕಾದು ಕುಳಿತರೆ ಅದು ರಾಜಕಾರಣ ಅಷ್ಟೇನಾ..? ವಿರೋಧ ಪಕ್ಷದ ಜವಬ್ದಾರಿಯನ್ನು ಸರಿಯಾದ ರೀತಿಯಲ್ಲಿ ನಿಭಾಯಿಸಲಿ. ಅದನ್ನು ಬಿಟ್ಟು ಈ ರೀತಿಯಾಗಿ ಮಾಡುವುದು ಪ್ರಜಾಪ್ರಭುತ್ವಕ್ಕೇ ಶೋಭೆ ತರುವುದಿಲ್ಲ ಎಂದಿದ್ದಾರೆ. ಇದೇ ವೇಳೆ ಕುಮಾರಸ್ವಾಮಿ ಅವರು ಕಲ್ಲಡ್ಕ ಪ್ರಭಾಕರ್ ಅವರನ್ನು ಹೊಗಳಿದ ವಿಚಾರಕ್ಕೆ ಮಾತನಾಡಿ, ಅದು ಅವರ ವೈಯಕ್ತಿಕ ರಾಜಕಾರಣ. ಅನಿವಾರ್ಯವಾಗಿರಬಹುದು. ಶಕ್ತಿ ಕಡಿಮೆಯಾಗಿದೆ. ಹೆಚ್ಚು ಮಾಡಿಕೊಳ್ಳಲು ಈ ರೀತಿ ಹೇಳಿಕೆ ನೀಡಿರಬಹುದು ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment